ಶಿವಮೊಗ್ಗ ಲೈವ್.ಕಾಂ | SHIMOGA | 24 ಅಕ್ಟೋಬರ್ 2019
ಕೇಂದ್ರ ಸರ್ಕಾರದ ವಿರುದ್ಧ ಇವತ್ತು ಶಿವಮೊಗ್ಗದಲ್ಲಿ ರೈತರು ಬೀದಿಗಿಳಿದು ಹೋರಾಟ ನಡೆಸಿದರು. MRS ಸರ್ಕಲ್’ನಲ್ಲಿ ಧರಣಿ ನಡೆಸಿದ ರೈತರು, ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ ಒಪ್ಪಂದದ ವಿರುದ್ಧ ಘೋಷಣೆ ಕೂಗಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಶಿವಮೊಗ್ಗದ ರೈತ ಸಂಘ ಮತ್ತು ಹಸಿರು ಸೇವೆ ವತಿಯಿಂದ MRS ಸರ್ಕಲ್’ನಲ್ಲಿ ರಸ್ತೆ ತಡೆ ನಡೆಸಲಾಯಿತು. RCEP ಒಪ್ಪಂದದಿಂದಾಗಿ ರೈತರು ಮಾತ್ರವಲ್ಲ, ವ್ಯಾಪಾರಿಗಳು ಕೂಡ ಸಂಕಷ್ಟಕ್ಕೆ ಸಿಲುಕಲಿದ್ದಾರೆ. ಆದರೆ ಇದನ್ನು ಮರೆ ಮಾಚಲಾಗುತ್ತಿದೆ ಎಂದು ಪ್ರತಿಭಟನಾನಿರತರು ಆಕ್ರೋಶ ವ್ಯಕ್ತಪಡಿಸಿದರು.
ರೈತ ಸಂಘದ ಪ್ರಮುಖರಾದ ಕೆ.ಟಿ.ಗಂಗಾಧರ್, ಉಮಾಪತಿಯಪ್ಪ, ಸಂಗಪ್ಪ ಮಾಸ್ತರ್, ಜಯಪ್ಪಗೌಡ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಶಿಕಾರಿಪುರ ಮತ್ತು ಸೊರಬದ ರೈತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]