SHIVAMOGGA LIVE NEWS, 2 JANUARY 2025
ಶಿವಮೊಗ್ಗ : ದೆಹಲಿಯ ಗಡಿಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ನಡೆಸುತ್ತಿರುವ ಹೋರಾಟವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ರೈತರ (Farmers) ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ರೈತ ಸಂಘದ ರಾಜ್ಯಾಧ್ಯಕ್ಷ ಹೆಚ್.ಆರ್.ಬಸವರಾಜಪ್ಪ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ರೈತರು, ಕೇಂದ್ರ ಸರ್ಕಾರ ರೈತರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿದರು.
ಭರವಸೆ ಈಡೇರಿಸಲು ಸರ್ಕಾರ ವಿಫಲವಾಗಿದೆ. ಹಾಗಾಗಿ ಕಳೆದ 8 ತಿಂಗಳಿಂದ ರೈತರು ಸಿಂಘು ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ರೈತ ನಾಯಕ ಜಗತ್ ಸಿಂಗ್ ದಲೈವಾಲ ಅವರು 38 ದಿನದಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಅವರ ಆರೋಗ್ಯ ತೀರ ಹದಗೆಟ್ಟಿದೆ. ಇನ್ನಾದರು ಸರ್ಕಾರ ರೈತರ ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲವಾದಲ್ಲಿ ಚಳವಳಿ ತೀವ್ರಗೊಳಿಸಲಾಗುತ್ತದೆ. – ಹೆಚ್.ಆರ್.ಬಸವರಾಜಪ್ಪ, ರೈತ ಸಂಘದ ರಾಜ್ಯಾಧ್ಯಕ್ಷ
ರೈತ ಸಂಘದ ಜಿಲ್ಲಾಧ್ಯಕ್ಷ ಕೆ.ರಾಘವೇಂದ್ರ, ರಾಜ್ಯ ಉಪಾಧ್ಯಕ್ಷ ಹಿಟ್ಟೂರು ರಾಜು, ಭದ್ರಾವತಿ ತಾಲೂಕು ಪ್ರಧಾನ ಕಾರ್ಯದರ್ಶಿ ಹನುಮಂತಪ್ಪ, ತಾಲೂಕು ಅಧ್ಯಕ್ಷ ಜಿ.ಎನ್.ಪಂಚಾಕ್ಷರಿ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.
ಇದನ್ನೂ ಓದಿ » ಶಿವಮೊಗ್ಗ ಲೈವ್.ಕಾಂ ವರದಿ ಬೆನ್ನಿಗೆ ಎಚ್ಚೆತ್ತ ಅಧಿಕಾರಿಗಳು, ಸ್ಲ್ಯಾಬ್ಗಳು ಬದಲು