ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE | 19 JULY 2023
SHIMOGA : ರಾತ್ರಿ ಗಸ್ತು ವೇಳೆ ಅನುಮಾನಾಸ್ಪದ ವ್ಯಕ್ತಿಯೊಬ್ಬನ ಬೆರಳಚ್ಚು (finger print) ಪಡೆದು ಪೊಲೀಸರು ಪರಿಶೀಲನೆ ನಡೆಸಿದಾಗ ಅಪರಾಧ ಹಿನ್ನೆಲೆ ಪತ್ತೆಯಾಗಿದೆ. ಕೂಲಂಕಷವಾಗಿ ಪರಿಶೀಲಿಸಿದಾಗ ಪ್ರಕರಣವೊಂದರ ಸಂಬಂಧ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿರುವುದು ಗೊತ್ತಾಗಿದೆ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ದರೋಡೆ ಪ್ರಕರಣದ ಆರೋಪಿ ನವೀನ್ ನಾಯ್ಕ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆತನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ನ್ಯಾಯಾಂಗ ಬಂಧನ ವಿಧಿಸಲಾಗಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಹೇಗೆ ಸಿಕ್ಕಿಬಿದ್ದ ನವೀನ್ ನಾಯ್ಕ?
ದೊಡ್ಡಪೇಟೆ ಠಾಣೆ ಸಿಬ್ಬಂದಿ ಗಂಗಪ್ಪ ತುಂಗಲ್ ಅವರು ರಾತ್ರಿ ಗಸ್ತು ನಡೆಸುತ್ತಿದ್ದರು. ಈ ವೇಳೆ ಅನುಮಾನಾಸ್ಪದ ವ್ಯಕ್ತಿಗಳ ವಿಚಾರಣೆ ನಡೆಸುತ್ತಿದ್ದರು. ಮೊಬೈಲ್ ಕ್ರೈಮ್ ಕ್ರಿಮಿನಲ್ ಟ್ರ್ಯಾಕಿಂಗ್ ನೆಟ್ವರ್ಕ್ ಸಿಸ್ಟಮ್ ತಂತ್ರಾಂಶದ ಮೂಲಕ ಅನುಮಾನಾಸ್ಪದ ವ್ಯಕ್ತಿಗಳ ಫಿಂಗರ್ ಪ್ರಿಂಟ್ ಸ್ಕ್ಯಾನ್ (finger print) ಮಾಡಲಾಯಿತು. ಈ ವೇಳೆ ನವೀನ್ ನಾಯ್ಕನಿಗೆ ಅಪರಾಧ ಹಿನ್ನಲೆ ಇರುವುದು ಗೊತ್ತಾಗಿದೆ.
ವಿಚಾರಣೆ ನಡೆಸಿದಾಗ ದರೋಡೆ ಪ್ರಕರಣವೊಂದರಲ್ಲಿ ನವೀನ್ ನಾಯ್ಕ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಅನ್ನುವುದು ತಿಳಿದು ಬಂದಿದೆ. ಅಲ್ಲದೆ ಆತನ ವಿರುದ್ಧ ವಾರಂಟ್ ಕೂಡ ಜಾರಿಯಾಗಿತ್ತು. ಕೂಡಲೆ ಆತನನ್ನು ಬಂಧಿಸಿದ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಇದನ್ನೂ ಓದಿ – ಡೇಂಜರ್ ರೋಡ್ ಆಗುತ್ತಿದೆ ಶಿವಮೊಗ್ಗದ ಕಾಂಕ್ರಿಟ್ ರಸ್ತೆ, ಯಾಕೆ? ಇಲ್ಲಿದೆ 4 ಪ್ರಮುಖ ಪಾಯಿಂಟ್