ಚುನಾವಣೆ ಹೊಸ್ತಿಲಲ್ಲಿ ಕಾಂಗ್ರೆಸ್‌ಗೆ ಶಾಕ್, ಶಿವಮೊಗ್ಗದ ಮಾಜಿ ಜಿಲ್ಲಾಧ್ಯಕ್ಷ ರಾಜೀನಾಮೆ, ಕಾರಣವೇನು?

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

SHIVAMOGGA LIVE NEWS | 9 MARCH 2023

SHIMOGA : ಕಾಂಗ್ರೆಸ್ ಪಕ್ಷ ಪ್ರತಿಪಕ್ಷವಾಗಿ ಸಂಘಟಿತವಾಗಿ ಕೆಲಸ ಮಾಡದ ಕಾರಣ ತಾವು ಪಕ್ಷಕ್ಕೆ ರಾಜೀನಾಮೆ (RESIGNATION) ನೀಡುತ್ತಿರುವುದಾಗಿ ಮಲೆನಾಡು ರೈತ ಹೋರಾಟ ಸಮಿತಿ ಪ್ರಮುಖ ತಿ.ನಾ.ಶ್ರೀನಿವಾಸ್ ಘೋಷಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಸೇರಿದಂತೆ ಎಲ್ಲಾ ರಾಜಕೀಯ ಪಕ್ಷಗಳು ಕೇವಲ ಹಣವಿದ್ದವರಿಗೆ ಮಾತ್ರ ಮಣೆ ಹಾಕುತ್ತಿದೆ. ಕಡಿಮೆ ಜನಸಂಖ್ಯೆ ಇರುವ ಸಮುದಾಯಗಳಿಗೆ, ಹಣವಿಲ್ಲದವರಿಗೆ ಬೆಲೆ ನೀಡುವುದಿಲ್ಲ. ಎಲ್ಲಾ ಪಕ್ಷಗಳು ಚುನಾವಣೆಯನ್ನು ವ್ಯಾಪಾರ ಮಾಡಿಕೊಂಡಿವೆ ಎಂದು ಆರೋಪಿಸಿದರು.

Thi Na Srinivas

ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ

ಶರಾವತಿ ಸಂತ್ರಸ್ತರು, ಬಗರ್‌ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ಕೊಡಿಸುವುದು ತಮ್ಮ ಗುರಿಯಾಗಿದ್ದು, ಮಲೆನಾಡು ರೈತ ಹೋರಾಟ ಸಮಿತಿಯ ಮೂಲಕ ಹೋರಾಟ ತೀವ್ರಗೊಳಿಸಲಿದ್ದೇನೆ. ಸಾಗರ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರವಾಗಿ ಕಣಕ್ಕೆ ಇಳಿಯಲಿದ್ದೇನೆ ಎಂದರು.

ಇದನ್ನೂ ಓದಿ – ಗೋಪಿ ಸರ್ಕಲ್ ನಲ್ಲಿ ಡಿಜೆ, ರೈನ್ ಡಾನ್ಸ್, ಕುಣಿದು ಕುಪ್ಪಳಿಸಿದ ಶಿವಮೊಗ್ಗದ ಜನ, ಹೇಗಿತ್ತು ಸಡಗರ? ಫೋಟೊ ಸಹಿತ ರಿಪೋರ್ಟ್

ಕಾಂಗ್ರೆಸ್ ಪ್ರತಿಪಕ್ಷವಾಗಿ ತನ್ನ ಕೆಲಸ ಸರಿಯಾಗಿ ಮಾಡಿಲ್ಲ. ಭಟ್ಟಂಗಿಗಳಿಗೆ ಮಾತ್ರ ಬೆಲೆ ನೀಡುತ್ತಿದೆ. ಹಲವು ವರ್ಷಗಳ ಕಾಲ ಪಕ್ಷ ಸಂಘಟನೆ ಮಾಡಿದವರನ್ನು ಮೂಲೆ ಗುಂಪು ಮಾಡಿ, ಇತ್ತೀಚಿಗೆ ಪಕ್ಷಕ್ಕೆ ಸೇರಿದವರಿಗೆ ಉನ್ನತ ಹಂತದ ಸ್ಥಾನಮಾನ ನೀಡಿದ್ದಾರೆ. ಈ ಎಲ್ಲಾ ಬೆಳವಣಿಗೆಗಳಿಂದ ಬೇಸತ್ತು ಪಕ್ಷಕ್ಕೆ ರಾಜೀನಾಮೆ (RESIGNATION) ನೀಡಿರುವುದಾಗಿ ತಿಳಿಸಿದರು.

ಅಭಯಾರಣ್ಯದ ಹೆಸರಿನಲ್ಲಿ, ನ್ಯಾಯಾಲಯದ ಆದೇಶದ ಹೆಸರಿನಲ್ಲಿ ಜನರನ್ನು ಒಕ್ಕಲೆಬ್ಬಿಸುವ ಪ್ರಯತ್ನ ನಡೆಯುತ್ತಿದೆ. ಇದನ್ನು ಈ ಕೂಡಲೆ ನಿಲ್ಲಿಸಬೇಕು. ಜಿಲ್ಲೆಯ ಜನಪ್ರತಿನಿಧಿಗಳ ಈ ಬಗ್ಗೆ ಧ್ವನಿ ಎತ್ತದೆ ಮೌನ ವಹಿಸಿರುವುದು ಖಂಡನೀಯ ಎಂದರು.

ರಾಜಕೀಯವಾಗಿ ಉತ್ತಮ ಬೆಳವಣಿಗೆಯಲ್ಲ

ಟಿಕೆಟ್ ಅರ್ಜಿ ಸಲ್ಲಿಸಿದವರನ್ನು ಪ್ರತ್ಯೇಕವಾಗಿ ಕರೆದು ಚುನಾವಣೆಯಲ್ಲಿ ಎಷ್ಟು ಹಣ ಖರ್ಚು ಮಾಡುತ್ತೀರಿ ಎಂಬುದನ್ನು ಪ್ರಶ್ನಿಸುತ್ತಾರೆ. ಇದು ರಾಜಕೀಯದಲ್ಲಿ ಉತ್ತಮ ಬೆಳವಣಿಗೆಯಲ್ಲ ಎಂದ ತಿ.ನಾ.ಶ್ರೀನಿವಾಸ್ ತಾವು ಯಾರ ಮನವೊಲಿಕೆಗೂ ಯಾವುದೇ ಕಾರಣಕ್ಕೂ ನಿರ್ಧಾರ ಬದಲಿಸುವುದಿಲ್ಲ ಎಂದರು.

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment