ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 8 ಫೆಬ್ರವರಿ 2022
ಹಿಜಾಬ್, ಕೇಸರಿ ಶಾಲು ಸಂಘರ್ಷ ಶಿವಮೊಗ್ಗದಲ್ಲಿ ಇವತ್ತು ತಾರಕಕ್ಕೇರಿತ್ತು. ಕಲ್ಲು ತೂರಾಟ ನಡೆದು ನಗರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಈ ಹಿನ್ನೆಲೆಯಲ್ಲಿ ಎರಡು ದಿನ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಇವತ್ತಿನ ಅಹಿತರ ಘಟನೆಗಳು ಸಂಬಂಧ ವಿವಿಧ ಪೊಲೀಸ್ ಠಾಣೆಯಲ್ಲಿ ಐದು ಪ್ರಕರಣ ದಾಖಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀಪ್ರಸಾದ್ ಅವರು ತಿಳಿಸಿದ್ದಾರೆ.
ಯಾವೆಲ್ಲ ಠಾಣೆಯಲ್ಲಿ ಏನೆಲ್ಲ ಕೇಸ್ ದಾಖಲಾಗಿದೆ?
› ಕೇಸ್ 1 – ಬಾಪೂಜಿನಗರ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಲ್ಲು ತೂರಟವಾಗಿತ್ತು. ಈ ಸಂಬಂಧ ಕಲ್ಲು ತೂರಿದವರ ವಿರುದ್ಧ, ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
› ಕೇಸ್ 2 – ಬಾಪೂಜಿನಗರ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಲ್ಲು ತೂರಟದ ವೇಳೆ ಪೊಲೀಸ್ ವಾಹನಕ್ಕೆ ಹಾನಿ ಉಂಟಾಗಿದೆ. ಈ ಸಂಬಂಧ ಪೊಲೀಸರು ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
› ಕೇಸ್ 3 – ಶಿವಮೊಗ್ಗದ ಟ್ಯಾಂಕ್ ಮೊಹಲ್ಲಾದಲ್ಲಿ ಯುವಕನೊಬ್ಬನ ಮೇಲೆ 30ಕ್ಕೂ ಹೆಚ್ಚು ಜನರು ಹಲ್ಲೆ ನಡೆಸಿದ್ದಾರೆ. ದಾಳಿ ನಡೆಸಿದ ಗುಂಪಿನ ವಿರುದ್ಧ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
› ಕೇಸ್ 4 – ಶಿಕಾರಿಪುರದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳು ಖಾಸಗಿ ಬಸ್ ಮೇಲೆ ಕಲ್ಲು ತೂರಿದ್ದಾರೆ. ಈ ಸಂಬಂಧ ಶಿಕಾರಿಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
› ಕೇಸ್ 5 – ಸಾಗರದಲ್ಲಿ ಪ್ರತಿಭಟನೆ ವೇಳೆ ಕಲ್ಲು ತೂರಟವಾಗಿದ್ದು, ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಈ ಸಂಬಂಧ ಸಾಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ | ಶಿವಮೊಗ್ಗದ ವ್ಯಾಪಾರಿಗಳಿಗೆ ಗಾಯದ ಮೇಲೆ ಬರೆ ಎಳೆದ ಹಿಜಾಬ್, ಕೇಸರಿ ಶಾಲು ಸಂಘರ್ಷ
Shimoga District Profile | About Shivamogga Live | Whatsapp Number 7411700200
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422