ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಶಿವಮೊಗ್ಗ ಪ್ರೆಸ್ ಟ್ರಸ್ಟ್ನಿಂದ ಜು.31ರಂದು ಬೆಳಗ್ಗೆ 10.30ಕ್ಕೆ ಪ್ರೆಸ್ಟ್ರಸ್ಟ್ ಪತ್ರಿಕಾಭವನದ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ, ಪ್ರತಿಭಾ ಪುರಸ್ಕಾರ, ವೃತ್ತಿ ಬಂಧುಗಳಿಗೆ (Journalists) ಸನ್ಮಾನ, ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ನಾಗರಾಜ್ ನೇರಿಗೆ ತಿಳಿಸಿದರು.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಉಚಿತವಾಗಿ ಹೆಪಟೈಟಿಸ್ ಬಿ ತಪಾಸಣೆ ಶಿಬಿರ, ಲಸಿಕೆ ವಿತರಣೆ, ಈಗಲೆ ಹೆಸರು ನೋಂದಣಿಗೆ ಸೂಚನೆ
ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಾಗರಾಜ ನೇರಿಗೆ, ಪತ್ರಿಕೋದ್ಯಮದ ವಿವಿಧ ಕ್ಷೇತ್ರಗಳಿಗೆ ಬೆನ್ನೆಲುಬಾಗಿ ನಿಂತಿರುವ ವೃತ್ತಿ ಬಂಧುಗಳನ್ನು ಸನ್ಮಾನಿಸಲಾಗುವುದು. ಎಸ್ಎಸ್ಎಲ್ಸಿ, ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು. ಕಾರ್ಯಕ್ರಮವನ್ನು ಹಬ್ಬದಂತೆ ಆಚರಿಸಲಾಗುವುದು ಎಂದರು.

[su_note note_color=”#f1f1f1″ text_color=”#000000″ radius=”0″]
ಹೇಗಿರುತ್ತೆ ಕಾರ್ಯಕ್ರಮ?
[su_divider top=”no” style=”dotted” divider_color=”#f1f1f1″ link_color=”#000000″ margin=”10″]
- ಉಪಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಪಿ. ತ್ಯಾಗರಾಜ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಛಾಯಾಗ್ರಾಹಕ ಶಿವಮೊಗ್ಗ ನಂದನ್ ನೆನಪಿನಲ್ಲಿ ಆಯೋಜಿಸಿರುವ ಛಾಯಾಚಿತ್ರ ಪ್ರದರ್ಶನವನ್ನು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಉದ್ಘಾಟಿಸಲಿದ್ದಾರೆ.
[su_divider top=”no” style=”dotted” divider_color=”#b8b8b8″ link_color=”#000000″ margin=”10″]
- ಪ್ರೆಸ್ಟ್ರಸ್ಟ್ ಅಧ್ಯಕ್ಷ ಮಂಜುನಾಥ್ ಅಧ್ಯಕ್ಷತೆ ವಹಿಸಲಿದ್ದಾರೆ. ವಾರ್ತಾಧಿಕಾರಿ ಆರ್.ಮಾರುತಿ ಅತಿಥಿಗಳಾಗಿ ಆಗಮಿಸಲಿದ್ದಾರೆ.[/su_note]
ಯಾರಿಗೆಲ್ಲ ಸನ್ಮಾನ?
ಶಿಕಾರಿಪುರದ ಸರ್ವಜ್ಞ ಪತ್ರಿಕಾ ಸಂಪಾದಕ ಎಸ್.ಬಿ.ಮಠದ್, ಝೇಂಕಾರ್ ಅಡ್ವರ್ಟೈಸರ್ಸ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಟಿ.ಎ.ನರೇಶ್ ಕುಮಾರ್, ವಿಜಯ ಕರ್ನಾಟಕ ಮುದ್ರಣ ವಿಭಾಗದ ವ್ಯವಸ್ಥಾಪಕ ನಾರಪ್ಪ ಗೌಡ್ರು, ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ಗ್ರಾಫಿಕ್ ಡಿಸೈನರ್ ಎಂ.ಸಿ.ರಾಜು, ಕನ್ನಡಪ್ರಭ ಪತ್ರಿಕೆ ಜಾಹೀರಾತು ವಿಭಾಗದ ವ್ಯವಸ್ಥಾಪಕ ಕಾರ್ತಿಕ್ ಚಂದ್ರಮೌಳಿ, ವಿಜಯವಾಣಿ ಪತ್ರಿಕೆ ಛಾಯಾಗ್ರಾಹಕ ಶಿವಮೊಗ್ಗ ಯೋಗರಾಜ್, ರಿಪಬ್ಲಿಕ್ ಕನ್ನಡ ವಾಹಿನಿಯ ವಿಡಿಯೊ ಜರ್ನಲಿಸ್ಟ್ ಚಿರಾಗ್, ಪತ್ರಿಕಾ ವಿತರಕ ಬಿ.ಮಂಜುನಾಥ್ ಅವರನ್ನು ಸನ್ಮಾನಿಸಲಾಗುವುದು ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಟ್ರಸ್ಟ್ನ ಪದಾಧಿಕಾರಿಗಳಾದ ಜೇಸುದಾಸ್, ಮೋಹನ್ ಕೃಷ್ಣ, ಕಿರಣ್ ಕಂಕಾರಿ, ಆರಗ ರವಿ, ಸಂತೋಷ್ ಕಾಚಿನಕಟ್ಟೆ ಇದ್ದರು.

felicitation for journalists by Shimoga Press Trust
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ತಾಳಗುಪ್ಪ – ಮೈಸೂರು ಎಕ್ಸ್ಪ್ರೆಸ್ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

- ಶಿವಮೊಗ್ಗದಲ್ಲಿ ಎಷ್ಟಿದೆ ಇವತ್ತಿನ ಅಡಿಕೆ ರೇಟ್? 16 ಮಾರ್ಚ್ 2026 – ಅಡಿಕೆ ಧಾರಣೆ

- ತೀರ್ಥಹಳ್ಳಿ ಮಹಿಳೆಯರಿಗೆ ಮೊದಲ ಮೂರು ಬಹುಮಾನ, ಹೇಗಿತ್ತು ಸ್ಪರ್ಧೆ? ವಿಜೇತರು ಯಾರು?

- ಶಿವಮೊಗ್ಗ ಕೆಎಸ್ಆರ್ಟಿಸಿ ನಿಲ್ದಾಣದಲ್ಲಿ ಅಪಘಾತ, ಯುವಕನಿಗೆ ಬಸ್ ಡಿಕ್ಕಿ, ಆಗಿದ್ದೇನು?

- ಶಿವಮೊಗ್ಗದ ಇಂಜಿನಿಯರ್ಗೆ ಸಂಕಷ್ಟ ತಂದ ಮರೆವು, ಫ್ಲೈ ಓವರ್ ಬಳಿ ಆಗಿದ್ದೇನು? ಕೇಸ್ ದಾಖಲು

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು














