ಶಿವಮೊಗ್ಗ ಲೈವ್.ಕಾಂ | SHIMOGA NEWS | 9 ಜುಲೈ 2020
ಕ್ವಾರೆಂಟೈನ್ ಮಾರ್ಗಸೂಚಿಯನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಹಾಗೂ ವಿಡಿಯೋ ಕಾನ್ಫರೆನ್ಸ್ ಮೂಲಕ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಈ ಕುರಿತು ಸೂಚನೆಗಳನ್ನು ನೀಡಿದರು.
ಜಿಲ್ಲೆಯಲ್ಲಿ ಕರೋನಾ ಪ್ರಕರಣಗಳು ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕ್ವಾರೆಂಟೈನ್ ಮಾರ್ಗಸೂಚಿ ಸೇರಿದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಹೋಂ ಕ್ವಾರೆಂಟೈನ್ ಉಲ್ಲಂಘನೆಯ ಪ್ರಥಮ ಪ್ರಕರಣದಲ್ಲಿಯೇ ಎಫ್‍ಐಆರ್ ದಾಖಲಿಸಬೇಕು. ಮೂರನೇ ಬಾರಿ ಉಲ್ಲಂಘಿಸಿದರೆ ಐಪಿಸಿ 107 ಅಡಿ ಪ್ರಕರಣ ದಾಖಲಿಸಿ ಕ್ರಮ ಜರುಗಿಸಬೇಕು ಎಂದು ಅವರು ಎಲ್ಲಾ ತಹಶೀಲ್ದಾರ್‍ಗಳಿಗೆ ಸೂಚನೆ ನೀಡಿದರು.
ಮಾಸ್ಕ್ ಧರಿಸುವುದು, ಭೌತಿಕ ಅಂತರವನ್ನು ಕಾಯ್ದುಕೊಳ್ಳುವುದನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು. ಭೌತಿಕ ಅಂತರವನ್ನು ಕಾಯ್ದುಕೊಳ್ಳದೇ ವ್ಯಾಪಾರ ವಹಿವಾಟು ನಡೆಸುತ್ತಿದ್ದರೆ ಅಂತಹ ಅಂಗಡಿಯವರಿಗೆ ದಂಡ ವಿಧಿಸಬೇಕು. ಮಾಸ್ಕ್ ಧರಿಸುವುದರ ಬಗ್ಗೆ ಗ್ರಾಮೀಣ ಪ್ರದೇಶಗಳಲ್ಲೂ ಅರಿವು ಮೂಡಿಸಿ, ಉಲ್ಲಂಘಿಸಿದರೆ ದಂಡ ವಿಧಿಸುವ ಪ್ರಕ್ರಿಯೆ ಆರಂಭಿಸಬೇಕು. ಜನರು ಸೇರುವಂತಹ ಪ್ರದೇಶಗಳಲ್ಲಿ ಧ್ವನಿವರ್ಧಕಗಳ ಮೂಲಕ ನಿರಂತರವಾಗಿ ಅರಿವು ಮೂಡಿಸುವ ಕಾರ್ಯ ನಡೆಸಬೇಕು ಎಂದು ಅವರು ಹೇಳಿದರು.
ಮಾಹಿತಿ ನೀಡುವುದು ಕಡ್ಡಾಯ
ಯಾವುದೇ ಕಾರಣಕ್ಕೂ ಕಲ್ಯಾಣ ಮಂಟಪಗಳಲ್ಲಿ ಮದುವೆ ನಡೆಸಲು ಅವಕಾಶ ನೀಡಬಾರದು. ಮನೆಯಲ್ಲಿ ಕೇವಲ 50ಮಂದಿ ಮಿತಿಗೆ ಒಳಪಟ್ಟು ಮದುವೆ ನಡೆಸಲು ಸ್ಥಳೀಯ ಸಂಸ್ಥೆಯಿಂದ ಅನುಮತಿ ಪಡೆದಿರಬೇಕು. ಮದುವೆಯ ಬಳಿಕ ಕಡ್ಡಾಯವಾಗಿ ಮದುವೆಯಲ್ಲಿ ಭಾಗವಹಿಸಿದವರ ಹೆಸರು, ವಿಳಾಸ, ಮೊಬೈಲ್ ಸಂಖ್ಯೆಯನ್ನು ಸ್ಥಳೀಯಾಡಳಿತಕ್ಕೆ ಸಲ್ಲಿಸಬೇಕು. ಜಾತ್ರೆ, ಸಂತೆಗಳಿಗೆ ಅನುಮತಿಯನ್ನು ನೀಡಬಾರದು ಎಂದು ಅವರು ಸ್ಪಷ್ಟಪಡಿಸಿದರು.
ತಾಲೂಕು ಮಟ್ಟದ ಸಮಿತಿ
ಜಿಲ್ಲಾ ಮಟ್ಟದ ಸರ್ವೇಕ್ಷಣಾ ಸಮಿತಿ ರೀತಿಯಲ್ಲಿ ತಾಲೂಕು ಮಟ್ಟದಲ್ಲಿ ಸಹ ತಹಶೀಲ್ದಾರ್ ನೇತೃತ್ವದಲ್ಲಿ ಸಮಿತಿ ರಚಿಸಬೇಕು. ಇದೇ ರೀತಿ ಗ್ರಾಮ, ವಾರ್ಡ್ ಮತ್ತು ಬೂತ್ ಮಟ್ಟದಲ್ಲಿ ಕಾರ್ಯಪಡೆಯನ್ನು ತಕ್ಷಣ ರಚಿಸಿ ವರದಿಯನ್ನು ಸಲ್ಲಿಸಬೇಕು ಎಂದು ಅವರು ಸೂಚಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ, ಅಪರ ಜಿಲ್ಲಾಧಿಕಾರಿ ಜಿ.ಅನುರಾಧ, ಮೆಗ್ಗಾನ್ ನಿರ್ದೇಶಕ ಡಾ.ಸಿದ್ದಪ್ಪ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಡಾ.ರಾಜೇಶ ಸುರಗಿಹಳ್ಳಿ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
Final year students ge mathra exam anthe ….nodi sir first chapters na complete Madi amel exam Madi …small request