ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಮೂವತ್ತು ವರ್ಷಗಳ ಹಿಂದೆ ಆರಂಭವಾದ ಶಾಲಾ ಕಾಲೇಜುಗಳಿಗೆ ಮೂಲಸೌಕರ್ಯ ಮತ್ತು ವೇತನವನ್ನು ಮಂಜೂರು ಮಾಡುವಂತೆ ಆಗ್ರಹಿಸಿ ರಾಜ್ಯ ಅನುದಾನರಹಿತ ಶಾಲಾ ಕಾಲೇಜುಗಳ ಆಡಳಿತ ಮಂಡಳಿ ಮತ್ತು ನೌಕರರ ಒಕ್ಕೂಟ ವತಿಯಿಂದ ನ.19ರಿಂದ ವಿವಿಧ ಸ್ವಾಮೀಜಿಗಳ ನೇತೃತ್ವದಲ್ಲಿ ಅಹೋರಾತ್ರಿ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ಜೆಡಿಎಸ್ ಮುಖಂಡ ಕಾಂತರಾಜ್ ತಿಳಿಸಿದರು.
ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾಂತರಾಜ್, ಬೆಕ್ಕಿನಕಲ್ಮಠ ಶ್ರೀ, ಹಂದಿಗುಂದ ಶ್ರೀ ಶಿವಾನಂದ ಸ್ವಾಮೀಜಿ, ಬೊಮ್ಮನಹಳ್ಳಿ ಸ್ವಾಮೀಜಿ ಹಾನಗಲ್ ಸೇರಿದಂತೆ ಇತರರು ಪಾಲ್ಗೊಳ್ಳಲಿದ್ದಾರೆ ಎಂದರು.
ರಾಜ್ಯಾದ್ಯಂತ 1995ರ ನಂತರ ಪ್ರಾರಂಭವಾದ ಕನ್ನಡ ಮಾಧ್ಯಮ ಶಾಲಾ ಕಾಲೇಜುಗಳ ಸ್ಥಿತಿ ಚಿಂತಾಜನಕವಾಗಿದೆ. ಶಾಲೆಗಳು ಪ್ರಾರಂಭವಾಗಿ 30 ವರ್ಷ ಕಳೆದಿವೆ. ಸರ್ಕಾರ ಅನುದಾನ ಘೋಷಣೆ ಮಾಡದೆ ಶಾಲೆ ಕಾಲೇಜುಗಳು ಮುಚ್ಚುತ್ತಿವೆ. ಈ ಶಾಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅನೇಕ ಶಿಕ್ಷಕರು ನಿವೃತ್ತಿಯಾಗಿದ್ದು, ಕೆಲವರು ನಿವೃತ್ತಿ ಅಂಚಿನಲ್ಲಿದ್ದಾರೆ. ಈ ಶಾಲೆಯಲ್ಲಿ ವ್ಯಾಸಂಗ ಮಾಡುವ ಬಡ ಮಕ್ಕಳಿಗೂ ಸರ್ಕಾರ ಸೌಲಭ್ಯ ನೀಡಬೇಕು ಎಂದು ಒತ್ತಾಯಿಸಿದರು.
ಒಕ್ಕೂಟದ ರಾಜ್ಯ ಉಪಾಧ್ಯಕ್ಷ ಯೋಗೇಶ್ ನಾಯ್ಕ, ಜಿಲ್ಲಾಧ್ಯಕ್ಷ ಸದಾನಂದ, ಸಂತೋಷ್, ಪ್ರದೀಪ್, ಪ್ರಶಾಂತ್, ಶರದ್ ಭರಣಿ ಇದ್ದರು.
ಇದನ್ನೂ ಓದಿ » ಶಿವಮೊಗ್ಗ ಸಿಟಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಚಾಲಕರಿಗೆ ಬಿಸಿ ಮುಟ್ಟಿಸಿದ ಟ್ರಾಫಿಕ್ ಪೊಲೀಸ್
LATEST NEWS
- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

About The Editor
ನಿತಿನ್ ಆರ್.ಕೈದೊಟ್ಲು






