ಶಿವಮೊಗ್ಗದ ಉದ್ಯಮಿಗೆ ನಾಗರಿಕ ಅಭಿನಂದನೆ, ಕಿರುಹೊತ್ತಿಗೆ ಬಿಡುಗಡೆಗೆ ಬರ್ತಿದ್ದಾರೆ ವಿಜಯ ಸಂಕೇಶ್ವರ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ವಾಟ್ಸಪ್‌ ಮಾಡಲು ಕೆಳಗಿರುವ ನಂಬರ್‌ ಮೇಲೆ ಕ್ಲಿಕ್‌ ಮಾಡಿ.

NEWS HIGHLIGHTS

ಶಿವಮೊಗ್ಗ: ಸಿಟಿಜನ್ ಫೋರಂ ಹಾಗೂ ಟಿ.ಆರ್. ಅಶ್ವತ್ಥನಾರಾಯಣ ಶೆಟ್ಟಿ ಅಭಿನಂದನಾ ಸಮಿತಿ ವತಿಯಿಂದ ಜೂನ್ 13ರಂದು ಸಂಜೆ 5.30ಕ್ಕೆ ಕುವೆಂಪು ರಂಗಮಂದಿರದಲ್ಲಿ ಉದ್ಯಮಿ ಟಿ.ಆರ್. ಅಶ್ವತ್ಥನಾರಾಯಣ ಶೆಟ್ಟಿ ಅವರಿಗೆ ನಾಗರಿಕ ಅಭಿನಂದನೆ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿ ಕಾರ್ಯಾಧ್ಯಕ್ಷ ಡಾ. ಪಿ. ನಾರಾಯಣ್ ತಿಳಿಸಿದ್ದಾರೆ.

➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಜವಳಿ ಉದ್ಯಮದಲ್ಲಿ 50 ವರ್ಷಗಳ ಯಶಸ್ವಿ ಸೇವೆ ಸಲ್ಲಿಸಿರುವ ಅಶ್ವತ್ಥನಾರಾಯಣ ಶೆಟ್ಟಿ ಅವರಿಗೆ ಶಿವಮೊಗ್ಗದ ನಾಗರಿಕರ ಪರವಾಗಿ ಗೌರವ ಸಲ್ಲಿಸಲಾಗುತ್ತಿದೆ. ಹೊರನಾಡು ಶ್ರೀ ಅನ್ನಪೂರ್ಣೇಶ್ವರಿ ಕ್ಷೇತ್ರದ ಧರ್ಮದರ್ಶಿ ಜಿ. ಭೀಮೇಶ್ವರ ಜೋಶಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ವಿಆರ್‌ಎಲ್ ಸಮೂಹ ಸಂಸ್ಥೆಯ ಸಿಎಂಡಿ ಡಾ. ವಿಜಯ್ ಸಂಕೇಶ್ವರ್ ಅವರು ಸೇವಾಶ್ರೀ ಅಭಿನಂದನಾ ಕಿರುಹೊತ್ತಿಗೆ ಬಿಡುಗಡೆ ಮಾಡಲಿದ್ದಾರೆ. ಸಮಿತಿ ಗೌರವಾಧ್ಯಕ್ಷ ಎಸ್. ರುದ್ರೇಗೌಡ ಅಧ್ಯಕ್ಷತೆ ವಹಿಸಲಿದ್ದಾರೆ.

SHIMOGA-NEWS-GRAPHICS-BY-SHIVAMOGGA-LIVE

ಕಾರ್ಯಕ್ರಮದ ಅಂಗವಾಗಿ ಅಂದು ಬೆಳಿಗ್ಗೆ 10.30ಕ್ಕೆ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಲ್ಲಿ ಭಾರತದಲ್ಲಿ ಕುಟುಂಬ ವ್ಯವಹಾರ ನಿರ್ವಹಣೆ ಸವಾಲುಗಳು ಮತ್ತು ಭವಿಷ್ಯ ಕುರಿತು ಯುಕೆ ಆಂಡ್ ಕೋ ಸಂಸ್ಥಾಪಕ ಉಲ್ಲಾಸ್ ಕಾಮತ್ ಉಪನ್ಯಾಸ ನೀಡಲಿದ್ದಾರೆ. ಇದೇ ವೇಳೆ ರೆಡ್‌ಕ್ರಾಸ್ ಹಾಗೂ ರೋಟರಿ ರಕ್ತನಿಧಿ ಕೇಂದ್ರದ ಸಹಯೋಗದಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿದೆ. 84ರ ಹರೆಯದಲ್ಲೂ 40ಕ್ಕೂ ಹೆಚ್ಚು ವಿವಿಧ ಸಂಘಸಂಸ್ಥೆಗಳಲ್ಲಿ ಸಕ್ರಿಯರಾಗಿರುವ ಅಶ್ವತ್ಥನಾರಾಯಣ ಶೆಟ್ಟಿ ಅವರ ಕುರಿತು 8 ನಿಮಿಷಗಳ ರೂಪಕ ಪ್ರಸ್ತುತಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಸಮಿತಿ ಪದಾಧಿಕಾರಿಗಳು ತಿಳಿಸಿದ್ದಾರೆ.

ಶಿವಮೊಗ್ಗ ಲೈವ್ ಅಪ್ಡೇಟ್ಸ್

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಸೇರಿರಿ!