ಶಿವಮೊಗ್ಗದ ಫ್ರೀಡಂ ಪಾರ್ಕ್‌ನಲ್ಲಿ 3 ದಿನ ಫಲಪುಷ್ಪ ಪ್ರದರ್ಶನ, ಈ ವರ್ಷದ ವಿಶೇಷತೆ ಏನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Shivamogga-Live-9-years-Number-1.avif

SHIVAMOGGA LIVE NEWS, 22 JANUARY 2025

ಶಿವಮೊಗ್ಗ : ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಜಿಲ್ಲಾ ಉದ್ಯಾನ ಕಲಾ ಸಂಘದ ವತಿಯಿಂದ ಶಿವಮೊಗ್ಗದ ಫ್ರೀಡಂ ಪಾರ್ಕ್‌ನಲ್ಲಿ ಜ.24 ರಿಂದ 26ರವರೆಗೆ ಮಲೆನಾಡ ಕರಕುಶಲ ಉತ್ಸವ ಮತ್ತು ಪುಷ್ಪಸಿರಿ ಫಲಪುಷ್ಪ (Flower Show) ಪ್ರದರ್ಶನ ಆಯೋಜಿಸಲಾಗಿದೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್‌.ಹೇಮಂತ್‌, ಫಲಪುಷ್ಪ ಪ್ರದರ್ಶನದ ವಿಶೇಷತೆಗಳ ಕುರಿತು ಮಾಹಿತಿ ನೀಡಿದರು.

ಹೂವಿನಲ್ಲಿ ಕವಿಮನೆ, ಚಂದ್ರಗುತ್ತಿ ದೇಗುಲ

ಈ ಬಾರಿ 28 ಅಡಿ ಎತ್ತರದ ಕುಪ್ಪಳಿಯ ಕವಿ ಮನೆ, 16 ಅಡಿ ಎತ್ತರದ ಚಂದ್ರಗುತ್ತಿಗೆ ದೇಗುಲದ ಮಾದರಿಗಳನ್ನು ಹೂವಿನಿಂದ ಸೃಷ್ಟಿಸಲಾಗುತ್ತದೆ. ಬೆಂಗಳೂರಿನ ಲಾಲ್‌ ಬಾಗ್‌ನಲ್ಲಿ ಫಲಪುಷ್ಪ ಪ್ರದರ್ಶನದಲ್ಲಿ ಹೂವಿನಿಂದ ಕಲಾಕೃತಿ ಸೃಷ್ಟಿಸುವ ಕಲಾವಿದರೆ ಇಲ್ಲಿಯು ಮಾದರಿಗಳನ್ನು ಸಿದ್ಧಪಡಿಸಲಿದ್ದಾರೆ.

– ಎನ್‌.ಹೇಮಂತ್‌, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ

BLACK-LINE

ಕರಕುಶಲ ವಸ್ತುಗಳ ಪ್ರದರ್ಶನ

ಫಲಪುಷ್ಪ ಪ್ರದರ್ಶನದ ಒಳಾಂಗಣದಲ್ಲಿ ಇದೇ ಮೊದಲ ಬಾರಿಗೆ ವಿವಿಧ ಸ್ವಸಹಾಯ ಸಂಘಗಳ ಮಹಿಳೆಯರು ತಯಾರಿಸಿರುವ 100ಕ್ಕೂ ಹೆಚ್ಚು ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಇದಕ್ಕಾಗಿ ಒಳಾಂಗಣದಲ್ಲಿ 35‌ ಸ್ಟಾಲ್‌ಗಳನ್ನು ನಿರ್ಮಿಸಲಾಗಿದೆ. ಇಲ್ಲಿ ನರೇಗಾ ಯೋಜನೆ, ಚಂದ್ರಕಲಾ ಅವರ ಬೋನ್ಸಾಯ್‌ ಪ್ಲಾಂಟ್‌ಗಳ ಪ್ರದರ್ಶನವಿರಲಿದೆ ಎಂದರು.

flower-show-in-Shimoga-city

ಹೊರಾಂಗಣದಲ್ಲಿ 25 ಮಳಿಗೆಗಳನ್ನು ಸ್ಥಾಪಿಸಲಾಗುತ್ತಿದೆ. ಇಲ್ಲಿ ವಿವಿಧ ಕೃಷಿ ಉಪಕರಣ, ವಿವಿಧ ಸಂಸ್ಥೆಗಳು, ತಿನಿಸುಗಳ ಮಳಿಗೆ ಇರಲಿದೆ ಎಂದು ಹೇಮಂತ್‌ ಅವರು ಸುದ್ದಿಗೋಷ್ಠಿಯಲ್ಲಿ ಇರಲಿವೆ.

ಸಾರ್ವಜನಿಕ ಪ್ರವೇಶ ಉಚಿತ

ಈ ಬಾರಿ ಫಲಪುಷ್ಪ ಪ್ರದರ್ಶನಕ್ಕೆ ಸಾರ್ವಜನಿಕರಿಗೆ ಮುಕ್ತ ಅವಕಾಶವಿರಲಿದೆ. ಮೂರು ದಿನ ಬೆಳಗ್ಗೆ 9 ಗಂಟೆಯಿಂದ ರಾತ್ರಿ 9 ಗಂಟೆವರೆಗೆ ಪ್ರದರ್ಶನ ಆಯೋಜಿಸಲಾಗಿದೆ. ಸಾರ್ವಜನಿಕರಿಗೆ ಈ ಬಾರಿ ಉಚಿತ ಪ್ರವೇಶ ಇರಲಿದೆ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಯೋಜನ ನಿರ್ದೇಶಕಿ ನಂದಿನಿ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕಿ ಸವಿತಾ.ಜೆ, ಜಿಲ್ಲಾ ಉದ್ಯಾನ ಸಂಘದ ಉಪಾಧ್ಯಕ್ಷ ಸಿದ್ದಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇದನ್ನೂ ಓದಿ » ಇನ್ಮುಂದೆ ಕಾಗೋಡು ತಿಮ್ಮಪ್ಪ, ಡಾಕ್ಟರ್‌ ಕಾಗೋಡು ತಿಮ್ಮಪ್ಪ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 22, 2025

ಜಯನಗರ ಪೊಲೀಸ್‌ ಠಾಣೆಯಲ್ಲಿ 8 ವಾಹನಗಳ ಹರಾಜು, ದಿನಾಂಕ ಪ್ರಕಟ

ಜಯನಗರ ಪೊಲೀಸ್‌ ಠಾಣೆಯಲ್ಲಿ 8 ವಾಹನಗಳ ಹರಾಜು, ದಿನಾಂಕ ಪ್ರಕಟ

ಶಿವಮೊಗ್ಗದಲ್ಲಿ ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 31 ಮಾರ್ಚ್‌ 2026

ಶಿವಮೊಗ್ಗದಲ್ಲಿ ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 31 ಮಾರ್ಚ್‌ 2026

ಗೋಪಾಳದ ಕ್ರೀಡಾ ಸಂಕೀರ್ಣದಲ್ಲಿ ಬೇಸಿಗೆ ಶಿಬಿರ, ಸರ್ಕಾರಿ ಶಾಲೆ ಮಕ್ಕಳಿಗೆ ಶೇ.50ರಷ್ಟು ರಿಯಾಯಿತಿ

ಗೋಪಾಳದ ಕ್ರೀಡಾ ಸಂಕೀರ್ಣದಲ್ಲಿ ಬೇಸಿಗೆ ಶಿಬಿರ, ಸರ್ಕಾರಿ ಶಾಲೆ ಮಕ್ಕಳಿಗೆ ಶೇ.50ರಷ್ಟು ರಿಯಾಯಿತಿ

ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆಗೆ ಪ್ರಶಸ್ತಿ

ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆಗೆ ಪ್ರಶಸ್ತಿ

ಹಾಸ್ಟೆಲ್‌ನಲ್ಲಿ ಸಾಲು ಸಾಲು ಸಮಸ್ಯೆ, ಶಿವಮೊಗ್ಗ ಡಿ.ಸಿ.ಗೆ ದೂರು ನೀಡಿದ ವಿದ್ಯಾರ್ಥಿಗಳು

ಹಾಸ್ಟೆಲ್‌ನಲ್ಲಿ ಸಾಲು ಸಾಲು ಸಮಸ್ಯೆ, ಶಿವಮೊಗ್ಗ ಡಿ.ಸಿ.ಗೆ ದೂರು ನೀಡಿದ ವಿದ್ಯಾರ್ಥಿಗಳು

6 ರಿಂದ 16 ವರ್ಷದ ಮಕ್ಕಳಿಗೆ ರಂತ ತರಬೇತಿ ಶಿಬಿರ, ಎಲ್ಲಿ? ಏನೇನು ಕಲಿಸಲಾಗುತ್ತದೆ?

6 ರಿಂದ 16 ವರ್ಷದ ಮಕ್ಕಳಿಗೆ ರಂತ ತರಬೇತಿ ಶಿಬಿರ, ಎಲ್ಲಿ? ಏನೇನು ಕಲಿಸಲಾಗುತ್ತದೆ?

₹50 ಪೆಟ್ರೋಲ್‌ ಹಾಕಿಸಿಕೊಂಡು ಹಣ ಕೇಳಿದ್ದಕ್ಕೆ ಬಂಕ್‌ ಮಾಲೀಕ, ಸಿಬ್ಬಂದಿ ಮೇಲೆ ಅಟ್ಯಾಕ್‌

₹50 ಪೆಟ್ರೋಲ್‌ ಹಾಕಿಸಿಕೊಂಡು ಹಣ ಕೇಳಿದ್ದಕ್ಕೆ ಬಂಕ್‌ ಮಾಲೀಕ, ಸಿಬ್ಬಂದಿ ಮೇಲೆ ಅಟ್ಯಾಕ್‌

ವರದಹಳ್ಳಿಯಲ್ಲಿ ಶ್ರೀಧರ ಸ್ವಾಮೀಜಿ ಆರಾಧನಾ ಮಹೋತ್ಸವ, ಏನೇನು ಕಾರ್ಯಕ್ರಮ ಇರಲಿದೆ?

ವರದಹಳ್ಳಿಯಲ್ಲಿ ಶ್ರೀಧರ ಸ್ವಾಮೀಜಿ ಆರಾಧನಾ ಮಹೋತ್ಸವ, ಏನೇನು ಕಾರ್ಯಕ್ರಮ ಇರಲಿದೆ?

ಇವತ್ತು ದೀನಬಂಧು ಟ್ರಸ್ಟ್‌ 25ನೇ ವರ್ಷದ ಬೆಳ್ಳಿ ಹಬ್ಬ, ಕಾರ್ಯಕ್ರಮದಲ್ಲಿ ಯಾರೆಲ್ಲ ಭಾಗವಹಿಸ್ತಾರೆ?

ಇವತ್ತು ದೀನಬಂಧು ಟ್ರಸ್ಟ್‌ 25ನೇ ವರ್ಷದ ಬೆಳ್ಳಿ ಹಬ್ಬ, ಕಾರ್ಯಕ್ರಮದಲ್ಲಿ ಯಾರೆಲ್ಲ ಭಾಗವಹಿಸ್ತಾರೆ?

ಭದ್ರಾವತಿಯ ಗೌಡರಹಳ್ಳಿ ಬಳಿ ಅಪಘಾತ, ಟ್ರಾಕ್ಟರ್‌ ಚಾಲಕನ ವಿರುದ್ಧ ಪ್ರಕರಣ, ಆಗಿದ್ದೇನು?

ಭದ್ರಾವತಿಯ ಗೌಡರಹಳ್ಳಿ ಬಳಿ ಅಪಘಾತ, ಟ್ರಾಕ್ಟರ್‌ ಚಾಲಕನ ವಿರುದ್ಧ ಪ್ರಕರಣ, ಆಗಿದ್ದೇನು?

Leave a Comment