ಶಿವಮೊಗ್ಗ ಲೈವ್.ಕಾಂ | SHIMOGA | 5 ಏಪ್ರಿಲ್ 2020
ಮೆಗ್ಗಾನ್ ಆಸ್ಪತ್ರೆಯ ಮಕ್ಕಳ ವಿಭಾಗದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್’ನಿಂದ ಅಗ್ನಿ ಅವಘಡ ಸಂಭವಿಸಿದೆ. ಕಟ್ಟಡದಲ್ಲಿ ಹೊಗೆ ಕಾಣಿಸಿಕೊಂಡ ಕೂಡಲೇ ಸಿಬ್ಬಂದಿಗಳು ಮಕ್ಕಳು, ಬಾಣಂತಿಯರನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಿದ್ದಾರೆ.
ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಇದ್ದಾರಿಂದ ಭಾರಿ ಅನಾಹುತ ತಪ್ಪಿದಂತಾಗಿದೆ.
ಮಕ್ಕಳು ಸರ್ಜಿ ಅಸ್ಪತ್ರೆಗೆ ಶಿಫ್ಟ್
ಶಾರ್ಟ್ ಸರ್ಕಿಟ್’ನಿಂದ ಮಕ್ಕಳಿಗೆ ತೊಂದರೆ ಆಗಬಾರದು ಎಂಬ ಕಾರಣಕ್ಕೆ, ಕೂಡಲೇ ಅವರನ್ನು ಶಿಫ್ಟ್ ಮಾಡಲಾಯಿತು. ಮಕ್ಕಳನ್ನು ಸರ್ಜಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಗುಡುಗು ಸಹಿತ ಮಳೆಯಿಂದಾಗಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿರುವ ಸಾದ್ಯತೆ ಇದೆ ಎಂದು ತಿಳಿದು ಬಂದಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]