SHIVAMOGGA LIVE NEWS
SHIMOGA | ರೈತರು, ಗ್ರಾಹಕ ವಿರೋಧಿ ವಿದ್ಯುತ್ ತಿದ್ದುಪಡಿ (ELECTRICITY BILL) ಮಸೂದೆಯನ್ನು ಜಾರಿಗೊಳಿಸಬಾರದು, ಅತಿವೃಷ್ಟಿ ಆಗಿರುವ ಹಾನಿಗೆ ಕೂಡಲೆ ಪರಿಹಾರ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯಾಧ್ಯಕ್ಷ ಹೆಚ್.ಆರ್.ಬಸವರಾಜಪ್ಪ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
ವಿದ್ಯುತ್ ವಿತರಣಾ ಕಂಪನಿಗಳನ್ನು ಖಾಸಗೀಕರಣ ಮಾಡುವ ಉದ್ದೇಶದಿಂದ ವಿದ್ಯುತ್ ತಿದ್ದುಪಡಿ ಮಸೂದೆಯ (ELECTRICITY BILL) ಪ್ರಮುಖ ಉದ್ದೇಶವಾಗಿದೆ. ಇದು ರೈತರು, ಗ್ರಾಹಕರಿಗೆ ಮರಣ ಶಾಸನವಾಗಲಿದೆ. ಕೂಲಿ ಕಾರ್ಮಿಕರು, ಕುಟೀರ ಜ್ಯೋತಿ, ಭಾಗ್ಯ ಜ್ಯೋತಿ, ಕೃಷಿ ಪಂಪ್ ಸೆಟ್, ಬೀದಿ ದೀಪ ಮುಂತಾದ ಕಡೆ ಉಚಿತವಾಗಿ ವಿದ್ಯುತ್ ಸಿಗುವುದಿಲ್ಲ. ಈ ಯೋಜನೆಗಳಿಗೆ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳುವ ಸಂಭವವಿದೆ. ಆದ್ದರಿಂದ ಈ ಮಸೂದೆಯನ್ನು ಯಾವುದೆ ಕಾರಣಕ್ಕೂ ಜಾರಿಗೊಳಿಸಬಾರದು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
3 ಸಾವಿರ ಕೋಟಿ ನಷ್ಟದ ಅಂದಾಜು
ಇನ್ನು, ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.40ರಷ್ಟು ಹೆಚ್ಚುವರಿ ಮಳೆಯಾಗಿದೆ. ಸುಮಾರು 150 ಜನು, ಸಾವಿರಾರು ಜಾನುವಾರುಗಳು, ಬೆಳೆ ನಷ್ಟ ಉಂಟಾಗಿದೆ. ರೈತರಿಗೆ ಸಮಾರು 3 ಸಾವಿರ ಕೋಟಿ ರೂ. ನಷ್ಟು ನಷ್ಟ ಉಂಟಾಗಿದೆ ಎಂದ ಅಂದಾಜಿಸಲಾಗಿದೆ. ಕೂಡಲೆ ಪರಿಹಾರ ವಿತರಣೆ ಮಾಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಜಿಲ್ಲಾಧಿಕಾರಿ ಅವರ ಮೂಲಕ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಲಾಯಿತು.
ರೈತ ಸಂಘ ಮತ್ತು ಹಸಿರು ಸೇನೆಯ ಜಿಲ್ಲಾಧ್ಯಕ್ಷ ಎಸ್.ಶಿವಮೂರ್ತಿ, ಪ್ರಧಾನ ಕಾರ್ಯದರ್ಶಿ ಇ.ಬಿ.ಜಗದೀಶ್, ರಾಜ್ಯ ಉಪಾಧ್ಯಕ್ಷರಾದ ಟಿ.ಎಂ.ಚಂದ್ರಪ್ಪ, ಹಿಟ್ಟೂರು ರಾಜು ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಇದ್ದರು.
ಕ್ಲಿಕ್ ಮಾಡಿ ಇದನ್ನೂ ಓದಿ | ಶಿವಮೊಗ್ಗ – ಭದ್ರಾವತಿ ಹೈವೇ ರಸ್ತೆಯಲ್ಲಿ ತಪ್ಪಿದ ದುರಂತ, ಆಗಿದ್ದೇನು?
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.