ಶಿವಮೊಗ್ಗ ಲೈವ್.ಕಾಂ | SHIMOGA NEWS | 23 ಜುಲೈ 2020
ಶಿವಮೊಗ್ಗದ ಪ್ರಮುಖ ವಾಣಿಜ್ಯ ಕೇಂದ್ರ ಗಾಂಧಿ ಬಜಾರ್ ಸೇರಿದಂತೆ ಏಳು ವಾರ್ಡ್ಗಳನ್ನು ಸೀಲ್ ಡೌನ್ ಮಾಡಲಾಗಿದೆ. ಸೋಂಕಿತರು ಮತ್ತು ಕಂಟೈನ್ಮೆಂಟ್ ಜೋನ್ಗಳು ಹೆಚ್ಚಿರುವ ಹಿನ್ನೆಲೆಯಲ್ಲಿ ಕರೋನ ನಿಯಂತ್ರಣಕ್ಕಾಗಿ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಹತ್ತು ಗಂಟೆವರೆಗೆ ಜನ ದಟ್ಟಣೆ
ಗಾಂಧಿ ಬಜಾರ್ನಲ್ಲಿ ಬೆಳಗ್ಗೆಯಿಂದಲೇ ಅಂಗಡಿಗಳನ್ನು ಬಂದ್ ಮಾಡಲಾಗಿತ್ತು. ಆದರೆ ತರಕಾರಿ ಖರೀದಿಗೆ ಜನರು ಬರುತ್ತಿದ್ದರು. ಹತ್ತು ಗಂಟೆವರೆಗೂ ಜನದಟ್ಟಣೆ ಇತ್ತು. ಆ ಬಳಿಕ ಪಾಲಿಕೆ ಅಧಿಕಾರಿಗಳು ಗಾಂಧಿ ಬಜಾರ್ ಮುಖ್ಯ ರಸ್ತೆಯನ್ನು ಬಂದ್ ಮಾಡಿಸಿದರು.
ಸೀಲ್ ಡೌನ್ ಪ್ರದೇಶದಲ್ಲಿ ಮೆಡಿಕಲ್ ಶಾಪ್ಗಳನ್ನು ಮಾತ್ರೆ ತೆಗೆಯಲಾಗಿದೆ. ಉಳಿದಂತೆ ಎಲ್ಲ ಅಂಗಡಿಗಳು ಬಂದ್ ಆಗಿವೆ. ವ್ಯಾಪಾರ, ವಹಿವಾಟು ಸಂಪೂರ್ಣ ಸ್ಥಗಿತಗೊಂಡಿದೆ. ಸೀಲ್ ಡೌನ್ ಪ್ರದೇಶದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.
ಮೌನವಾಗಿ ಆಕ್ರೋಶ ಹೊರಹಾಕಿದ ಜನ
ಮತ್ತೊಂದೆಡೆ ಏಳು ವಾರ್ಡ್ಗಳನ್ನು ಸೀಲ್ಡೌನ್ ಮಾಡಿರುವ ಮಹಾನಗರ ಪಾಲಿಕೆಯ ಕ್ರಮವೇ ಅವೈಜ್ಞಾನಿಕ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಸ್ತೆಗಳಿದು ಮೌನ ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದರು.
BH ರಸ್ತೆಯಲ್ಲಿ ವಾಹನ ಸಂಚಾರವಿದೆ
ಇನ್ನು, ಬಿ.ಹೆಚ್.ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅವಕಾಶವಿದೆ. ಬೆಳಗ್ಗೆಯಿಂದ ವಾಹನಗಳು ಎಂದಿನಂತೆ ಸಂಚರಿಸುತ್ತಿವೆ. ಆದರೆ ಗಾಂಧಿ ಬಜಾರ್ ಕಡೆಗೆ ಇರುವ ಅಂಗಡಿಗಳನ್ನು ಪಾಲಿಕೆ ಅಧಿಕಾರಿಗಳು ಬಂದ್ ಮಾಡಿಸುತ್ತಿದ್ದಾರೆ. ಆದರೆ ಅಧಿಕಾರಿಗಳ ಈ ಕ್ರಮಕ್ಕೆ ವ್ಯಾಪಾರಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಬಸ್ ಸಂಚಾರಕ್ಕಿಲ್ಲ ಯಾವುದೇ ತೊಂದರೆ
ಕೆಎಸ್ಆರ್ಟಿಸಿ ಮತ್ತು ಖಾಸಗಿ ಬಸ್ ಸಂಚಾರಕ್ಕೆ ಯಾವುದೇ ಸಮಸ್ಯೆ ಇಲ್ಲ. ಸೀಲ್ ಡೌನ್ ಪ್ರದೇಶದ ವ್ಯಾಪ್ತಿಯಿಂದ ಬಸ್ ನಿಲ್ದಾಣಗಳು ಹೊರಗಿವೆ. ಇದರಿಂದ ಬಸ್ ಸಂಚಾರ ಎಂದಿನಂತೆ ಇದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]