ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 25 ಮೇ 2020
ಗುಜರಾತ್, ಮಹಾರಾಷ್ಟ್ರ, ತಮಿಳುನಾಡು, ಆಂಧ್ರ, ಕೇರಳದಿಂದ ಬಂದವರಲ್ಲಿ ಕರೋನ ಸೋಂಕು ಪತ್ತೆಯಾಗಿ ಶಿವಮೊಗ್ಗ ಜಿಲ್ಲೆಯ ಜನ ಆತಂಕಕ್ಕೀಡಾಗಿದ್ದಾರೆ. ಈಗ ಈ ಪಟ್ಟಿಗೆ ಮತ್ತೊಂದು ರಾಜ್ಯ ಸೇರ್ಪಡೆಯಾಗಿದ್ದು, ಜನ ಮತ್ತಷ್ಟು ಭಯಗೊಳ್ಳುವಂತಾಗಿದೆ.
ಮತ್ತೊಂದು ರಾಜ್ಯ ರಾಜಸ್ಥಾನ..!
ಭಾನುವಾರ ಬಿಡುಗಡೆಯಾದ ರಾಜ್ಯದ ಹೆಲ್ತ್ ಬುಲೆಟಿನ್ನಲ್ಲಿ, ರಾಜಸ್ಥಾನದಿಂದ ಶಿವಮೊಗ್ಗಕ್ಕೆ ಬಂದಿರುವ ವ್ಯಕ್ತಿಯೊಬ್ಬರಲ್ಲಿ, ಕರೋನ ಸೋಂಕು ಇರುವುದು ಪತ್ತೆಯಾಗಿದೆ. 74 ವರ್ಷದ ವ್ಯಕ್ತಿಯೊಬ್ಬರು ಇತ್ತೀಚೆಗೆ ರಾಜಸ್ಥಾನದಿಂದ ಬಂದಿದ್ದರು. ಈ ವೇಳೆ ತಪಾಸಣೆ ನಡೆಸಲಾಗಿದ್ದು, ಅದರ ವರದಿ ಬಂದಿದೆ.
ಎಷ್ಟು ಜನ? ಯಾವಾಗ ಬಂದಿದ್ದು?
ಕರೋನ ಸೋಂಕಿತ ಪಿ2088 ಸೇರಿ ಹತ್ತು ಜನರು ರಾಜಸ್ಥಾನದಿಂದ ಶಿವಮೊಗ್ಗಕ್ಕೆ ಆಗಮಿಸಿದ್ದರು. ಅನ್ಯ ರಾಜ್ಯದಿಂದ ಬಂದವರನ್ನು ತಪಾಸಣೆಗೆ ಒಳಪಡಿಸಿ, ಕ್ವಾರಂಟೈನ್ಗೆ ಕಳುಹಿಸಲಾಗುತ್ತದೆ. ಅದೆ ರೀತಿ ಇವರನ್ನು ಸಾಂಸ್ಥಿಕ ಕ್ವಾರಂಟೈನ್ನಲ್ಲಿ ಇರಿಸಲಾಗಿತ್ತು. ಈ ವೇಳೆ ಪಿ2088 ಅವರ ವರದಿ ಬಂದಿದ್ದು ಪಾಸಿಟಿವ್ ಕಾಣಿಸಿಕೊಂಡಿದೆ. ಇವರೆಲ್ಲ ಮೇ 22ರಂದು ಶಿವಮೊಗ್ಗಕ್ಕೆ ಬಂದಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422