ಜೆರಾಕ್ಸ್ ಅಂಗಡಿಯಲ್ಲಿ ಬೆಂಕಿ ಅವಘಡ, ಸ್ವಲ್ಪದರಲ್ಲಿ ತಪ್ಪಿತು ಭಾರೀ ಅನಾಹುತ, ಏನೇನೆಲ್ಲ ಹಾನಿಯಾಗಿದೆ ಗೊತ್ತಾ?

ಶಿವಮೊಗ್ಗ ಲೈವ್.ಕಾಂ | SHIMOGA | 7 ಮಾರ್ಚ್ 2020

ಶಿವಮೊಗ್ಗದ ಜೆರಾಕ್ಸ್ ಅಂಗಡಿಯೊಂದರಲ್ಲಿ ಬೆಳಗ್ಗೆ ದಿಢೀರ್ ಬೆಂಕಿ ಕಾಣಿಸಿಕೊಂಡು, ಆತಂಕ ಸೃಷ್ಟಿಸಿತ್ತು. ಅಂಗಡಿಯಿಂದ ದಟ್ಟ ಹೊಗೆ ಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿದ್ದಾರೆ. ಇದರಿಂದ ದೊಡ್ಡ ಅನಾಹುತ ತಪ್ಪಿದೆ.

ಬಾಲರಾಜ ಅರಸ್ ರಸ್ತೆಯಲ್ಲಿರುವ ಜೆರಾಕ್ಸ್ ಅಂಗಡಿಯಲ್ಲಿ ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದೆ. ಕೆಲಸಕ್ಕೆ ಬಂದಿದ್ದ ಯುವಕ ಜೆರಾಕ್ಸ್ ಮೆಷಿನ್ ಆನ್ ಮಾಡಿ, ಸಮೀಪದ ಅಂಗಡಿಯಿಂದ ಪೇಪರ್ ತರಲು ತೆರಳಿದ್ದ. ಹೋಗುವಾಗ ಅಂಗಡಿ ಬಾಗಿಲು ಹಾಕಿದ್ದ. ಈ ವೇಳೆ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗುತ್ತಿದೆ.

ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ, ಕೂಡಲೆ ಬೆಂಕಿ ನಂದಿಸಿದ್ದಾರೆ. ಇದರಿಂದ ಭಾರಿ ಅನಾಹುತ ತಪ್ಪಿದೆ. ಅಂಗಡಿಯಲ್ಲಿದ್ದ ಜೆರಾಕ್ಸ್ ಮಿಷಿನ್ ಸೇರಿದಂತೆ ಹಲವು ವಸ್ತುಗಳು ಹಾನಿಯಾಗಿದೆ ಎಂದು ತಿಳಿದು ಬಂದಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

Leave a Comment