SHIVAMOGGA LIVE NEWS | FIRING | 3 ಜೂನ್ 2022
ಶಿವಮೊಗ್ಗದಲ್ಲಿ ಇವತ್ತು ಬೆಳಗ್ಗೆ ರೌಡಿಯೊಬ್ಬನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ರೌಡಿ ಹರ್ಷದ್ ಅಲಿಯಾಸ್ ಜಾಮೂನ್ (30) ಎಂಬಾತನ ಬಲಗಾಲಿಗೆ ಗುಂಡು ಹೊಡೆಯಲಾಗಿದೆ. ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಹರ್ಷದ್ ಸಾಮಾನ್ಯ ಆರೋಪಿಯಲ್ಲ. ಹತ್ತು ವರ್ಷದ ಜೈಲು ಶಿಕ್ಷೆಯಾದ ಪ್ರಕರಣದಲ್ಲಿ, ಸುಪ್ರೀಂ ಕೋರ್ಟ್’ನಿಂದ ಜಾಮೀನು ಪಡೆದು ಬಂದಿದ್ದಾನೆ.
ಯಾರಿವನು ಹರ್ಷದ್?
ಬುದ್ದಾನಗರ ನಿವಾಸಿ ಹರ್ಷದ್ ಅಲಿಯಾಸ್ ಜಾಮೂನು ಹಲ್ಲೆ, ಮನೆಗಳ್ಳತನ ಮತ್ತು ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಈತನ ವಿರುದ್ಧ ವಿವಿಧ ಠಾಣೆಗಳಲ್ಲಿ ಐದು ಪ್ರಕರಣ ದಾಖಲಾಗಿವೆ. ಈ ಹಿಂದೆ ಕೋಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮಾರಣಾಂತಿಕ ಹಲ್ಲೆ ಪ್ರಕರಣದಲ್ಲಿ ಆರೋಪ ಸಾಬೀತಾಗಿತ್ತು. 2017ರ ಜುಲೈ 10ರಂದು ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆ ವಿಧಿಸಿತ್ತು.
ಸುಪ್ರೀಂ ಮೆಟ್ಟಿಲು ಹತ್ತಿದ್ದ
ಜೈಲು ಶಿಕ್ಷೆಯಾಗಿದ್ದ ಪ್ರಕರಣದಲ್ಲಿ ಆರೋಪಿ ಹರ್ಷದ್ ಸುಪ್ರೀಂ ಕೋರ್ಟ್ ಮೆಟ್ಟಿಲು ಹತ್ತಿದ್ದ. ಜಾಮೀನು ಪಡೆದುಕೊಂಡಿದ್ದ. ಆ ಬಳಿಕವು ತಮ್ಮ ಕುಕೃತ್ಯಗಳನ್ನು ಮುಂದುವರೆಸಿದ್ದ. ಹಲವು ಅಪರಾಧ ಚಟುವಟಿಕೆಯಲ್ಲಿ ಭಾಗಿಯಾಗಿದ್ದ.
ಪೊಲೀಸರ ಮೇಲೆಯೆ ಚಾಕು ಬೀಸಿದ
ಹರ್ಷದ್, ಚಾಕು ತೋರಿಸಿ ವ್ಯಕ್ತಿಯೊಬ್ಬರಿಗೆ ಹಣ ನೀಡುವಂತೆ ಬೆದರಿಕೆ ಹಾಕಿದ್ದ. ಈ ಸಂಬಂಧ ಜೂನ್ 1ರಂದು ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದರು. ಕಾರ್ಯಾಚರಣೆ ವೇಳೆ ಹರ್ಷದ್ ಪೊಲೀಸರ ಮೇಲೆ ಚಾಕು ಬೀಸಿದ್ದಾನೆ ಎಂದು ಆರೋಪಿಸಲಾಗಿದೆ.
ಆತ್ಮರಕ್ಷಣೆಗೆ ಹಾರಿದ ಗುಂಡು
ಹರ್ಷದ್ ಅಲಿಯಾಸ್ ಜಾಮೂನು ಚಾಕು ಬೀಸಿದ್ದರಿಂದ ಪೊಲೀಸರು ಆತ್ಮರಕ್ಷಣೆಗಾಗಿ ಗುಂಡ ಹಾರಿಸಿದ್ದಾರೆ. ತುಂಗಾ ನಗರ ಠಾಣೆ ಇನ್ಸ್ ಪೆಕ್ಟರ್ ಮಂಜುನಾಥ್ ಅವರು ಗುಂಡು ಹಾರಿಸಿದ್ದು, ಹರ್ಷದ್ ಬಲಗಾಲಿಗೆ ತಗುಲಿದೆ. ಗಾಯಗೊಂಡಿದ್ದ ಆತನನ್ನು ಪೊಲೀಸರೆ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ರೌಡಿ ಕಾಲಿಗೆ ಗುಂಡು ಹೊಡೆದ ಪೊಲೀಸರು
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
- ಶಿವಮೊಗ್ಗದ ಫ್ರೀಡಂ ಪಾರ್ಕ್ನಲ್ಲಿ 3 ದಿನ ಫಲಪುಷ್ಪ ಪ್ರದರ್ಶನ, ಈ ವರ್ಷದ ವಿಶೇಷತೆ ಏನು?
- 2022ರಲ್ಲಿ ಅಪ್ಲೋಡ್ ಆಗಿದ್ದ ವಿಡಿಯೋ, ಶಿವಮೊಗ್ಗದ ಯುವಕನಿಗೆ ಈಗ ಶುರು ಸಂಕಷ್ಟ
- ಅಡಿಕೆ ಧಾರಣೆ | 22 ಜನವರಿ 2025 | ಇವತ್ತು ಯಾವ್ಯಾವ ಅಡಿಕೆ ಎಷ್ಟಿದೆ ರೇಟ್?
- ಸೈನ್ಸ್ ಮೈದಾನ, ಸಂಜೆ ಪಾರ್ಕಿಂಗ್ ಸ್ಥಳಕ್ಕೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ
- ಇನ್ಮುಂದೆ ಕಾಗೋಡು ತಿಮ್ಮಪ್ಪ, ಡಾಕ್ಟರ್ ಕಾಗೋಡು ತಿಮ್ಮಪ್ಪ
- ಕುವೆಂಪು ವಿವಿ, 84 ವಿದ್ಯಾರ್ಥಿಗಳಿಗೆ ಚಿನ್ನದ ಪದಕ, ಹೇಗಿತ್ತು 34ನೇ ಘಟಿಕೋತ್ಸವ?