SHIVAMOGGA LIVE NEWS | 7 ಮಾರ್ಚ್ 2022
ಮೆಕ್ಕೆಜೋಳದ ರಾಶಿಗೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂ. ಹಾನಿ ಉಂಟಾಗಿದೆ. ಶಿವಮೊಗ್ಗದ ಸೋಮಿನಕೊಪ್ಪದಲ್ಲಿ ಘಟನೆ ಸಂಭವಿಸಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಇಲ್ಲಿನ ಕುಮಾರಪ್ಪ, ನರಸಿಂಹಪ್ಪ, ಸರಸ್ವತಮ್ಮ ಅವರಿಗೆ ಸೇರಿದ ಮೆಕ್ಕೆಜೋಳದ ರಾಶಿಗೆ ಬೆಂಕಿ ತಗುಲಿದೆ. ಸುಮಾರು 210 ಕ್ವಿಂಟಾಲ್ ಮೆಕ್ಕೆ ಜೋಳವನ್ನು ಒಂದು ಕಡೆ ರಾಶಿ ಮಾಡಿ ಇಡಲಾಗಿತ್ತು. ಇದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದೆ.
ಅಗ್ನಿಶಾಮಕ ಸಿಬ್ಬಂದಿ ಗ್ರಾಮಸ್ಥರ ನೆರವಿನೊಂದಿಗೆ ಬೆಂಕಿ ನಂದಿಸಿದರು. ಬೆಂಕಿಯಿಂದಾಗಿ ಲಕ್ಷಾಂತರ ರೂ. ನಷ್ಟ ಉಂಟಾಗಿದೆ.
ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದ ಹಾಗೆ ಮಾಜಿ ಶಾಸಕಿ ಶಾರದಾ ಪೂರ್ಯಾನಾಯ್ಕ್ ಅವರು ಸ್ಥಳಕ್ಕೆ ಭೇಟಿ ನೀಡಿ, ವೈಯಕ್ತಿವಾಗಿ ಧನಸಹಾಯ ಮಾಡಿದರು. ಜೆಡಿಎಸ್ ಮುಖಂಡ ಕಾಂತರಾಜ್ ಹಾಗೂ ಗ್ರಾಮಸ್ಥರು ಇದ್ದರು.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – [email protected]
WhatsApp Number – 7411700200