BREAKING NEWS | ಶಿವಮೊಗ್ಗ ಪಾಲಿಕೆ ಮಾಜಿ ಸದಸ್ಯೆಯ ಮನೆ ಕುಸಿತ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

ಶಿವಮೊಗ್ಗ | ಭಾರಿ ಮಳೆಗೆ ಶಿವಮೊಗ್ಗದಲ್ಲಿ ಕಳೆದ ರಾತ್ರಿ ಮಾಜಿ ಕಾರ್ಪೊರೇಟರ್ ಒಬ್ಬರ ಮನೆ ಕುಸಿದಿದೆ. ಆದರೆ ಈತನಕ ಪಾಲಿಕೆಯ ಅಧಿಕಾರಿಗಳು, ಜನಪ್ರತಿನಿಧಿಗಳ್ಯಾರು ಅವರ ನೆರವಿಗೆ ಬಂದಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Shimoga Nanjappa HOspital

ಶಿವಮೊಗ್ಗ ನಗರದ ಶೇಷಾದ್ರಿಪುರಂನ 2ನೇ ಅಡ್ಡರಸ್ತೆಯಲ್ಲಿ ನಾಲ್ಕು ಮನೆಗಳು ಕುಸಿದಿವೆ. ಅದೃಷ್ಟವಶಾತ್ ಯಾರಿಗೂ ಸಮಸ್ಯೆಯಾಗಿಲ್ಲ.

ಮಾಜಿ ಕಾರ್ಪೊರೇಟರ್ ಮನೆ

ಕುಸಿದ ನಾಲ್ಕು ಮನೆಗಳ ಪೈಕಿ ಒಂದು ಮನೆ ಮಾಜಿ ಕಾರ್ಪೊರೇಟರ್ ರಂಗಮ್ಮ ಹನುಮಂತಪ್ಪ ಅವರಿಗೆ ಸೇರಿದೆ. ಕಳೆದ ರಾತ್ರಿ ಮನೆ ಕುಸಿಯುತ್ತಿದ್ದಂತೆ ಮಾಜಿ ಕಾರ್ಪೊರೇಟರ್ ರಂಗಮ್ಮ ಹನುಮಂತಪ್ಪ ಅವರು ವಾರ್ಡ್ ಕಾರ್ಪೊರೇಟರ್, ಪಾಲಿಕೆ ಅಧಿಕಾರಿಗಳಿಗೆ ಮಾಹಿತಿ ತಿಳಿಸಿದ್ದಾರೆ. ಆದರೆ ಯಾರೊಬ್ಬರು ಈತನಕ ನೆರವಿಗೆ ಬಂದಿಲ್ಲ ಎಂದು ಕಣ್ಣೀರು ಹಾಕುತ್ತಿದ್ದಾರೆ.

‘ರಾತ್ರಿ ಜೋರು ಶಬ್ದ ಬಂತು. ನಮ್ಮ ಮನೆ ಅಕ್ಕಪಕ್ಕದ ಹುಡುಗರೆಲ್ಲ ಬಂದು ನಮ್ಮನ್ನ ಕಾಪಾಡಿದರು. ಎಲ್ಲರೂ ರಾತ್ರಿಯಿಂದ ಅಧಿಕಾರಿಗಳು, ಕಾರ್ಪೊರೇಟರ್’ಗೆ ಕರೆ ಮಾಡುತ್ತಿದ್ದಾರೆ. ರಾತ್ರಿಯಿಂದಲೂ ಈಗ ಬಂದೆ, ಇಲ್ಲೇ ಹತ್ತಿರದಲ್ಲಿದ್ದೀನಿ ಅಂತಿದ್ದಾರೆ. ಯಾರೂ ಬರುತ್ತಿಲ್ಲ. ಮಳೆಯಲ್ಲೇ ರಾತ್ರಿ ಪೂರ್ತಿ ಹೊರಗೆ ಇದ್ದೇವೆ’ರಂಗಮ್ಮ ಹನುಮಂತಪ್ಪ, ಮಾಜಿ ಕಾರ್ಪೊರೇಟರ್

ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಇದ್ದಾಗ ರಂಗಮ್ಮ ಹನುಮಂತಪ್ಪ ಅವರನ್ನು ಶಿವಮೊಗ್ಗ ಮಹಾನಗರ ಪಾಲಿಕೆಗೆ ಕಾರ್ಪೊರೇಟರ್ ಆಗಿ ನಾಮನಿರ್ದೇಶನ ಮಾಡಲಾಗಿತ್ತು.

ನೆರವಿಗೆ ನಿಂತ ಸ್ಥಳೀಯರು

ರಾತ್ರಿ 10 ಗಂಟೆ ಹೊತ್ತಿಗೆ ಮನೆಗಳು ಕುಸಿದಿವೆ. ಜೋರು ಶಬ್ದ ಬರುತ್ತಿದ್ದಂತೆ ಸ್ಥಳೀಯರು ನಾಲ್ಕು ಮನೆಗಳಲ್ಲಿದ್ದವರನ್ನು ರಕ್ಷಣೆ ಮಾಡಿದ್ದಾರೆ. ಅವರಿಗೆ ಸ್ಥಳೀಯರೆ ಆಶ್ರಯ ನೀಡಿದ್ದಾರೆ. ಆದರೆ ಪಾಲಿಕೆ ಅಧಿಕಾರಿಗಳು ಈತನ ಸ್ಥಳಕ್ಕೆ ಭೇಟಿ ನೀಡಿಲ್ಲ. ಮನೆ ಕಳೆದುಕೊಂಡವರಿಗೆ ನೆರವು ನೀಡಿಲ್ಲ. ಇದು ಮನೆ ಕಳೆದುಕೊಂಡವರು ಮತ್ತು ಸ್ಥಳೀಯರು ಆಕ್ರೋಶಕ್ಕೆ ಕಾರಣವಾಗಿದೆ.

ಇದನ್ನೂ ಓದಿ – ಭಾರಿ ಮಳೆ, ಶಿವಮೊಗ್ಗ ಜಿಲ್ಲೆಯ ಹಲವು ಕಡೆ 100 ಮಿ.ಮೀಗಿಂತಲೂ ಹೆಚ್ಚು ವರ್ಷಧಾರೆ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ಇದನ್ನೂ ಓದಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 9, 2022

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment