ಶಿವಮೊಗ್ಗದ ವಂದನಾ ಟಾಕೀಸ್ ಪ್ರೊಜೆಕ್ಟರ್ ರೂಂನಲ್ಲಿ ಬೆಂಕಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 JUNE 2021 ➤ ಸುದ್ದಿಯ ಮುಂದಿನ 6 ಪ್ಯಾರಾಗಳು ಕೆಳಗಿವೆ.

ಶಿವಮೊಗ್ಗದ ಬಿ.ಬಿ.ಸ್ಟ್ರೀಟ್‍ನಲ್ಲಿರುವ ವಂದನಾ ಟಾಕೀಸ್‍ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ದಟ್ಟ ಹೊಗೆ ಕಾಣಿಸಿಕೊಂಡ ಕೂಡಲೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಬೆಂಕಿ ನಂದಿಸಿದ್ದಾರೆ.

ಚಿತ್ರಮಂದಿರದ ಪ್ರೊಜೆಕ್ಟರ್‍ ರೂಂನಲ್ಲಿ ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಸ್ಥಳೀಯರು ಕೂಡಲೆ ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿ ಮಾಹಿತಿ ನೀಡಿದ್ದರು. ಅಗ್ನಿಶಾಮಕ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರೊಜೆಕ್ಟರ್‍ ರೂಂನಲ್ಲಿ ಕೆಲವು ಉಪಕರಣಗಳಿಗೆ ಹಾನಿಯಾಗಿದೆ.

ಚಿತ್ರ ಮಂದಿರ ಬಂದ್ ಆಗಿದೆ. ಹೀಗಿದ್ದು ಬೆಂಕಿ ಹೊತ್ತುಕೊಳ್ಳಲು ನಿಖರ ಕಾರಣ ತಿಳಿದು ಬಂದಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇನ್ಮುಂದೆ ಕರೋನ ಪರೀಕ್ಷೆ ನಿಮ್ಮ ಮನೆಯಲ್ಲೇ ಆಗುತ್ತೆ. ಶಿವಮೊಗ್ಗ ನಗರ ವ್ಯಾಪ್ತಿಯ ಯಾವುದೆ ಏರಿಯಾದಿಂದ ಕರೆ ಮಾಡಿ. ಪರೀಕ್ಷೆಗೆ ನಿಮ್ಮ ಮನೆಗೆ ಬರ್ತಾರೆ ತಜ್ಞರು.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Leave a Comment

ಮುಂದಿನ ಸುದ್ದಿ ಓದಿ TRENDING

ಕೊಡಚಾದ್ರಿ ಟ್ರೆಕ್ಕಿಂಗ್‌: ಹೃದಯಾಘಾತದಿಂದ ಸಿನಿಮಾ ನಿರ್ಮಾಪಕನ ಪುತ್ರ ಸಾವು