SHIVAMOGGA LIVE NEWS | 5 MARCH 2024
SHIMOGA : ಕಾರ್ಮಿಕರಲ್ಲದವರು ಕಾರ್ಡ್ ಪಡೆದು ಸರ್ಕಾರದ ಸೌಲಭ್ಯ ಪಡೆಯುತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಶಿವಮೊಗ್ಗ ಐಎನ್‌ಟಿಯುಸಿ ಹಾಗೂ ಕಾರ್ಮಿಕ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಜಿಲ್ಲೆಯಲ್ಲಿ ಸಾವಿರಾರು ಜನರು ಕಾರ್ಮಿಕ ಕಾರ್ಡ್ ಪಡೆದು ಅರ್ಹರಿಗೆ ಸಲ್ಲಬೇಕಾದ ಸೌಲಭ್ಯ ಪಡೆಯುತ್ತಿದ್ದಾರೆ. ಇಂತಹ ಅನರ್ಹರು ಪಡೆದಿರುವ ಗುರುತಿನ ಚೀಟಿ ನೋಂದಣಿಯನ್ನು ರದ್ದುಪಡಿಸಬೇಕು. ಅಂಥವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಇಲಾಖೆ ಮುಂದಾಗಬೇಕು ಎಂದು ಆಗ್ರಹಿಸಿದರು.
ಹೇಗೆಲ್ಲ ವಂಚನೆ ಮಾಡಲಾಗುತ್ತಿದೆ?
ನಗರ ಪ್ರದೇಶದಲ್ಲಿ ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುತ್ತಿ ರುವವರು, ವ್ಯಾಪಾರ ವ್ಯವಹಾರ ನಡೆಸುತ್ತಿರುವವರು, ನಿವೃತ್ತ ಸರ್ಕಾರಿ, ಅರೆ ಸರ್ಕಾರಿ ನೌಕರರು, ಎಪಿಎಲ್ ಕಾರ್ಡ್‌ದಾರರು ಸೇರಿ ಒಂದು ದಿನವೂ ಕಾರ್ಮಿಕರಾಗಿ ದುಡಿಯದ ಸಾವಿರಾರು ಮಂದಿ ಕಾರ್ಮಿಕರೆಂದು ಪ್ರಮಾಣ ಪತ್ರ ಪಡೆದಿದ್ದಾರೆ. ಗುತ್ತಿಗೆದಾರರ ಬಳಿ ತೆರಳಿ ಹಣ ನೀಡಿ ಉದ್ಯೋಗ ಪತ್ರ ಪಡೆದು ಅರ್ಜಿ ಸಲ್ಲಿಸಿದ್ದಾರೆ. ಇಂಥವರನ್ನು ಪತ್ತೆ ಹಚ್ಚಬೇಕು ಹಾಗೂ ಕಾರ್ಮಿಕರಲ್ಲದವರಿಗೆ ಉದ್ಯೋಗ ಪತ್ರ ನೀಡಿದವರ ವಿರುದ್ಧವೂ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.
ಇದನ್ನೂ ಓದಿ – ಉದ್ಘಾಟನೆಯಾಗಿ ಹತ್ತೇ ದಿನಕ್ಕೆ ವಿದ್ಯಾನಗರ ವೃತ್ತಾಕಾರದ ಸೇತುವೆಗೆ ಲಾರಿ ಡಿಕ್ಕಿ
ಪತಿ ಗಾರೆ ಕೆಲಸದಲ್ಲಿ ತೊಡಗಿಕೊಂಡಿದ್ದರೆ, ಆತನ ಪತ್ನಿ ಹಾಗೂ 18 ವರ್ಷ ತುಂಬಿದ ಮಕ್ಕಳಿಗೂ ಕಾರ್ಮಿಕ ಕಾರ್ಡ್ ಮಾಡಿಸಿಕೊಂಡು ಇಲಾಖೆ ಸೌಲಭ್ಯಗಳನ್ನು ಪಡೆದುಕೊಳ್ಳುತ್ತಿದ್ದಾರೆ ಎಂದು ದೂರಿದರು.
ಇದನ್ನೂ ಓದಿ – ಎಂಪಿಎಂಗೆ ನೀಡಿದ್ದ ಅರಣ್ಯ ಹಿಂಪಡೆಯಲು ಆಗ್ರಹ, ಅಕೇಶಿಯಾ, ನೀಲಗಿರಿ ನಿಷೇಧಕ್ಕೆ ಒತ್ತಾಯ
ಕಾರ್ಮಿಕ ವಿಭಾಗದ ಜಿಲ್ಲಾಧ್ಯಕ್ಷ ಜಿ.ಮಧುಕುಮಾರ್, ಶಿವಮೊಗ್ಗ ನಗರ ಉತ್ತರ ಬ್ಲಾಕ್ ಅಧ್ಯಕ್ಷ ಶಿವಕುಮಾರ, ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ವಿನಯ್, ಹೇಮಂತ, ನವೀನ, ಎನ್ಎಸ್‌ಯುಐ ಕಾರ್ಯದರ್ಶಿ ಬಾಲಾಜಿ, ನಿಖಿಲ್, ಮಲ್ಲೇಶ್ ಇತರರಿದ್ದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200