ಶಿವಮೊಗ್ಗದಲ್ಲಿ ಲಕ್ಷ ಲಕ್ಷ ಮೌಲ್ಯದ ಅತ್ಯಂತ ಅಪರೂಪದ ನಾಟ ವಶ, ರಾಜ್ಯದಲ್ಲೇ ಮೊದಲು ಇಂತಹ ಪ್ರಕರಣ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 11 NOVEMBER 2023

SHIMOGA : ದುಬಾರಿ ಬೆಲೆಯ ಕರಿ ಮರದ ನಾಟಾ ಸಾಗಣೆ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಅರಣ್ಯಾಧಿಕಾರಿಗಳು ದಾಳಿ ನಡೆಸಿದ್ದಾರೆ. ಸುಮಾರು ಲಕ್ಷಾಂತರ ರೂ. ಮೌಲ್ಯದ ನಾಟಾ ವಶಪಡಿಸಿಕೊಳ್ಳಲಾಗಿದೆ.

ಹೊಳೆಹೊನ್ನೂರು ರಸ್ತೆಯಲ್ಲಿ ಬೊಲೇರೋ ಪಿಕಪ್‌ ವಾಹನದಲ್ಲಿ ಲಕ್ಷಾಂತರ ಮೌಲ್ಯದ ನಾಟಾ ತರಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಶಂಕರ ವಲಯ ಅರಣ್ಯಾಧಿಕಾರಿಗಳು ದಾಳಿ ನಡೆಸಿದರು. ಬೊಲೇರೋ ಪಿಕಪ್‌ ವಾಹನವನ್ನು ಪರಿಶೀಲಿಸಿದಾಗ ಬೀಟೆ ನಾಟಾದ ಜೊತೆಗೆ ಕರಿ ಮರದ ನಾಟಾ ಸಾಗಣೆ ಮಾಡುತ್ತಿರುವುದು ಗೊತ್ತಾಗಿದೆ.

ರಾಜ್ಯದಲ್ಲೆ ಮೊದಲು ಈ ನಾಟಾ ವಶಕ್ಕೆ

ರಾಜ್ಯದಲ್ಲೆ ಮೊದಲ ಬಾರಿ ಕರಿ ಮರದ ನಾಟಾ ವಶಕ್ಕೆ ಪಡೆಯಲಾಗಿದೆ ಎಂದು ಶಂಕರ ವಲಯದ ಅರಣ್ಯಾಧಿಕಾರಿ ಸುಧಾಕರ್‌ ತಿಳಿಸಿದರು. ಡಯಸ್ಪೋರಸ್‌ ಎಬಿನಂ ಎಂಬ ತಳಿಯ ಮರ ಷೆಡ್ಯೂಲ್‌ 1ರ ಅಡಿ ಅಪಾಯದ ಅಂಚಿನಲ್ಲಿದೆ. ಆದ್ದರಿಂದ ಈ ಮರದ ನಾಟಾ ಸಾಗಣೆ ಅಪರಾಧ. ಈ ಹಿನ್ನೆಲೆ ಆರೋಪಿಯನ್ನು ಬಂಧಿಸಿ, ಕರಿ ಮರದ ನಾಟ ವಶಪಡಿಸಿಕೊಳ್ಳಲಾಗಿದೆ.

ಟೊಮ್ಯಾಟೋ ಟ್ರೇಗಳ ಅಡಿ ನಾಟಾ

ಬೊಲೇರೋ ಪಿಕಪ್‌ನಲ್ಲಿ ಟೊಮ್ಯಾಟೋ ಸಾಗಣೆಗೆ ಟ್ರೇಗಳಿದ್ದವು. ಅದರ ಕೆಳಗೆ ಟಾರ್ಪಲ್ ಸುತ್ತಿ ಬೀಟೆ ಮತ್ತು ಕರಿ ಮರದ ನಾಟಾ ಇರಿಸಲಾಗಿತ್ತು. ಒಟ್ಟು 32 ನಾಟಾ ವಶಕ್ಕೆ ಪಡೆಯಲಾಗಿದೆ. ಆರೋಪಿ ನಾಟಾವನ್ನು ಎಲ್ಲಿಗೆ ಸಾಗಿಸುತ್ತಿದ್ದ ಎಂಬುದರ ವಿಚಾರಣೆ ನಡೆಸಲಾಗುತ್ತಿದೆ ಎಂದು ವಲಯ ಅರಣ್ಯಾಧಿಕಾರಿ ಸುಧಾಕರ್‌ ತಿಳಿಸಿದರು. ಇದರ ವಿಡಿಯೋ ಇಲ್ಲಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 11, 2023

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

Leave a Comment