ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS, 1 JANUARY 2025
FATAFAT NEWS : ಶಿವಮೊಗ್ಗ ಸಿಟಿಯಲ್ಲಿ ಇವತ್ತು ಏನೇನಾಯ್ತು? ಇಲ್ಲಿದೆ ಫಟಾಫಟ್ ನ್ಯೂಸ್ ಅಪ್‌ಡೇಟ್.
ಶಿವಮೊಗ್ಗ : ನಗರದ ವಿವಿಧ ಕ್ಲಬ್‌ಗಳು, ರೆಸಾರ್ಟ್, ಹೊಟೇಲ್‌ಗಳು ಮತ್ತು ವಿವಿಧೆಡೆ ಹೊಸ ವರ್ಷಾಚರಣೆ. ಕಳೆದ ರಾತ್ರಿ ಪಟಾಕಿ ಸಿಡಿಸಿ, ಕೇಕ್ ಕತ್ತರಿಸಿ ಸಿಹಿ ಹಂಚಿ ಹೊಸ ವರ್ಷವನ್ನು ಸ್ವಾಗತಿಸಲಾಯಿತು. ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡು ಸಂಭ್ರಮಾಚರಣೆ ಮಾಡಲಾಯಿತು.ಶಿವಮೊಗ್ಗದಲ್ಲಿ ಹೊಸ ವರ್ಷಾಚರಣೆ
ಶಿವಮೊಗ್ಗ : ಹೊಸ ವರ್ಷದ ಮೊದಲ ದಿನವಾದ್ದರಿಂದ ಇವತ್ತು ನಗರದ ವಿವಿಧ ದೇವಸ್ಥಾನಕ್ಕೆ ಭಕ್ತರ ಸಂಖ್ಯೆ ಹೆಚ್ಚಿತ್ತು. ಬೆಳಗ್ಗೆಯಿಂದ ದೊಡ್ಡ ಸಂಖ್ಯೆಯ ಭಕ್ತರು ದೇವರ ದರ್ಶನ ಪಡೆದರು. ಹೊಸ ವರ್ಷದಲ್ಲಿ ಸುಖ, ಶಾಂತಿ, ನೆಮ್ಮದಿ, ಸಮೃದ್ಧಿಗಾಗಿ ಬೇಡಿಕೊಂಡರು.ದೇವಸ್ಥಾನಕ್ಕೆ ಹೆಚ್ಚಿನ ಭಕ್ತರು
ಶಿವಮೊಗ್ಗ : ದಿ ಹಿಂದೂ ಪತ್ರಿಕೆಯ ಶಿವಮೊಗ್ಗದ ಹಿರಿಯ ವರದಿಗಾರ ಜಿ.ಟಿ.ಸತೀಶ್ ಅವರಿಗೆ ಅಭಿವೃದ್ಧಿ ಪತ್ರಿಕೋದ್ಯಮ ಪ್ರಶಸ್ತಿ ಘೋಷಿಸಲಾಗಿದೆ. ವಾರ್ತಾ ಇಲಾಖೆ ವತಿಯಿಂದ ಪ್ರಶಸ್ತಿ ನೀಡಲಾಗುತ್ತದೆ. ಜಿ.ಟಿ.ಸತೀಶ್ ಅವರಿಗೆ 2022ರ ಸಾಲಿನ ಪ್ರಶಸ್ತಿ ಘೋಷಿಸಲಾಗಿದೆ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಅಭಿನಂದನೆ ಸಲ್ಲಿಸಿದೆ.ಜಿ.ಟಿ.ಸತೀಶ್‌ಗೆ ಅಭಿವೃದ್ಧಿ ಪತ್ರಿಕೋದ್ಯಮ ಪ್ರಶಸ್ತಿ
ಅನುಪಿನಕಟ್ಟೆ : ಶ್ರೀರಾಮಕೃಷ್ಣ ಗುರುಕುಲ ವಸತಿ ಶಾಲೆಯಲ್ಲಿ ಮಕ್ಕಳಿಂದ ತಂದೆ, ತಾಯಿಗೆ ಪಾದಪೂಜೆ ಕಾರ್ಯಕ್ರಮ ನಡೆಸಲಾಯಿತು. ತರಳಬಾಳು ಜಗದ್ಗುರು ಸಾಣೇಹಳ್ಳಿ ಶಾಖಾ ಮಠದ ಡಾ. ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜಗತ್ತಿನಲ್ಲಿ ಭ್ರಷ್ಟಾಚಾರ, ದುರಾಚಾರಗಳು ಹೆಚ್ಚುತ್ತಿದೆ. ವಿದ್ಯೆ ಇಲ್ಲದವರು ಇದನ್ನು ಮಾಡುತ್ತಿಲ್ಲ. ದೊಡ್ಡ ಪದವಿ ಪಡೆದವರಿಂದಲೆ ದುರಾಚಾರಗಳಾಗುತ್ತಿವೆ. ವಿದ್ಯಾವಂತರಿಗೆ ಸಂಸ್ಕಾರ ದೊರೆಯದಿರುವುದೆ ಇದಕ್ಕೆ ಕಾರಣ. ರಾಮಕೃಷ್ಣ ಶಾಲೆಯ ಕಾರ್ಯಕ್ರಮ ಸಂಸ್ಕಾರ ಬೆಳೆಸುತ್ತಿದೆ. ಡಾ. ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಜಗದ್ಗುರು ಸಾಣೇಹಳ್ಳಿ ಮಠಮಕ್ಕಳಿಂದ ಪೋಷಕರಿಗೆ ಪಾದಪೂಜೆ
ಎ.ಎ.ವೃತ್ತ : ಬಂದೋಬಸ್ತ್‌ಗೆ ನಿಯೋಜನೆಗೊಂಡಿದ್ದ ಪೊಲೀಸರೊಂದಿಗೆ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಕೇಕ್ ಕತ್ತರಿಸಿ ಹೊಸ ವರ್ಷಾಚರಣೆ ಮಾಡಿದರು. ರಾತ್ರಿ 12 ಗಂಟೆಗೆ ಪೊಲೀಸ್ ಸಿಬ್ಬಂದಿಗೆ ಕೇಕ್ ನೀಡಿ ಶುಭಾಶಯ ತಿಳಿಸಿದರು. ಹಿರಿಯ ಪೊಲೀಸ್ ಅಧಿಕಾರಿಗಳು, ಡಿವೈಎಸ್‌ಪಿಗಳು, ಇನ್ಸ್‌ಪೆಕ್ಟರ್‌ಗಳು, ಸಿಬ್ಬಂದಿ ಇದ್ದರು.ಡ್ಯೂಟಿ ಮಧ್ಯೆ ಕೇಕ್ ಕತ್ತರಿಸಿ ಹೊಸ ವರ್ಷಾಚರಣೆ
ಸಿದ್ದಯ್ಯ ರಸ್ತೆ : ಕಳೆದ ರಾತ್ರಿ ಕಾರು, ಬೈಕ್ ಅಪಘಾತ ಸಂಭವಿಸಿದೆ. ಬೈಕ್ ಸವಾರ ಧನುಷ್ (20) ಮೃತಪಟ್ಟಿದ್ದಾನೆ. ಪ್ರಜ್ವಲ್ ಎಂಬಾತ ಗಾಯಗೊಂಡಿದ್ದಾನೆ. ಕಾರು ಪಲ್ಟಿಯಾಗಿದ್ದು ಅದರಲ್ಲಿದ್ದ ಮೂವರು ಪಾರಾಗಿದ್ದಾರೆ. ಘಟನೆಯ ಸಿಸಿಟಿವಿ ದೃಶ್ಯ ವೈರಲ್ ಆಗಿವೆ. ದೊಡ್ಡಪೇಟೆ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.ಕಾರು, ಬೈಕ್ ಅಪಘಾತ, ಓರ್ವ ಸಾವು
ಇದನ್ನೂ ಓದಿ » ವರ್ಷದ ಮೊದಲ ದಿನವೇ 1 ಲಕ್ಷ ರೂ. ಲಂಚ ಪಡೆಯುತ್ತಿದ್ದ ಅಧಿಕಾರಿ ಅರೆಸ್ಟ್, ಸಿಕ್ಕಿಬಿದ್ದಿದ್ದು ಹೇಗೆ?
ಶಿವಮೊಗ್ಗ : ಬೈಕ್ ಡಿಕ್ಕಿ ಹೊಡೆದು ರಸ್ತೆ ಬದಿ ನಡೆದು ಹೋಗುತ್ತಿದ್ದ ಮಹಿಳೆ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ರಾಯಲ್ ಆರ್ಕಿಡ್ ಹೊಟೇಲ್ ಸಮೀಪ ಘಟನೆ ಸಂಭವಿಸಿದೆ. ರೇಣುಕಮ್ಮ (70) ಮೃತ ಮಹಿಳೆ. ಅಪಘಾತವಾದ ತಕ್ಷಣ ರೇಣುಕಮ್ಮ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಪಶ್ಚಿಮ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.ಬೈಕ್ ಡಿಕ್ಕಿ, ಮಹಿಳೆ ಸಾವು
ಇದನ್ನೂ ಓದಿ » ಹರಿಹರದಿಂದ ಶಿವಮೊಗ್ಗಕ್ಕೆ ಬಂದು ಬಸ್ಸಿಳಿದ ಮಹಿಳೆಗೆ ಕಾದಿತ್ತು ಶಾಕ್, ಆಗಿದ್ದೇನು?
ಬಿಜೆಪಿ ಕಚೇರಿ : ಭಾಗ್ಯಗಳ ಮೂಲಕ ಅಧಿಕಾರಕ್ಕೆ ಬಂದಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ, ಅಧಿಕಾರಿಗಳು, ಗುತ್ತಿಗೆದಾರರಿಗೆ ಆತ್ಮಹತ್ಯೆ ಭಾಗ್ಯ ಕರುಣಿಸಿದೆ. ಸಚಿವ ಪ್ರಿಯಾಂಕ್ ಖರ್ಗೆ ಆಪ್ತನ ಬೆದರಿಕೆಗೆ ಯುವ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಕೋಷ್ಠಗಳ ಸಂಯೋಜಕ ಎಸ್.ದತ್ತಾತ್ರಿ ಆರೋಪಿಸಿದರು. ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವರಾಗಿದ್ದ ಕೆ.ಎಸ್.ಈಶ್ವರಪ್ಪ ರಾಜೀನಾಮೆ ನೀಡಿದ್ದರು. ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವರಾಗಿದ್ದ ಕೆ.ಜೆ.ಜಾರ್ಜ್ ರಾಜೀನಾಮೆ ಕೊಟ್ಟಿದ್ದರು. ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಆರೋಪ ಕೇಳಿ ಬಂದಿದೆ. ಕೂಡಲೆ ರಾಜೀನಾಮೆ ನೀಡಲಿ. ಎಸ್.ದತ್ತಾತ್ರಿ, ಬಿಜೆಪಿ ರಾಜ್ಯ ಪ್ರಕೋಷ್ಠಗಳ ಸಂಯೋಜಕಸಚಿವ ಸ್ಥಾನಕ್ಕೆ ತಕ್ಷಣಕ್ಕೆ ರಾಜೀನಾಮೆ ನೀಡಲಿ
ಇದನ್ನೂ ಓದಿ » ಕಾರು, ಬೈಕ್ ಅಪಘಾತದ CCTV ದೃಶ್ಯ ಲಭ್ಯ, ಹೇಗಾಯ್ತು ಘಟನೆ? ಏನೇನೆಲ್ಲ ಆಯ್ತು?
ಹೊಸಮನೆ : ಶ್ರೀ ಮಾತಂಗಮ್ಮ ದೇವಿ ದೇಗುಲ ಸಮಿತಿ ವತಿಯಿಂದ ಹೊಸಮನೆ 4ನೇ ತಿರುವಿನಲ್ಲಿ ಭೀಮಾ ಕೋರೇಗಾವ್ ವಿಜಯೋತ್ಸವ ಮತ್ತು ಕರ್ನಾಟಕ ರಾಜ್ಯೋತ್ಸವ ಆಚರಿಸಲಾಯಿತು. ನಿರಂಜನಮೂರ್ತಿ ಅವರು ಕರ್ನಾಟಕದ ಧ್ವಜಾರೋಹಣ ಮಾಡಿದರು. ಸುನಿಲ್ ಎನ್, ಸುರೇಶ್ ಪಿ, ರಂಗನಾಥ್, ನಾಗರಾಜ್, ಶ್ರೀನಿವಾಸ್, ಸುರೇಶ್, ರಮೇಶ್ ಸೇರಿ ಹಲವರು ಭಾಗಿಯಾಗಿದ್ದರು.ಹೊಸಮನೆಯಲ್ಲಿ ಕರ್ನಾಟಕ ರಾಜ್ಯೋತ್ಸವ
ಕುವೆಂಪು ರಂಗಮಂದಿರ : ಜಿಲ್ಲಾಡಳಿ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತ ಇಲಾಖೆ, ಜಿಲ್ಲಾ ವಿಶ್ವಕರ್ಮ ಮಹಾಸಭಾದ ವತಿಯಿಂದ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮ ನಡೆಯಿತು. ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಕಾರ್ಯಕ್ರಮ ಉದ್ಘಾಟಿಸಿದರು. ಜಿಲ್ಲಾ ವಿಶ್ವಕರ್ಮ ಮಹಾಸಭಾದ ಅಧ್ಯಕ್ಷ ಅಗರದಹಳ್ಳಿ ನಿರಂಜನಮೂರ್ತಿ, ಗೌರವ ಅಧ್ಯಕ್ಷ ಟಿ.ಆರ್.ಸತ್ಯನಾರಾಯಣ, ಜಿಲ್ಲಾ ವಿಶ್ವಕರ್ಮ ಬ್ರಾಹ್ಮಣ ಸಂಘದ ಅಧ್ಯಕ್ಷ ಅನ್ನಪೂರ್ಣ ಕಾಳಾಚಾರ್ ಸೇರಿದಂತೆ ಹಲವರು ಇದ್ದರು.ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422