SHIVAMOGGA LIVE NEWS | 6 NOVEMBER 2022
SHIMOGA | ರಸ್ತೆ, ಫುಟ್ ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಮತ್ತಷ್ಟು ಬಿರುಸುಗೊಂಡಿದೆ. ಒತ್ತುವರಿ ತೆರವು ಮಾಡದಿದ್ದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಡಳಿತ ಮತ್ತು ಮಹಾನಗರ ಪಾಲಿಕೆ ಎಚ್ಚರಿಕೆ ನೀಡಿದೆ. (road clearance)
ಅಮೀರ್ ಅಹಮದ್ ಸರ್ಕಲ್ ಸಮೀಪದ ಸುಲ್ತಾನ್ ಮಾರ್ಕೆಟ್ ರಸ್ತೆಯಲ್ಲಿ ಗುಜರಿ ವಸ್ತು ತೆರವು ಮಾಡುವಂತೆ ವ್ಯಾಪಾರಿಗಳಿಗೆ ಸೂಚಿಸಲಾಗಿದೆ. ರಸ್ತೆಯಲ್ಲಿ ಗುಜರಿ ವಸ್ತುಗಳನ್ನು ಇರಿಸಿಕೊಂಡು ವ್ಯಾಪಾರ ನಡೆಸಲಾಗುತ್ತಿತ್ತು. ಕಾರ್ಯಾಚರಣೆ ನಡಸಿದ ಪಾಲಿಕೆ ಅಧಿಕಾರಿಗಳು ರಸ್ತೆಯಲ್ಲಿ ಹರಡಿಕೊಂಡಿರುವ ವಸ್ತುಗಳನ್ನು ವಶಕ್ಕೆ ಪಡೆಯುವುದಾಗಿ ತಿಳಿಸಿದರು.
(road clearance)
ವ್ಯಾಪಾರಿಗಳಿಗೆ ಮನವರಿಕೆ ಮಾಡಿದ ಅಧಿಕಾರಿಗಳು, ರಸ್ತೆಯಿಂದ ವಸ್ತುಗಳನ್ನು ತೆರವು ಮಾಡದಿದ್ದರೆ ಜಿಲ್ಲಾಡಳಿತ ಕಠಿಣ ಕ್ರಮಕ್ಕೆ ಮುಂದಾಗಿರುವುದಾಗಿ ತಿಳಿಸಿದರು. ಹಾಗಾಗಿ ಕೆಲವು ವ್ಯಾಪಾರಿಗಳು ರಸ್ತೆ ಮೇಲಿದ್ದ ವಸ್ತುಗಳನ್ನು ತೆರವು ಮಾಡಿದರು. ಉಳಿದವರಿಗೆ ಸಮಯ ನೀಡಲಾಯಿತು.
ಕ್ಲಿಕ್ ಮಾಡಿ ಇದನ್ನೂ ಓದಿ | ಶಿವಮೊಗ್ಗದ ಗಾಂಧಿ ಬಜಾರ್ ಸುತ್ತಮುತ್ತ ಡಿಸಿ, ಎಸ್.ಪಿ ನೇತೃತ್ವದಲ್ಲಿ 3 ಗಂಟೆ ದಿಢೀರ್ ಕಾರ್ಯಾಚರಣೆ
ಜಿಲ್ಲಾಧಿಕಾರಿ ಡಾ. ಸೆಲ್ವಮಣಿ, ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಮತ್ತು ಪಾಲಿಕೆ ಕಮಿಷನರ್ ಮಾಯಣ್ಣಗೌಡ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ, ಗಾಂಧಿ ಬಜಾರ್ ಸುತ್ತಮುತ್ತ ಫುಟ್ ಪಾತ್ ಒತ್ತುವರಿ ತೆರವು ಮಾಡಿಸಲಾಗಿತ್ತು. ಈಗ ಉಳಿದ ರಸ್ತೆಗಳಲ್ಲೂ ಫುಟ್ ಪಾತ್ ಮತ್ತು ರಸ್ತೆ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರೆಸಲಾಗಿದೆ. (road clearance)
ಸುಲ್ತಾನ್ ಮಾರುಕಟ್ಟೆಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಪಾಲಿಕೆ ಆರೋಗ್ಯ ನಿರೀಕ್ಷಕ ವಿಕಾಸ್, ಲೋಹಿತ್, ಸುರೇಶ್, ಶಿವಾನಂದಮೂರ್ತಿ, ಶಿವಮೂರ್ತಪ್ಪ, ಲಕ್ಕಣ್ಣ, ರವಿಕಿರಣ್ ಹಾಗೂ ಪಾಲಿಕೆ ಸಿಬ್ಬಂದಿಗಳು ಭಾಗವಹಿಸಿದ್ದರು.
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.