SHIVAMOGGA LIVE NEWS | HEALTH | 02 ಮೇ 2022
ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಯುವ ಘಟಕ ಮತ್ತು ಸೆಕ್ಯೂರ್ ಆಸ್ಪತ್ರೆ ವತಿಯಿಂದ ಶಿವಮೊಗ್ಗದಲ್ಲಿ ಇವತ್ತು ಉಚಿತ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ. ತಜ್ಞ ವೈದ್ಯರು ಆರೋಗ್ಯ ತಪಾಸಣಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಖಿಲ ಭಾರತ ವೀರಶೈವ ಮಹಾಸಭಾ ಯುವ ಘಟಕದ ಜಿಲ್ಲಾಧ್ಯಕ್ಷ ಶಿವಯೋಗಿ ಹಂಚಿನಮನೆ ಅವರು, ವಿಶ್ವಗುರು ಬಸವಣ್ಣನವರ ಜಯಂತಿ ಅಂಗವಾಗಿ ಮೇ 2ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ. ವಿನೋಬನಗರ ಶಿವಾಲಯದಲ್ಲಿ ಮಧ್ಯಾಹ್ನ 2 ಗಂಟೆಗೆವರೆಗೆ ಆರೋಗ್ಯ ತಪಾಸಣಾ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.
ತಜ್ಞ ವೈದ್ಯರು ಭಾಗಿ
ಆರೋಗ್ಯ ತಪಾಸಣಾ ಶಿಬಿರದಲ್ಲಿ ಸೆಕ್ಯೂರ್ ಆಸ್ಪತ್ರೆಯ ತಜ್ಞ ವೈದ್ಯರು ಭಾಗವಹಿಸುತ್ತಿದ್ದಾರೆ. ಫಿಜಿಷಿಯನ್ ಡಾ.ಸೌರಬ್ ಹಿರೇಮಠ, ಶ್ವಾಸಕೋಶ ತಜ್ಞ ಡಾ. ಅಭಿಷೇಕ್ ನುಚ್ಚಿನ್, ಮೂಳೆ ಮತ್ತು ಕೀಲು ತಜ್ಞ ಡಾ. ಬಿ.ಸುರೇಶ್, ಮೂತ್ರಪಿಂಡ ತಜ್ಞ ಡಾ. ಕೆ.ಆರ್.ಹರೀಶ್, ಮಕ್ಕಳ ತಜ್ಞ ಡಾ. ವಿನಾಯಕ್ ಪಿ.ಹೆಗಡೆ, ಸ್ತ್ರೀ ರೋಗ ತಜ್ಞರಾದ ಡಾ. ಕೆ.ಎಸ್.ಅಪರ್ಣಾ ಅವರು ಭಾಗವಹಿಸಲಿದ್ದಾರೆ.
ಪ್ರಮುಖರಾದ ಉಮಾ ಶಂಕರ್, ನಿತೀಶ್ ಕುಮಾರ್, ಉಮೇಶ್ ಕತ್ತಿ, ಶಿವಕುಮಾರ್, ಅಭಿಷೇಕ್, ಮಹಾಸಭಾದ ಜಿಲ್ಲಾ ಕಾರ್ಯದರ್ಶಿ ಸಿ.ಮಹೇಶ್ ಕುಮಾರ್ ಹಾಜರಿದ್ದರು.
ಇದನ್ನೂ ಓದಿ – ವಿಮಾನ ನಿಲ್ದಾಣದ ಹೆಸರಿನ ವಿಚಾರ, ಶಿವಮೊಗ್ಗದಲ್ಲಿ ಸ್ವಾಮೀಜಿಗಳ ನೇತೃತ್ವದಲ್ಲಿ ಮಹತ್ವದ ಸಭೆ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200