ಶಿವಮೊಗ್ಗ ಲೈವ್.ಕಾಂ | SHIMOGA NEWS | 25 ಸೆಪ್ಟಂಬರ್ 2020
ವಿವಿಧ ಬೇಡಿಕೆಗಳ ಈಡೇರಿಸುವಂತೆ ಒತ್ತಾಯಿಸಿ ಶಿವಮೊಗ್ಗ ಮೆಡಿಕಲ್ ಕಾಲೇಜು ಹೊರಗುತ್ತಿಗೆ ನೌಕರರು ಐದು ದಿನಗದಿಂದ ನಡೆಸುತ್ತಿರುವ ಅನಿರ್ಧಿಷ್ಟಾವಧಿ ಮುಷ್ಕರ ಇವತ್ತು ತೀವ್ರ ಸ್ವರೂಪ ಪಡೆಯಿತು. ಪ್ರತಿಭಟನೆ ನಡೆಸುತ್ತಿದ್ದ ದಾದಿಯರು ಮತ್ತು ಸಿಬ್ಬಂದಿಗಳು ಅಸ್ವಸ್ಥರಾಗಿದ್ದು ತಕ್ಷಣವೇ ಅವರಿಗೆ ಅಲ್ಲಿಯೇ ಪ್ರಥಮ ಚಿಕಿತ್ಸೆ ನೀಡಲಾಯಿತು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಹೊರಗುತ್ತಿಗೆ ನೌಕರರು ಇವತ್ತು ತಮ್ಮ ಚಳವಳಿಯನ್ನು ತೀವ್ರಗೊಳಿಸಿದ್ದು, ವಿದ್ಯಾರ್ಥಿ ಸಂಘಟನೆಯ ಮುಖಂಡ ವಿನಯ್ ರಾಜಾವತ್ ನೇತೃತ್ವದಲ್ಲಿ ರಕ್ತಕ್ರಾಂತಿ ಚಳವಳಿಗೆ ಕರೆ ನೀಡಲಾಗಿತ್ತು. ಇದರ ಅಂಗವಾಗಿಯೇ ಚಳವಳಿವಲ್ಲಿ ಭಾಗವಹಿಸಿದ್ದವರು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಂಸದ ಬಿ.ವೈ.ರಾಘವೇಂದ್ರ, ಸಚಿವ ಕೆ.ಎಸ್.ಈಶ್ವರಪ್ಪ ಅವರ ಭಾವಚಿತ್ರಗಳಿಗೆ ಹಾಲಿನ ಅಭಿಷೇಕ, ಹೂ ಹಾಕುವ ಮೂಲಕ ವಿನೂತನ ಚಳವಳಿ ನಡೆಸಿದರು.
ರಕ್ತದಿಂದ ಪಾದಪೂಜೆ
ಹೂ, ಹಾಲಿನ ಅಭಿಷೇಕದ ಜೊತೆಗೆ ಸಿಎಂ, ಸಚಿವರು, ಸಂಸದರ ಭಾವಚಿತ್ರಕ್ಕೆ ರಕ್ತದ ಅಭಿಷೇಕ ಮಾಡಲು ಮುಂದಾದರು. ಮಧ್ಯಪ್ರವೇಶಿಸಿದ ಪೊಲೀಸರು ಪ್ರತಿಭಟನಾಕಾರರನ್ನು ತಡೆದರು. ರಕ್ತದ ಅಭಿಷೇಕ ಮಾಡುವುದು ಸರಿಯಲ್ಲ ಎಂದರು. ಈ ವೇಳೆ ವಿದ್ಯಾರ್ಥಿ ಸಂಘಟನೆ ಮುಖಂಡ ವಿನಯ್ ರಾಜಾವತ್ ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು.
ತಳ್ಳಾಟ, ನೂಕಾಟ, ಅಸ್ವಸ್ಥ
ಈ ವೇಳೆ ಪೊಲೀಸರು ಮತ್ತು ಪ್ರತಿಭಟಕಾರರ ನಡುವೆ ನೂಕಾಟ ತಳ್ಳಾಟವಾಯಿತು. ಇದರಿಂದ ಪ್ರತಿಭಟನಾನಿರತರು ಅಸ್ವಸ್ಥರಾದರು. ಅವರಿಗೆ ಪ್ರತಿಭಟನಾ ಸ್ಥಳದಲ್ಲೇ ಚಿಕಿತ್ಸೆ ನೀಡಲಾಯಿತು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]