ಶಿವಮೊಗ್ಗ ಲೈವ್.ಕಾಂ | SHIMOGA NEWS | 8 ಆಗಸ್ಟ್ 2020
ಶಿವಮೊಗ್ಗದ ನಾಲ್ಕು ಕಡೆ ರೈಲ್ವೆ ಮೇಲು ಸೇತುವೆ ನಿರ್ಮಾಣ ಕಾರ್ಯಕ್ಕೆ ಅನುಮೋದನೆ ಸಿಕ್ಕಿದೆ. ಆದಷ್ಟು ಬೇಗ ಕಾಮಗಾರಿ ಆರಂಭವಾಗಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಅರಸಾಳು ರೈಲ್ವೆ ನಿಲ್ದಾಣದಲ್ಲಿ ಇವತ್ತು ಮಾಲ್ಗುಡಿ ಮ್ಯೂಸಿಯಂಗೆ ಚಾಲನೆ ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ಶಿವಮೊಗ್ಗ ನಗರದ ವಿದ್ಯಾನಗರದಲ್ಲಿ 100ಕೋಟಿ ರೂ. ವೆಚ್ಚದಲ್ಲಿ, ಭದ್ರಾವತಿಯ ಜೆಡಿ ಕಟ್ಟೆಯಲ್ಲಿ, ಕಾಶಿಪುರ ಮತ್ತು ಸವಳಂಗ ರಸ್ತೆಯಲ್ಲಿ ರೈಲ್ವೆ ಮೇಲು ಸೇತುವೆ ನಿರ್ಮಾಣಕ್ಕೆ ಈಗಾಗಲೇ ಅನುಮೋದನೆ ದೊರೆತಿದ್ದು, ಕಾಮಗಾರಿ ಆದಷ್ಟು ಬೇಗನೆ ಆರಂಭವಾಗಲಿದೆ ಎಂದು ಅವರು ಹೇಳಿದರು.
ಸವಳಂಗ ರಸ್ತೆಯಲ್ಲಿ ಮೇಲು ಸೇತುವೆ ಜೊತೆಗೆ ಅಂಡರ್ ಪಾಸ್ ಕೂಡ ಇರಲಿದೆ. ಕಾರು, ಆಟೋ, ಬೈಕುಗಳಷ್ಟೇ ಈ ಅಂಡರ್ ಪಾಸ್‍ನಲ್ಲಿ ಓಡಾಡಬಹುದು. ಸ್ಥಳೀಯರ ಅನುಕೂಲಕ್ಕೆ ಈ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]