ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 3 ಜುಲೈ 2020
ಶಿವಮೊಗ್ಗ ಜಿಲ್ಲೆಯಲ್ಲಿ ಕರೋನಾ ಸೋಂಕು ಮತ್ತೊಂದು ಬಲಿ ಪಡೆದಿದೆ. ಅನಾರೋಗ್ಯದಿಂದ ಮೃತರಾಗಿದ್ದ ವೃದ್ಧೆಯಲ್ಲಿ ಸೋಂಕು ಇರುವುದು ಪತ್ತೆಯಾಗಿದೆ.
ಶಿವಮೊಗ್ಗದ ತುಂಗಾ ನಗರದ ಮನೆಯೊಂದರಲ್ಲಿ ಕಳೆದ ಎರಡು ದಿನದ ಹಿಂದೆ ವೃದ್ಧೆಯೊಬ್ಬರು ಮೃತರಾಗಿದ್ದರು. ಇವರ ಗಂಟಲು ದ್ರವ ಪರೀಕ್ಷೆ ನಡೆಸಿದ್ದು, ಸೋಂಕು ಪತ್ತೆಯಾಗಿದೆ. ಇದರಿಂದ ಕುಟುಂಬದವರು ಮತ್ತು ಸ್ಥಳೀಯರಲ್ಲಿ ಆತಂಕ ಸೃಷ್ಟಿ ಆಗಿದೆ.
ಜಿಲ್ಲೆಯಲ್ಲಿ ನಾಲ್ಕನೆ ಸಾವು
ಶಿವಮೊಗ್ಗ ಜಿಲ್ಲೆಯಲ್ಲಿ ಕರೋನಾಗೆ ಇದು ನಾಲ್ಕನೆ ಸಾವು. ಈ ಕುರಿತು ಪ್ರತಿಕ್ರಿಯೆ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಜಿಲ್ಲೆಯ ಇಬ್ಬರು ಮತ್ತು ಹೊರ ಜಿಲ್ಲೆಯ ಇಬ್ಬರು ಸೇರಿ ಶಿವಮೊಗ್ಗದಲ್ಲಿ ಕರೋನ ವೈರಸ್ಗೆ ನಾಲ್ಕು ಮಂದಿ್ ಮೃತರಾಗಿದ್ದಾರೆ ಎಂದು ತಿಳಿಸಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422