ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 12 FEBRUARY 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA : ಅರಣ್ಯ ಇಲಾಖೆಯ ವಿವಿಧ ಹುದ್ದೆಗಳಿಗೆ ಬಿಎಸ್ಸಿ ಅರಣ್ಯಶಾಸ್ತ್ರ ಪದವಿಧರರನ್ನು ಮಾತ್ರ ಪರಿಗಣಿಸಬೇಕು ಎಂದು ಆಗ್ರಹಿಸಿ ಅರಣ್ಯಶಾಸ್ತ್ರ ಪದವಿಧರರು ಮತ್ತು ವಿದ್ಯಾರ್ಥಿಗಳ ಸಂಘದ ವತಿಯಿಂದ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಸೋಮವಾರ ಪ್ರತಿಭಟನೆ ನಡೆಸಲಾಯಿತು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ವಲಯ ಅರಣ್ಯಾಧಿಕಾರಿ ಮತ್ತು ಉಪ ವಲಯ ಅರಣ್ಯಾಧಿಕಾರಿ ಹುದ್ದೆಗಳ ನೇಮಕಾತಿಗೆ ಬಿ.ಎಸ್ಸಿ ಅರಣ್ಯಶಾಸ್ತ್ರ ಪದವಿಯನ್ನಷ್ಟೆ ಪರಿಗಣಿಸಬೇಕು. ಪಿಯುಸಿ ವಿಜ್ಞಾನ ವಿಷಯ ಮತ್ತು ಸಿಇಟಿಯಲ್ಲಿ ಉತ್ತಮ ಅಂಕ ಪಡೆದವರು ಅರಣ್ಯಶಾಸ್ತ್ರ ಅಧ್ಯಯನಕ್ಕೆ ಬರುತ್ತಾರೆ. ಪ್ರತಿಭಾನ್ವಿತ ಅಭ್ಯರ್ಥಿಗಳನ್ನು ಈ ಹುದ್ದೆಗಳಿಗೆ ನೇಮಿಸಿವುದು ಸೂಕ್ತ ಎಂದು ಆಗ್ರಹಿಸಿದರು.
ಉಪ ವಲಯ ಅರಣ್ಯಾಧಿಕಾರಿಗಳ ಹುದ್ದೆಗಳಿಗೆ ಶೇ.50ರಷ್ಟು ಮುಂಬಡ್ತಿ ಮತ್ತು ಶೇ.50ರಷ್ಟು ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಆದರೆ ಆಡಳಿತ ಸುಧಾರಣಾ ಅಯೋಗದ ಅಧ್ಯಕ್ಷರಾಗಿದ್ದ ಹಿಂದಿನ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್ ಅವರು ಸರ್ಕಾರಕ್ಕೆ ಕೆಲವು ಶಿಫಾರಸು ಮಾಡಿದ್ದಾರೆ. ಡಿವೈ ಆರ್‌ಎಫ್‌ಒ ಹುದ್ದೆಗೆ ಶೇ.100ರಷ್ಟು ಮುಂಬಡ್ತಿ ಆಧಾರದಲ್ಲಿ ಭರ್ತಿ ಮಾಡಿಕೊಳ್ಳಬೇಕು ಎಂದು ಸೂಚಿಸಿದ್ದಾರೆ. ಈ ಶಿಫಾರಸು ಈ ಹುದ್ದೆ ಸೃಷ್ಟಿಸುವಾಗ ಇದ್ದ ಮೂಲ ಆಶಾಯಕ್ಕೆ ವಿರುದ್ಧವಾಗಿದೆ ಎಂದು ಪ್ರತಿಭಟನಾನಿರತರು ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾಧಿಕಾರಿ ಮೂಲಕ ಅರಣ್ಯಶಾಸ್ತ್ರ ಪದವಿಧರರು ಮತ್ತು ವಿದ್ಯಾರ್ಥಿಗಳ ಸಂಘ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿತು.
ಇದನ್ನೂ ಓದಿ – VISL ಕಾರ್ಖಾನೆ ವಿಚಾರ, ದೆಹಲಿಗೆ ನಿಯೋಗ, 2 ಪ್ರಮುಖ ಬೇಡಿಕೆ ಈಡೇರಿಕೆಗೆ ಉಕ್ಕು ಪ್ರಾಧಿಕಾರಕ್ಕೆ ಒತ್ತಾಯ