ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 25 ಜೂನ್ 2020
ಭೂ ಸುಧಾರಣಾ ಕಾಯ್ದೆಗೆ ರಾಜ್ಯ ಸರ್ಕಾರ ತಿದ್ದುಪಡಿ ತಂದಿರುವುದಕ್ಕೆ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಡಿಯೂರಪ್ಪ ಅವರಿಗೆ ತಾಕತ್ತಿದ್ದರೆ ಭೂ ಹಿಡುವಳಿ ಮಿತಿ ಕಡಿತಗೊಳಿಸಲಿ ಎಂದು ಸವಾಲು ಹಾಕಿದ್ದಾರೆ.

ಜೈಲಿಗೆ ಹೋಗಲು ನಾವು ರೆಡಿ
ಉಳುವವನೆ ಹೊಲದೊಡೆಯ ಜಾರಿಗೊಳಿಸಿದ್ದು ಕಾಂಗ್ರೆಸ್ ಪಕ್ಷ. ಆದರೆ ಈಗ ಸರ್ಕಾರ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದು, ಶ್ರೀಮಂತರು, ರಿಯಲ್ ಎಸ್ಟೇಟ್‍ನವರ ಪರವಾಗಿ ನಿಂತಿದೆ. ಈ ತಿದ್ದುಪಡಿಯನ್ನು ಹಿಂಪಡೆಯದೆ ಹೋದರೆ ಹೋರಾಟ ಮಾಡಿ, ಜೈಲಿಗ ಹೋಗಲು ಸಿದ್ಧ ಎಂದು ಕಾಗೋಡು ತಿಮ್ಮಪ್ಪ ಆಕ್ರೋಶ ವ್ಯಕ್ತಪಡಿಸಿದರು.
ಯಡಿಯೂರಪ್ಪಗೆ ಕಾಗೋಡು ಸವಾಲು
ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತರುವ ಬದಲು ಭೂ ಹಿಡುವಳಿ ಮಿತಿಯನ್ನು ಕಡಿತಗೊಳಿಸಲಿ. ಯಡಿಯೂರಪ್ಪ ಅವರಿಗೆ ತಾಖತ್ತಿದ್ದರೆ ಈ ನೀತಿಯನ್ನು ಜಾರಿಗೊಳಿಸಲಿ ಎಂದು ಸವಾಲು ಹಾಕಿದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್, ವಿಧಾನ ಪರಿಷತ್ ಸದಸ್ಯ ಪ್ರಸನ್ನಕುಮಾರ್, ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಮಾಜಿ ಶಾಸಕರಾದ ಹೆಚ್.ಎಂ.ಚಂದ್ರಶೇಖರಪ್ಪ, ಪ್ರಸನ್ನಕುಮಾರ್ ಮತ್ತಿತರರು ಸುದ್ದಿಗೋಷ್ಠಿಯಲ್ಲಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






