ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 30 AUGUST 2023
SHIMOGA : ಕಾರ್ಮಿಕ ಇಲಾಖೆಯು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಾರ್ಮಿಕರ ಮಕ್ಕಳಲ್ಲಿ 2023-24 ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರಥಮ ಮತ್ತು ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಉಚಿತ ಲ್ಯಾಪ್‍ಟಾಪ್‍ಗಳನ್ನು ನೀಡಲಾಗುತ್ತಿದೆ. ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ (Application) ಆಹ್ವಾನಿಸಿದೆ.
ಆಸಕ್ತ ವಿದ್ಯಾರ್ಥಿಗಳು ನಿಗದಿತ ನಮೂನೆ ಅರ್ಜಿಯನ್ನು ಶಿವಮೊಗ್ಗ ಉಪ ವಿಭಾಗದ ಕಾರ್ಮಿಕ ಅಧಿಕಾರಿ ಕಚೇರಿಯಿಂದ ಪಡೆದು, ಭರ್ತಿ ಮಾಡಬೇಕು. ಅರ್ಜಿಯೊಂದಿಗೆ ಕಟ್ಟಡ ಕಾರ್ಮಿಕರ ನೋಂದಣಿ ಗುರುತಿನ ಚೀಟಿ, ಮಕ್ಕಳ ಆಧಾರ್ ಕಾರ್ಡ್, ವ್ಯಾಸಂಗ ದೃಢೀಕರಣ ಪತ್ರ, ಎಸ್.ಎಸ್.ಎಲ್.ಸಿ. ದೃಢೀಕೃತ ಅಂಕಪಟ್ಟಿ, ಇದುವರೆಗೆ ಯಾವುದೇ ಯೋಜನೆಯಡಿ ಲ್ಯಾಪ್‍ಟಾಪ್ ಪಡೆಯದಿರುವ ಬಗ್ಗೆ ಸ್ವಯಂದೃಢೀಕೃತ ಪತ್ರ ಒದಗಿಸಬೇಕು.
ಇದನ್ನೂ ಓದಿ- ಶಿವಮೊಗ್ಗದಲ್ಲಿ ಸಂಚಾರ ನಿಯಮ ಉಲ್ಲಂಘಿಸಿದರೆ ಮನೆಗೆ ನೊಟೀಸ್, ಯೋಜನೆ ಜಾರಿಗೆ ದಿನಾಂಕ ಫಿಕ್ಸ್
ಸೆ.15 ರೊಳಗಾಗಿ ಇಲಾಖಾ ಕಚೇರಿಗೆ ಅರ್ಜಿಯನ್ನು ಸಲ್ಲಿಸುವಂತೆ ಕಾರ್ಮಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಇಲಾಖೆ ಕಚೇರಿ 08182-248940ನ್ನು ಸಂಪರ್ಕಿಸುವುದು.
LATEST NEWS
- ಭದ್ರಾವತಿಯ ತರೀಕೆರೆ ರಸ್ತೆಯಲ್ಲಿ ಅಗ್ನಿ ಅವಘಡ, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಆಹುತಿ

- ಕಲ್ಲು ಬಂಡೆ ಬಿದ್ದು ಕೃಷಿಕ ಸ್ಥಳದಲ್ಲೇ ಸಾವು

- ಹೆಗಲತ್ತಿಯಲ್ಲಿ ನಾಗಯಕ್ಷೆ ದೇವಾಲಯದ 12ನೇ ವಾರ್ಷಿಕೋತ್ಸವ, ಇವತ್ತು ಪಲ್ಲಕ್ಕಿ ಉತ್ಸವ

- ಶಿವಮೊಗ್ಗ ಜಿಲ್ಲೆಯಲ್ಲಿ ರಣ ಬಿಸಿಲು, ತಾಪಮಾನ ಹೆಚ್ಚಳ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ಉಷ್ಣಾಂಶ?

- ತುಂಗಾ ಚಾನಲ್ ಬಳಿ ಸ್ಕೂಟಿ ನಿಲ್ಲಿಸಿಕೊಂಡಿದ್ದವರ ಮೇಲೆ ಪೊಲೀಸ್ ದಾಳಿ, ಒಬ್ಬ ಎಸ್ಕೇಪ್, ಮತ್ತೊಬ್ಬ ಅರೆಸ್ಟ್

About The Editor
ನಿತಿನ್ ಆರ್.ಕೈದೊಟ್ಲು





