ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 25 ಸೆಪ್ಟಂಬರ್ 2020
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜನ ವಿರೋಧಿ ಸುಗ್ರೀವಾಜ್ಞೆ ಮತ್ತು ಮಸೂದೆಗಳನ್ನು ವಿರೋಧಿಸಿ ಶಿವಮೊಗ್ಗದಲ್ಲಿ ಇವತ್ತು ರೈತ ಸಂಘದ ವತಿಯಿಂದ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಯಿತು.
ಸಂಗೊಳ್ಳಿ ರಾಯಣ್ಣ ಸರ್ಕಲ್‍ನಲ್ಲಿ ಮೇಲ್ಸೇತುವೆ ಮುಂಭಾಗ ಶಿವಮೊಗ್ಗ – ಹೊನ್ನಾಳಿ ಹೆದ್ದಾರಿ ತಡೆದು ರೈತರು ಪ್ರತಿಭಟನೆ ನಡೆಸಿದರು. ಇದರಿಂದ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು.
https://www.facebook.com/liveshivamogga/videos/647663532829215/?t=19
ವಿವಿಧ ಸಂಘಟನೆಗಳ ಬೆಂಬಲ
ರೈತರ ಪ್ರತಭಟನೆಗೆ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿದ್ದವು. ಎಸ್‍ಡಿಪಿಐ, ದಲಿತ ಸಂಘರ್ಷ ಸಮಿತಿ, ಪ್ರಗತಿಪರ ಸಂಘಟನೆಗಳ ಮುಖಂಡರು ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದರು. ಈ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ರಸ್ತೆ ತಡೆಯಲ್ಲಿ ಭಾಗವಹಿಸಿದ್ದರು.
https://www.facebook.com/liveshivamogga/videos/330531894827904/?t=4
ಕೇಂದ್ರ, ರಾಜ್ಯದ ವಿರುದ್ಧ ಆಕ್ರೋಶ
ಇದೆ ವೇಳೆ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಮುಖರು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು, ರೈತರು, ಕಾರ್ಮಿಕರು ಮತ್ತು ಜನವಿರೋಧಿ ನಡೆ ಅನುಸರಿಸುತ್ತಿವೆ. ಸುಗ್ರೀವಾಜ್ಞೆಗಳ ಮೂಲಕ ಸಾಮಾನ್ಯರಿಗೆ ಸಂಕಷ್ಟ ತಂದೊಡ್ಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಿಗಿ ಪೊಲೀಸ್ ಬಂದೋಬಸ್ತ್
ರೈತರು ಹೆದ್ದಾರಿ ತಡೆ ಪ್ರತಿಭಟನೆ ಹಿನ್ನೆಲೆ ಶಿವಮೊಗ್ಗದ ಸಂಗೊಳ್ಳಿ ರಾಯಣ್ಣ ಸರ್ಕಲ್‍ನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422