ನಿರುದ್ಯೋಗಿಗಳಿಗೆ ಗುಡ್‌ ನ್ಯೂಸ್‌, 10 ದಿನ ಊಟ, ವಸತಿ ಸಹಿತ ಉಚಿತ ತರಬೇತಿ, ನೋಂದಣಿ ಆರಂಭ

 ಶಿವಮೊಗ್ಗ  LIVE 

ಶಿವಮೊಗ್ಗ: ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್‌ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಜನವರಿ 5ರಿಂದ 10 ದಿನ ನಿರುದ್ಯೋಗಿ ಪುರುಷರು ಮತ್ತು ಮಹಿಳೆಯರಿಗೆ ಉಚಿತ ಅಣಬೆ ಬೇಸಾಯ (Mushroom Farming) ತರಬೇತಿ ಶಿಬಿರ ಏರ್ಪಡಿಸಲಾಗಿದೆ.

ಇದನ್ನೂ ಓದಿ » ಶಿವಮೊಗ್ಗ ಹಾಲು ಒಕ್ಕೂಟಕ್ಕೆ ಲೋಕಾಯುಕ್ತ ತಂಡ ದಿಢೀರ್‌ ಭೇಟಿ, ಪರಿಶೀಲನೆ

ಸ್ವಯಂ ಉದ್ಯೋಗಿಗಳಾಗ ಬಯಸುವ 18 ರಿಂದ 50 ವರ್ಷದೊಳಗಿನವರು ಭಾಗವಹಿಸಬಹುದು. ತರಬೇತಿ, ಊಟ ಹಾಗೂ ವಸತಿ ಉಚಿತವಾಗಿರುತ್ತದೆ. ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು. ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ಆಸಕ್ತರು ಡಿ.30ರಂದು ಬೆಳಗ್ಗೆ 10ಗಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ(ಅಂಚೆ), ಹೊಸಕೋಟೆ ತಾಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಇಲ್ಲಿಗೆ ದಾಖಲೆಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಬಹುದು.

ಸಂದರ್ಶನಕ್ಕೆ ಬರಲು ಸಾಧ್ಯವಾಗದವರು ಡಿ.30ರೊಳಗೆ ಸಂಸ್ಥೆಯ 89704 76050, 95915 14154 ಸಂಪರ್ಕಿಸಿ ಹೆಸರು ನೋಂದಾಯಿಸಿಕೊಳ್ಳಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment