ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 27 ಸೆಪ್ಟೆಂಬರ್ 2021
ಭಾರತ್ ಬಂದ್ ಹಿನ್ನೆಲೆ ಸಂಯುಕ್ತ ಕಿಸಾನ್ ಮೋರ್ಚಾ ವತಿಯಿಂದ ಶಿವಮೊಗ್ಗದಲ್ಲಿ ಇವತ್ತು ಪ್ರತಿಭಟನಾ ಮೆರವಣೆಗೆ ಆಯೋಜಿಸಾಗಿತ್ತು. ರೈತರು, ವಿವಿಧ ಸಂಘಟನೆಗಳ ಪ್ರಮುಖರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.
ರಾಮಣ್ಣಶ್ರೇಷ್ಠಿ ಪಾರ್ಕ್’ನಿಂದ ಮೆರವಣಿಗೆ ನಡೆಯಿತು. ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಶ್ರೀಕಾಂತ್ ಅವರು ಪ್ರತಿಭಟನಾ ಮೆರವಣಿಗೆಗೆ ಚಾಲನೆ ನೀಡಿದರು.
ಕೇಂದ್ರದ ವಿರುದ್ದ ಘೋಷಣೆ
ರೈತ ಸಂಘದ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಲಾಯಿತು. ರೈತ ವಿರೋಧಿಯಾಗಿರುವ ಕಾಯ್ದೆಗಳನ್ನು ಹಿಂಪಡೆಯಬೇಕು ಎಂಬ ಆಗ್ರಹಿಸಿದರು. ರಾಮಣ್ಣ ಶ್ರೇಷ್ಠಿ ಪಾರ್ಕ್, ಗಾಂಧಿ ಬಜಾರ್, ಅಮೀರ್ ಅಹಮದ್ ಸರ್ಕಲ್, ನೆಹರೂ ರೋಡ್, ಗೋಪಿ ಸರ್ಕಲ್, ಬಾಲರಾಜ್ ಅರಸ್ ರಸ್ತೆ ಮೂಲಕ ಮೆರವಣಿಗೆ ಸಾಗಿತು.

ಮಹಾವೀರ ಸರ್ಕಲ್’ನಲ್ಲಿ ಪ್ರತಿಭಟನಾ ಸಭೆ ಆಯೋಜಿಸಾಗಿತ್ತು. ರೈತರ ಸಂಘದ ಕಾರ್ಯಾಧ್ಯಕ್ಷ ಹೆಚ್.ಆರ್.ಬಸವರಾಜಪ್ಪ, ರೈತ ಮುಖಂಡ ಕೆ.ಟಿ.ಗಂಗಾಧರ್, ಪ್ರಮುಖರಾದ ಕೆ.ಎಲ್.ಅಶೋಕ್, ಕೆ.ಪಿ.ಶ್ರೀಪಾಲ್, ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರು, ವಿವಿಧ ಸಂಘಟನೆಗಳ ಪ್ರಮುಖರು, ಕಾರ್ಯಕರ್ತರು, ರೈತರು ಪ್ರತಿಭಟನಾ ಮೆರವಣಿಗೆಯಲ್ಲಿದ್ದರು.














(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200
LATEST NEWS
- ಶಿವಮೊಗ್ಗದಲ್ಲಿ ಬಂಜಾರ ಮುಖಂಡರು ಪೊಲೀಸ್ ವಶಕ್ಕೆ, ಸಭೀಕರಿಲ್ಲದೆ ನಡೆಯಿತು ಸೇವಾಲಾಲ್ ಜಯಂತಿ

- ಶಿವಮೊಗ್ಗದಲ್ಲಿ ಕೆಎಎಸ್ ಅಧಿಕಾರಿ ಸೇರಿ ಇಬ್ಬರು ಲೋಕಾಯುಕ್ತ ಬಲೆಗೆ, ಆಗಿದ್ದೇನು?

- ಬಿಳಕಿಯಲ್ಲಿ ಅಂಗನವಾಡಿ ಸಹಾಯಕಿ ಮೃತದೇಹ ಪತ್ತೆ

- ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆ, ಸ್ಥಳಕ್ಕೆ ತುಂಗಾ ನಗರ ಪೊಲೀಸರು ದೌಡು

- ಭದ್ರಾವತಿ ವ್ಯಕ್ತಿಗೆ 2 ವರ್ಷ ಜೈಲು, ₹10,000 ದಂಡ, ಕಾರಣ ಹೂವಿನ ಗಿಡ

About The Editor
ನಿತಿನ್ ಆರ್.ಕೈದೊಟ್ಲು






