ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA | 25 ಮೇ 2020
ಕರೋನ ಸೋಂಕಿಗೆ ಚಿಕಿತ್ಸೆ ಪಡೆದು ಗುಣಮುಖವಾಗಿರುವ ನಾಲ್ವರನ್ನು ಇವತ್ತು ಮೆಗ್ಗಾನ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಜಿಲ್ಲೆಯಲ್ಲಿ ಕರೋನಾದಿಂದ ಮುಕ್ತರಾದ ಮೊದಲ ಪ್ರಕರಣ ಇದು.
ಯಾರೆಲ್ಲ ಡಿಸ್ಚಾರ್ಜ್ ಆಗಿದ್ದಾರೆ?
ಮೆಗ್ಗಾನ್ ಆಸ್ಪತ್ರೆಯ ಐಸೊಲೇಷನ್ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಾಲ್ಕು ಮಂದಿ ಸೋಂಕಿತರನ್ನು ಬಿಡುಗಡೆ ಮಾಡಲಾಗಿದೆ. ಇವರೆಲ್ಲ ಗುಜರಾತ್ ರಾಜ್ಯದ ಅಹಮದಾಬಾದ್‌ನಿಂದ ಶಿವಮೊಗ್ಗಕ್ಕೆ ಆಗಮಿಸಿದ್ದರು. ಒಟ್ಟು ಒಂಭತ್ತು ಮಂದಿ ಆಗಮಿಸಿದ್ದರು. ಈ ಪೈಕಿ ಎಂಟು ಮಂದಿಗೆ ಕರೋನ ಪಾಸಿಟಿವ್ ಬಂದಿತ್ತು.
ಗುಣಮುಖರಾದವರನ್ನು ಬೀಳ್ಕೊಟ್ಟ ಸಿಬ್ಬಂದಿ
ಎಂಟು ಪಾಸಿಟಿವ್ ಪ್ರಕರಣಗಳ ಪೈಕಿ ನಾಲ್ಕು ಮಂದಿಗೆ ಚಿಕಿತ್ಸೆ ಫಲಕಾರಿಯಾಗಿದೆ. ಗುಣಮುಖರಾದ ಹಿನ್ನೆಲೆಯಲ್ಲಿ ಇವತ್ತು ಬಿಡುಗಡೆ ಮಾಡಲಾಗಿದೆ. ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಜೇಶ್ ಸುರಗಿಹಳ್ಳಿ, ಸಿಮ್ಸ್ ನಿರ್ದೇಶಕ ಡಾ.ಗುರುಪಾದಪ್ಪ, ಜಿಲ್ಲಾ ಸರ್ಜನ್ ರಘುನಂದನ್ ಸೇರಿದಂತೆ ಮೆಗ್ಗಾನ್ ಆಸ್ಪತ್ರೆ ವೈದ್ಯರು, ಸಿಬ್ಬಂದಿಗಳು ಈ ನಾಲ್ವರನ್ನು ಬೀಳ್ಕೊಟ್ಟರು.

ರಂಜಾನ್ ಹಬ್ಬಕ್ಕೆ ಮನೆ ಸೇರಿದರು
ಗುಣಮುಖರಾದ ನಾಲ್ವರು ರಂಜಾನ್ ಹಬ್ಬದಂದು ಮನೆ ಸೇರುತ್ತಿದ್ದಾರೆ. ಇವರೆಲ್ಲ ಶಿಕಾರಿಪುರ ತಾಲೂಕಿನವರು. ಮೆಗ್ಗಾನ್ ಆಸ್ಪತ್ರೆಯ ವಾಹನದಲ್ಲೇ ಇವರನ್ನು ಶಿಕಾರಿಪುರದ ಮನೆಗೆ ಬಿಟ್ಟು ಬರಲಾಗುತ್ತಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ನಾಳೆಯಿಂದ ಶಿವಮೊಗ್ಗದ ಶೇ.90ರಷ್ಟು ಹೊಟೇಲ್ಗಳು ಬಂದ್, ಕಾರಣವೇನು?

- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





