FATAFAT NEWS, 23 SEPTEMBER 2024
ಗಾಂಧಿ ಜಯಂತಿಯಂದು ಉಪವಾಸ ಸತ್ಯಾಗ್ರಹ
ಶಿವಮೊಗ್ಗ ಲೈವ್.ಕಾಂ : ಕನ್ನಡ ಮಾಧ್ಯಮ ಶಾಲಾ ಕಾಲೇಜುಗಳಿಗೆ ಅನುದಾನವಿಲ್ಲದೆ ಸೊರಗುತ್ತಿವೆ. ಆದ್ದರಿಂದ ಸರ್ಕಾರ ಕೂಡಲೇ ಅನುದಾನ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಬೆಂಗಳೂರಿನ ಪ್ರೀಡಂ ಪಾರ್ಕ್ ಆವರಣದಲ್ಲಿ ಅ.2 ರಂದು ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಅನುದಾನ ರಹಿತ ಶಾಲಾ ಕಾಲೇಜುಗಳ ಆಡಳಿತ ಮಂಡಳಿಗಳ ಮತ್ತು ನೌಕರರ ಒಕ್ಕೂಟ ಜಿಲ್ಲಾ ಘಟಕ ಅಧ್ಯಕ್ಷ ಜಿ.ಟಿ. ಸದಾನಂದ ಅವರು ತಿಳಿಸಿದ್ದಾರೆ.
![]() |
ಹಿಂದೂ ಕಾರ್ಯಕರ್ತರನ್ನು ಗುರಿಯಾಗಿಸಲಾಗುತ್ತಿದೆ
ಶಿವಮೊಗ್ಗ ಲೈವ್.ಕಾಂ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ ಬ್ಯಾಂಕ್ಗಾಗಿ ಮುಸ್ಲಿಂಮರ ತುಷ್ಟೀಕರಣ ಮಾಡುತ್ತಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ಗಣೇಶ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ಶಿವಮೊಗ್ಗ ಮಾರ್ಗವಾಗಿ ತೆರಳುತ್ತಿದ್ದ ವಿಶ್ವ ಹಿಂದು ಪರಿಷತ್ ದಕ್ಷಿಣ ಕರ್ನಾಟಕ ಪ್ರಾಂತ ಜಂಟಿ ಕಾರ್ಯದರ್ಶಿ ಶರಣ್ ಪಂಪ್ವೆಲ್ ದಾರಿ ಮಧ್ಯದಲ್ಲಿಯೇ ತಡೆಹಿಡಿದಿದ್ದಾರೆ. ಹಿಂದೂ ಕಾರ್ಯಕರ್ತರನ್ನು ಗುರಿಯಾಗಿಸಿ ಪ್ರಕರಣ ದಾಖಲಿಸಿ ಅಧಿಕಾರ ದುರ್ಬಳಿಕೆ ಮಾಡುತ್ತಿದ್ದಾರೆ ಎಂದು ಬಜರಂಗದಳ ವಿಭಾಗ ಸಂಯೋಜಕ ರಾಜೇಶ್ ಗೌಡ ಆಕ್ರೋಶ ವ್ಯಕ್ತಪಡಿಸಿದರು.
ಜೀವಾವಧಿ ಅಥವಾ ಗಲ್ಲು ಶಿಕ್ಷೆ ವಿಧಿಸಬೇಕು
ಶಿವಮೊಗ್ಗ ಲೈವ್.ಕಾಂ : ಲೈಂಗಿಕ ಕಿರುಕುಳ, ಅತ್ಯಾಚಾರ ಆರೋಪಿಗಳಿಗೆ ಜಾಮೀನು ನೀಡದೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಸೌಹಾರ್ದ ಸ್ವ ಸಹಾಯ ಸಂಘಗಳ ತಾಲೂಕು ಒಕ್ಕೂಟದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಮಕ್ಕಳು, ಮಹಿಳೆಯರ ಮೇಲೆ ದೌರ್ಜನ್ಯ, ಹಿಂಸೆ, ಅತ್ಯಾಚಾರ ಮತ್ತು ಲೈಂಗಿಕ ಕಿರುಕುಳ ಹೆಚ್ಚಾಗಿವೆ. ಇಂತಹ ಕೃತ್ಯ ಎಸಗುವವರಿಗೆ ಜೀವಾವಧಿ ಅಥವಾ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು. ಅಧ್ಯಕ್ಷೆ ಪುಷ್ಪಲತಾ, ವಿನಯರಾಜ್, ರೂಪಾ, ಸಂಧ್ಯಾ, ಅಂಬಿಕಾ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ » ‘ಇಂತಹವರು ರಾಜಕೀಯದಲ್ಲಿ ಇರಬಾರದುʼ, ಸರ್ಕಾರಕ್ಕೆ ಒಕ್ಕಲಿಗರ ಆಗ್ರಹ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200