ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 19 MAY 2023
SHIMOGA : ಮೇಲಿನ ಹನಸವಾಡಿಯಲ್ಲಿರುವ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಹೆಣ್ಣು ಮಕ್ಕಳ ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿಗೆ ಉಚಿತ ಪ್ರವೇಶಾತಿಗೆ (Admission) ಅರ್ಜಿ ಆಹ್ವಾನಿಸಲಾಗಿದೆ. 2023-24ನೇ ಸಾಲಿನ ಪ್ರವೇಶಾತಿ ಬಯಸುವ ವಿದ್ಯಾರ್ಥಿಗಳು ಕೆಳಕಂಡ ಮಾನದಂಡಗಳಿಗೆ ಅನುಗುಣವಾಗಿರಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ದಾಖಲೆಗಳ ಸಹಿತ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಕಾಲೇಜಿಗೆ ತೆರಳಿ ಪ್ರಾಂಶುಪಾಲರ ಮೂಲಕ ಮೇ 25ರೊಳಗೆ ಉಚಿತವಾಗಿ ಅರ್ಜಿ ಸಲ್ಲಿಸಬೇಕು.
ಪ್ರವೇಶಾತಿಯಲ್ಲಿ (Admission) ಶೇ.75ರಷ್ಟು ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ ವಿದ್ಯಾರ್ಥಿಗಳಿಗೆ ಮತ್ತು ಶೇ.25 ರಷ್ಟು ಇತರೆ ಹಿಂದುಳಿದ ವರ್ಗದ ಸಮುದಾಯಗಳಿಗೆ ಮೀಸಲಿರಿಸಲಾಗಿದೆ. ಅಲ್ಪಸಂಖ್ಯಾತರ ಯಾವುದೇ ವಸತಿ ಶಾಲೆ, ಸರ್ಕಾರಿ ಅಥವಾ ಸರ್ಕಾರದಿಂದ ಅನುಮೋದಿಸಲ್ಪಟ್ಟ ಶಾಲೆಗಳಲ್ಲಿ 10ನೇ ತರಗತಿ ಅಧ್ಯಯನ ಮಾಡಿ ಉತ್ತೀರ್ಣರಾಗಿರಬೇಕು. ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ಕುಟುಂಬದ ವಾರ್ಷಿಕ ಆದಾಯವು ರೂ.2.50 ಲಕ್ಷಗಳನ್ನು ಮೀರಿರಬಾರದು. ವಿಕಲಚೇತನರಿಗೆ ಶೇ.3% ರಷ್ಟು ಪ್ರವೇಶ ಮೀಸಲಿರಿಸಿದೆ.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯ ಮೂವರು ಶಾಸಕರ ಪೈಕಿ ಯಾರಾಗ್ತಾರೆ ಮಿನಿಸ್ಟರ್?
ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ, ಪಠ್ಯಪುಸ್ತಕ, ಆಹಾರ ಮತ್ತು ವಸತಿ, ಸಮವಸ್ತ್ರ, ಶುಚಿ ಸಂಭ್ರಮ ಕಿಟ್, ಲೇಖನ ಸಾಮಗ್ರಿ ಸೇರಿದಂತೆ ಇತರೆ ಸೌಲಭ್ಯಗಳನ್ನು ಉಚಿತವಾಗಿ ಒದಗಿಸಲಾಗುವುದು. ತಾಂತ್ರಿಕ ಮತ್ತು ವೈದ್ಯಕೀಯ ಮತ್ತು ಇತ್ಯಾದಿ ವೃತ್ತಿಪರ ಶಿಕ್ಷಣಕ್ಕೆ ಅನುಕೂಲವಾಗಲು ವಿಜ್ಞಾನ ವಿಷಯಗಳಿಗೆ ಹಾಗೂ ವಾಣಿಜ್ಯ ವಿಷಯಗಳಿಗೆ ಆಂಗ್ಲ ಮಾಧ್ಯಮದಲ್ಲಿ ಶಿಕ್ಷಣ ನೀಡಲಾಗುವುದು. ವೃತ್ತಿಪರ ಕೋರ್ಸ್‍ಗಳ (ಎನ್‍ಇಇಟಿ/ಜೆಇಇ(ಮೇನ್ಸ್ ಅಂಡ್ ಅಡ್ವಾನ್ಸ್‍ಡ್)/ ಕೆಸಿಇಟಿ) ಪ್ರವೇಶ ಪರೀಕ್ಷೆಗೆ ವಿಶೇಷ ತರಬೇತಿಯನ್ನು ಉಚಿತವಾಗಿ ನೀಡಲಾಗುವುದು.
WATCH VIDEO
ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳ ಕಚೇರಿಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮತ್ತು ಡಾ. ಎ.ಪಿ.ಜೆ ಅಬ್ದುಲ್ ಕಲಾಂ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರ ದೂರವಾಣಿ ಸಂಖ್ಯೆ : 08182 – 220206 / 9483623537 ಗಳನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422