ಸಚಿವ ಈಶ್ವರಪ್ಪ, ಪಾಲಿಕೆ ಸದಸ್ಯ ಚನ್ನಬಸಪ್ಪ ವಿರುದ್ಧ ಕೇಸ್ ದಾಖಲು

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | POLITICS NEWS | 8 ಏಪ್ರಿಲ್ 2022

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದ ಬಳಿಕ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪ ಸಂಬಂಧ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಮತ್ತು ಮಹಾನಗರ ಪಾಲಿಕೆ ಸದಸ್ಯ ಚನ್ನಬಸಪ್ಪ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.

ನ್ಯಾಯಾಲಯದ ಸೂಚನೆ ಮೇರೆಗೆ ಪೀಸ್ ಆರ್ಗನೈಸೇಷನ್ ಸಂಸ್ಥೆ ಮುಖ್ಯಸ್ಥ ರಿಯಾಜ್ ಅಹಮದ್ ಅವರು ನೀಡಿದ ದೂರಿನ ಹಿನ್ನೆಲೆಯಲ್ಲಿ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೂರಿನಲ್ಲಿ ಏನಿದೆ?

ಫೆಬ್ರವರಿ 20ರಂದು ರಾತ್ರಿ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆಯಾಯಿತು. ಆ ಬಳಿಕ ಸಚಿವ ಕೆ.ಎಸ್.ಈಶ್ವರಪ್ಪ ಮತ್ತು ಪಾಲಿಕೆ ಸದಸ್ಯ ಚನ್ನಬಸಪ್ಪ ಅವರು ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿಕೊಂಡು ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ. ಫೆ.21ರಂದು ಮೆರವಣಿಗೆ ನೆಪದಲ್ಲಿ ದೊಂಬಿ ನಡೆಸಿ, ಕಲ್ಲು ತೂರಾಟ ಮಾಡಲಾಗಿದೆ. ಮನೆ, ಅಂಗಡಿಗಳಿಗೆ ಹಾನಿ ಉಂಟು ಮಾಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಜವಾಬ್ದಾರಿಯುತ ಸ್ಥಾನದಲ್ಲಿದ್ದಾರೆ

ಕೆ.ಎಸ್.ಈಶ್ವರಪ್ಪ ಮತ್ತು ಚನ್ನಬಸಪ್ಪ ಅವರು ಜವಾಬ್ದಾರಿಯುತ ಸ್ಥಾನದಲ್ಲಿದ್ದಾರೆ. ಆದರೂ ಗಲಬೆ ಉಂಟಾಗುವ ಹೇಳಿಕೆ ನೀಡಿದ್ದಾರೆ. ಇದರ ಪರಿಣಾಮ ಸೀಗೆಹಟ್ಟಿ ಬಡಾವಣೆ, ರವಿವರ್ಮ ಬೀದಿ ಮುಂತಾದ ಕಡೆ ಗಲಭೆಗಳು ನಡೆದಿವೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಪೊಲೀಸರು ದೂರು ಸ್ವೀಕರಿಸಲಿಲ್ಲ

ಘಟನೆ ಸಂಬಂಧ ಪೊಲೀಸ್ ಠಾಣೆಗೆ ದೂರು ನೀಡಿದರೂ ಸ್ವೀಕರಿಸಿರಲಿಲ್ಲ. ಪೊಲೀಸ್ ಇನ್ಸ್ ಪೆಕ್ಟರ್ ಅವರಿಗೆ ಈ ಮೇಲ್ ಮೂಲಕ ದೂರು ನೀಡಿದ್ದರು ಎಫ್ಐಆರ್ ದಾಖಲಾಗಿರಲಿಲ್ಲ. ಜಿಲ್ಲಾ ರಕ್ಷಣಾಧಿಕಾರಿ ಅವರನ್ನು ಭೇಟಿಯಾಗಿ ದೂರು ಸಲ್ಲಿಸಿದ್ದರೂ ಪ್ರಕರಣ ದಾಖಲು ಮಾಡಿರಲಿಲ್ಲ. ಆದ್ದರಿಂದ ಬೆಂಗಳೂರಿನಲ್ಲಿರುವ ಅಪರ ಮುಖ್ಯ ಮಹಾನಗರ ದಂಡಾಧಿಕಾರಿಗಳ ವಿಶೇಷ ನ್ಯಾಯಾಲಯದಲ್ಲಿ ಪ್ರಕರಣ ದಾಖಲು ಖಾಸಗಿ ದೂರು ಸಲ್ಲಿಸಿದ್ದರು. ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಲಯ ಸಚಿವ ಈಶ್ವರಪ್ಪ ಮತ್ತು ಪಾಲಿಕೆ ಸದಸ್ಯ ಚನ್ನಬಸಪ್ಪ ವಿರುದ್ಧ ಪ್ರಕರಣ ದಾಖಲಿಸುವಂತೆ ಅದೇಶಿಸಿದೆ.

ಕೋರ್ಟ್ ಸೂಚನೆ ಹಿನ್ನೆಲೆಯಲ್ಲಿ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Shimoga Nanjappa Hospital

POLITICS NEWS

ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

ಈ ಮೇಲ್ – shivamoggalive@gmail.com

WhatsApp Number – 7411700200

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment