ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 5 MARCH 2024
SHIMOGA : ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಿಗೆ ಸತತ 7 ಗಂಟೆ ತ್ರೀಫೇಸ್ ವಿದ್ಯುತ್ ನೀಡಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಪದಾಧಿಕಾರಿಗಳು ಮೆಸ್ಕಾಂ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಸ್ವಯಂ ಆರ್ಥಿಕ ಯೋಜನೆ ಕೈಬಿಡಬೇಕು. ಸುಟ್ಟು ಹೋಗಿರುವ, ಕೆಟ್ಟು ಹೋಗಿರುವ ಟಿಸಿಗಳನ್ನು ತಕ್ಷಣವೇ ಬದಲಾಯಿಸಬೇಕು. ರೈತರಿಗೆ ನಿರಂತರ ವಿದ್ಯುತ್ ನೀಡಬೇಕು ಎಂದು ಆಗ್ರಹಿಸಿದರು. ಮನವಿಗೆ ಸ್ಪಂದಿಸಿದ ಶಿವಮೊಗ್ಗ ಕೆಇಬಿ ಕಾರ್ಯನಿರ್ವಾಹಕ ಇಂಜಿನಿಯರ್ ಎಚ್.ಆರ್.ವೀರೇಂದ್ರ, ಸಮಸ್ಯೆಗಳನ್ನು ಆದ್ಯತೆ ಮೇಲೆ ಬಗೆಹರಿಸುವುದಾಗಿ ತಿಳಿಸಿದರು.
ಇದನ್ನೂ ಓದಿ – ಉದ್ಘಾಟನೆಯಾಗಿ ಹತ್ತೇ ದಿನಕ್ಕೆ ವಿದ್ಯಾನಗರ ವೃತ್ತಾಕಾರದ ಸೇತುವೆಗೆ ಲಾರಿ ಡಿಕ್ಕಿ
ರೈತ ಸಂಘದ ರಾಜ್ಯಾಧ್ಯಕ್ಷ ಹೆಚ್.ಆರ್.ಬಸವರಾಜಪ್ಪ, ಪ್ರಮುಖರಾದ ಕೆ.ರಾಘವೇಂದ್ರ, ಗುರುಶಾಂತ, ಸಿ.ಚಂದ್ರಪ್ಪ, ಶಿವಮೂರ್ತಿ ಇತರರಿದ್ದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422