ಶಿವಮೊಗ್ಗ ಲೈವ್.ಕಾಂ | SHIMOGA | 31 ಅಕ್ಟೋಬರ್ 2019
ರೈತ ವಿರೋಧಿ ಆಗಿರುವ ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಕೇಂದ್ರ ಸರ್ಕಾರ ಸಹಿ ಹಾಕಬಾರದು ಎಂದು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
RCEP ಒಪ್ಪಂದಕ್ಕೆ ಕೇಂದ್ರ ಸರ್ಕಾರ ಸಹಿ ಹಾಕಿದರೆ ಹೈನುಗಾರಿಕೆ, ಆಹಾರ ಮತ್ತು ಕೃಷಿಯ ಕ್ಷೇತ್ರಕ್ಕೆ ದೊಡ್ಡ ಆತಂಕ ಎದುರಾಗುತ್ತದೆ. ರೈತ ವಿರೋಧಿ ಒಪ್ಪಂದಕ್ಕೆ ಸರ್ಕಾರ ಸಹಿ ಹಾಕಬಾರದು ಎಂದು ಒತ್ತಾಯಿಸಿದರು.
ಈ ಸಂಬಂಧ ಜಿಲ್ಲಾಧಿಕಾರಿ ಮೂಲಕ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು.
ರೈತ ಸಂಘದ ರಾಜ್ಯ ಗೌರವಾಧ್ಯಕ್ಷ ಹೆಚ್.ಆರ್.ಬಸವರಾಜಪ್ಪ, ಪ್ರಮುಖರಾದ ಕಡಿದಾಳು ಶಾಮಣ್ಣ, ಹಿಟ್ಟೂರು ರಾಜು, ಟಿ.ಎಂ.ಚಂದ್ರಪ್ಪ, ಡಾ.ಬಿ.ಎಂ.ಚಿಕ್ಕಸ್ವಾಮಿ, ಎನ್.ಕೆ.ಮಂಜುನಾಥಗೌಡ, ಕೆ.ರಾಘವೇಂದ್ರ, ಇ.ಬಿ.ಜಗದೀಶ್, ಶಿವಮೂರ್ತಿ, ಮಂಜಪ್ಪ, ರಾಮಚಂದ್ರಪ್ಪ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]