ಶಿವಮೊಗ್ಗ ಲೈವ್.ಕಾಂ | SHIMOGA | 13 ಮಾರ್ಚ್ 2020
ಸ್ಮಾರ್ಟ್ ಸಿಟಿ ಅಧಿಕಾರಿಗಳು ಪೂರ್ವ ಮಾಹಿತಿ ನೀಡದೆ ಕಟ್ಟಡ ಕೆಡವಿದ್ದಾರೆ. ಇದರಿಂದ ಫ್ಯಾಮಿಲಿ ಪ್ಲಾನಿಂಗ್ ಅಸೋಸಿಯೇಷನ್’ಗೆ ಸುಮಾರು 15 ಲಕ್ಷ ನಷ್ಟವಾಗಿದೆ ಎಂದು ಆರೋಪಿಸಿ ಸಂಸ್ಥೆಯ ಪ್ರಮುಖರು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಜಿಲ್ಲಾಧಿಕಾರಿ ಅವರು ಸೂಚನೆ ನೀಡಿದ್ದಾರೆ ಎಂದು ತಿಳಿಸಿ, ಪೂರ್ವ ಮಾಹಿತಿ ನೀಡದೆ ಜನವರಿ 30ರಂದು ಏಕಾಏಕಿ ಕಟ್ಟಡ ತೆರವು ಮಾಡಿದ್ದಾರೆ. ಕಾರು ಶೆಡ್, ಶೌಚಾಲಯ ಮತ್ತು ಬಾತ್ ರೂಂಗಳನ್ನು ನೆಲಸಮ ಮಾಡಲಾಗಿದೆ ಇದನ್ನು ಪುನರ್ ನಿರ್ಮಿಸಿಕೊಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಫ್ಯಾಮಿಲಿ ಪ್ಲಾನಿಂಗ್ ಅಸೋಸಿಯೇಷನ್ ಆಸ್ಪತ್ರೆ ಪಕ್ಕದಲ್ಲಿ ಸ್ಮಾರ್ಟ್ ಸಿಟಿ ವತಿಯಿಂದ ಪಾರ್ಕ್ ನಿರ್ಮಿಸಲಾಗುತ್ತಿದೆ. ಆಸ್ಪತ್ರೆ ಆವರಣದಿಂದಲೇ ಪಾರ್ಕ್ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ. ಇನ್ನು, ಪಕ್ಕದಲ್ಲೇ ರಾಜಕಾಲುವೆ ಇದ್ದು, ತಡೆಗೋಡೆ ನಿರ್ಮಿಸಲಾಗುತ್ತಿದೆ. ಕಡು ಬಡವರ ಚಿಕಿತ್ಸೆಗೆ ಇರುವ ಆಸ್ಪತ್ರೆ ಪಕ್ಕದಲ್ಲಿ ಈ ಕಾಮಗಾರಿ ನಡೆಸುತ್ತಿರುವುದು ಗರ್ಬಿಣಿಯರು ಮತ್ತು ಮಕ್ಕಳಿಗೆ ತೊಂದರೆ ಆಗಲಿದೆ ಎಂದರು.
ಫ್ಯಾಮಿಲಿ ಪ್ಲಾನಿಂಗ್ ಅಸೋಸಿಯೇಷನ್ ಸಂಸ್ಥೆಯ ಅಧ್ಯಕ್ಷೆ ಪುಷ್ಪ ಎಸ್.ಶೆಟ್ಟಿ, ಕಾರ್ಯದರ್ಶಿ ಎಸ್.ಬಿ.ಅಶೋಕ್ ಕುಮಾರ್, ಪ್ರಮುಖರಾದ ರಾಮೇಶ್ ಬಾಬು ಸೇರಿದಂತೆ ಹಲವರು ಈ ವೇಳೆ ಉಪಸ್ಥಿತರಿದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200