ಗಾಂಧಿ ಬಜಾರ್ ಸೇರಿದಂತೆ ಹಲವು ಏರಿಯಾಗಳು ಇವತ್ತಿಂದ ಒಂದು ವಾರ ಸೀಲ್ ಡೌನ್, ಹೇಗಿತ್ತು ಮೊದಲ ದಿನ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 23 ಜುಲೈ 2020

ಶಿವಮೊಗ್ಗದ ಪ್ರಮುಖ ವಾಣಿಜ್ಯ ಕೇಂದ್ರ ಗಾಂಧಿ ಬಜಾರ್ ಸೇರಿದಂತೆ ಏಳು ವಾರ್ಡ್‍ಗಳನ್ನು ಸೀಲ್‍ ಡೌನ್ ಮಾಡಲಾಗಿದೆ. ಸೋಂಕಿತರು ಮತ್ತು ಕಂಟೈನ್ಮೆಂಟ್‍ ಜೋನ್‍ಗಳು ಹೆಚ್ಚಿರುವ ಹಿನ್ನೆಲೆಯಲ್ಲಿ ಕರೋನ ನಿಯಂತ್ರಣಕ್ಕಾಗಿ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ.

ಹತ್ತು ಗಂಟೆವರೆಗೆ ಜನ ದಟ್ಟಣೆ

ಗಾಂಧಿ ಬಜಾರ್‍ನಲ್ಲಿ ಬೆಳಗ್ಗೆಯಿಂದಲೇ ಅಂಗಡಿಗಳನ್ನು ಬಂದ್ ಮಾಡಲಾಗಿತ್ತು. ಆದರೆ ತರಕಾರಿ ಖರೀದಿಗೆ ಜನರು ಬರುತ್ತಿದ್ದರು. ಹತ್ತು ಗಂಟೆವರೆಗೂ ಜನದಟ್ಟಣೆ ಇತ್ತು. ಆ ಬಳಿಕ ಪಾಲಿಕೆ ಅಧಿಕಾರಿಗಳು ಗಾಂಧಿ ಬಜಾರ್ ಮುಖ್ಯ ರಸ್ತೆಯನ್ನು ಬಂದ್ ಮಾಡಿಸಿದರು.

https://www.facebook.com/liveshivamogga/videos/293318925088440/?t=0

ಸೀಲ್ ಡೌನ್ ಪ್ರದೇಶದಲ್ಲಿ ಮೆಡಿಕಲ್ ಶಾಪ್‍ಗಳನ್ನು ಮಾತ್ರೆ ತೆಗೆಯಲಾಗಿದೆ. ಉಳಿದಂತೆ ಎಲ್ಲ ಅಂಗಡಿಗಳು ಬಂದ್ ಆಗಿವೆ. ವ್ಯಾಪಾರ, ವಹಿವಾಟು ಸಂಪೂರ್ಣ ಸ್ಥಗಿತಗೊಂಡಿದೆ. ಸೀಲ್ ಡೌನ್ ಪ್ರದೇಶದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.

ಮೌನವಾಗಿ ಆಕ್ರೋಶ ಹೊರಹಾಕಿದ ಜನ

ಮತ್ತೊಂದೆಡೆ ಏಳು ವಾರ್ಡ್‍ಗಳನ್ನು ಸೀಲ್‍ಡೌನ್ ಮಾಡಿರುವ ಮಹಾನಗರ ಪಾಲಿಕೆಯ ಕ್ರಮವೇ ಅವೈಜ್ಞಾನಿಕ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಸ್ತೆಗಳಿದು ಮೌನ ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದರು.

https://www.facebook.com/liveshivamogga/videos/1207339782992092/?t=2

BH ರಸ್ತೆಯಲ್ಲಿ ವಾಹನ ಸಂಚಾರವಿದೆ

ಇನ್ನು, ಬಿ.ಹೆಚ್‍.ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅವಕಾಶವಿದೆ. ಬೆಳಗ್ಗೆಯಿಂದ ವಾಹನಗಳು ಎಂದಿನಂತೆ ಸಂಚರಿಸುತ್ತಿವೆ. ಆದರೆ ಗಾಂಧಿ ಬಜಾರ್ ‍ಕಡೆಗೆ ಇರುವ ಅಂಗಡಿಗಳನ್ನು ಪಾಲಿಕೆ ಅಧಿಕಾರಿಗಳು ಬಂದ್ ಮಾಡಿಸುತ್ತಿದ್ದಾರೆ. ಆದರೆ ಅಧಿಕಾರಿಗಳ ಈ ಕ್ರಮಕ್ಕೆ ವ್ಯಾಪಾರಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಬಸ್‍ ಸಂಚಾರಕ್ಕಿಲ್ಲ ಯಾವುದೇ ತೊಂದರೆ

ಕೆಎಸ್‍ಆರ್‍ಟಿಸಿ ಮತ್ತು ಖಾಸಗಿ ಬಸ್ ಸಂಚಾರಕ್ಕೆ ಯಾವುದೇ ಸಮಸ್ಯೆ ಇಲ್ಲ. ಸೀಲ್‍ ಡೌನ್ ಪ್ರದೇಶದ ವ್ಯಾಪ್ತಿಯಿಂದ ಬಸ್ ನಿಲ್ದಾಣಗಳು ಹೊರಗಿವೆ. ಇದರಿಂದ ಬಸ್ ಸಂಚಾರ ಎಂದಿನಂತೆ ಇದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 23, 2020

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment