ಶಿವಮೊಗ್ಗದಲ್ಲಿ ಹಣ್ಣು ಮೇಳ, ಅಪರೂಪದ ಮಾವು, ಹಲಸು ಮಾರಾಟ, ಯಾವೆಲ್ಲ ವೆರೈಟಿಯ ಹಣ್ಣುಗಳಿವೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಜಿಲ್ಲಾ ಹಾಪ್‌ಕಾಮ್ಸ್‌, ಜಿಲ್ಲಾ ತೋಟಗಾರಿಕೆ ಬೆಳೆಗಾರರ ಉತ್ಪನ್ನ ಮಾರಾಟ ಮತ್ತು ಸಂಸ್ಕರಣಾ ಸಹಕಾರ ಸಂಘದಿಂದ ವಿನೋಬನಗರದ ಎಪಿಎಂಸಿ ಆವರಣದ ಪಕ್ಕದಲ್ಲಿ ಹಣ್ಣು ಮೇಳ ಆಯೋಜಿಸಲಾಗಿದೆ. ಇಲ್ಲಿ ಅಪರೂಪದ ತಳಿಯ ಮಾವು, ಹಲಸು ಮತ್ತು ಇತರೆ ಹಣ್ಣುಗಳ (Fruits Mela) ಮಾರಾಟ ಮತ್ತು ಪ್ರದರ್ಶನಕ್ಕೆ ಮಾಡಲಾಗುತ್ತಿದೆ.

ವಿವಿಧ ಹಣ್ಣುಗಳ ಮಾರಾಟಕ್ಕೆ ಹತ್ತು ಮಳಿಗೆಗಳನ್ನು ಸ್ಥಾಪಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಇವತ್ತು ಹಣ್ಣು ಮೇಳಕ್ಕೆ ಚಾಲನೆ ನೀಡಿದರು. ಮೇ 24 ಮತ್ತು 25ರಂದು ಹಣ್ಣು ಮೇಳ ನಡೆಯಲಿದೆ.

Fruits Mela at Shimoga MAMCOS

ರಾಜ್ಯದ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಇಂತಹ ಮೇಳ ಆಯೋಜಿಸಬೇಕು. ಮೇಳಗಳಿಂದ ಅಪರೂಪದ ಎಲ್ಲಾ ತಳಿಯ ಹಣ್ಣುಗಳು ಜನರಿಗೆ ದೊರೆಯಲಿವೆ. ಮಧ್ಯವರ್ತಿಗಳ ಹಾವಳಿಯಿಲ್ಲದೇ ರೈತರು ತಮ್ಮ ಉತ್ಪನ್ನಗಳನ್ನು ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡಬಹುದಾಗಿದೆ. ಇದು ರೈತರಿಗೆ ಲಾಭದಾಯಕ.

– ಮಧು ಬಂಗಾರಪ್ಪ, ಸಚಿವ

Fruits Mela at Shimoga MAMCOS

ಆರೋಗ್ಯ ಕಾಪಾಡಿಕೊಳ್ಳಲು ದೈನಂದಿನ ಆಹಾರದಲ್ಲಿ ಪೌಷ್ಟಿಕಾಂಶಯುಕ್ತ ಹಣ್ಣು, ತರಕಾರಿಗಳನ್ನು ಹೆಚ್ಚು ಪ್ರಮಾಣದಲ್ಲಿ ಬಳಸಬೇಕು. ರಸಾಯನಿಕ ಮುಕ್ತ ಮಾವು, ಹಲಸನ್ನು ಸೇವಿಸುವುದು ಉತ್ತಮ.  

– ಡಾ. ಧನಂಜಯ ಸರ್ಜಿ, ವಿಧಾನ ಪರಿಷತ್‌ ಸದಸ್ಯ

ಗಮನ ಸೆಳೆದ ಮಿಯಾಝಾಕಿ

ಜಪಾನ್‌ ದೇಶದಲ್ಲಿ ಅತ್ಯಂತ ಬೇಡಿಕೆ ಇರುವ ಮಿಯಾಝಾಕಿ ಮಾವು ಇಲ್ಲಿ ಪ್ರದರ್ಶನಕ್ಕೆ ಇರಿಸಲಾಗಿದೆ. ಅಲ್ಲಿ ಮಿಯಾಝಾಕಿ ಮಾವಿನ ಹಣ್ಣಿಗೆ ಪ್ರತಿ ಕೆ.ಜಿ.ಗೆ ಎರಡು ಲಕ್ಷ ರೂ.ವರೆಗು ಬೆಲೆ ಇದೆ ಎಂದು ವ್ಯಾಪಾರಿಗಳು ತಿಳಿಸಿದ್ದಾರೆ. ಮಿಯಾಝಾಕಿ ಹಣ್ಣಿನ ದುಬಾರಿ ದರದ ಮಾಹಿತಿ ತಿಳಿದು ಸಚಿವ ಮಧು ಬಂಗಾರಪ್ಪ ಸೇರಿದಂತೆ ಜನಪ್ರತಿನಿಧಿಗಳು ಬೆರಗುಗೊಂಡರು.

Fruits Mela at Shimoga MAMCOS

ರತ್ನಗಿರಿ ಮಾವು, ಕೊಪ್ಪಳ ಹಾಗೂ ಧಾರವಾಡ ಕೇಸರ್, ರೆಡ್ ಐವರಿ ಮಾವು, ಅಪ್ಪೆ, ಅಪೂಸ್, ಮಲ್ಲಿಕಾ, ಮಲಗೋವಾ ಸೇರಿದಂತೆ ವಿವಿಧ ತಳಿಯ ಮಾವುಗಳನ್ನು ಪ್ರದರ್ಶನಕ್ಕೆ ಇಡಲಾಗಿದೆ. ಪ್ರತಿ ಸ್ಟಾಲ್‌ಗಳಿಗೂ ತೆರಳುತ್ತಿದ್ದ ಸಾರ್ವಜನಿಕರು ಮಾವಿನ ಹಣ್ಣುಗಳ ತಳಿ, ಅವುಗಳ ವಿಶೇಷತೆ ಬಗ್ಗೆ ಮಾಹಿತಿ ಪಡೆದರು.

Fruits Mela at Shimoga MAMCOS

ಹಲಸಿನ ಹಣ್ಣಿನಲ್ಲಿ ಕೆಳದಿ ಮಹಾರಾಜ ಹಲಸು, ಇಕ್ಕೇರಿ ಬಕ್ಕೆ, ಸರಗುಂದ ಬಕ್ಕೆ, ಕಾನಗೋಡು ಬಕ್ಕೆ, ರುದ್ರಾಕ್ಷಿ ಹಲಸು, ಬಿಟಿಎನ್ ಸೆಲೆಕ್ಷನ್, ಬೇಳೂರು ಚಂದ್ರ ಬಕ್ಕೆ, ಬಾಪಟ್ ಬಕ್ಕೆ, ಮಂಕಳಲೆ ರೆಡ್ ಸೇರಿದಂತೆ ವಿವಿಧ ಅಪರೂಪದ ಹಲಸಿನ ತಳಿಗಳು ಮೇಳದಲ್ಲಿ ಮಾರಾಟಕ್ಕೆ ಇಡಲಾಗಿತ್ತು.

Fruits Mela at Shimoga MAMCOS

ಮಾವು, ಹಲಸು ಮಾತ್ರವಲ್ಲದೆ ಮೇಳದಲ್ಲಿ ವಾಟರ್ ಆಪಲ್, ಕಾಲಿಪಟ್ಟಿ ಸಪೋಟ, ಅಂಜೂರ, ದಾಳಿಂಬೆ, ಸೇಬು, ಪೈನಾಪಲ್, ನೇಂದ್ರ ಬಾಳೆ, ಚಂದ್ರಬಾಳೆ, ಡ್ರಾಗನ್ ಫ್ರೂಟ್, ಅವಕಾಡೊ, ಸ್ಟಾರ್ ಫ್ರೂಟ್, ವೈಟ್ ಜಾಮೂನ್, ಸಪೋಟ ಹಣ್ಣಿನ ಜತೆಯಲ್ಲಿ ತರಕಾರಿ, ಹೂವಿನ ಬೀಜಗಳು, ವಿವಿಧ ಹೂವಿನ ಸಸಿಗಳನ್ನು ಮಾರಾಟಕ್ಕೆ ಇಡಲಾಗಿದೆ.

Fruits Mela at Shimoga MAMCOS

ಹಾಪ್‌ಕಾಮ್ಸ್‌ ರಾಜ್ಯಾಧ್ಯಕ್ಷ ಬಿ.ಡಿ.ಭೂಕಾಂತ್‌, ಜಿಲ್ಲಾ‍ಧ್ಯಕ್ಷ ವಿಜಯಕುಮಾರ್‌, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಹೇಮಂತ್, ಹಾಪ್‌ಕಾಮ್ಸ್‌ ವ್ಯವಸ್ಥಾಪಕ ನಿರ್ದೇಶಕ ಅಕ್ಷಯ್‌, ಪ್ರಸನ್ನ ಕುಮಾರ್‌ಮತ್ತಿತರರು ಉಪಸ್ಥಿತರಿದ್ದರು.

Fruits Mela at Shimoga MAMCOS

JNNCE-ADMISSION-2025-26

Fruits Mela at Shimoga MAMCOS

m7

Fruits Mela at Shimoga MAMCOS

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

Fruits Mela at Shimoga MAMCOS

Fruits Mela at Shimoga MAMCOS

Fruits Mela at Shimoga MAMCOS

Fruits Mela at Shimoga MAMCOS

Fruits Mela at Shimoga MAMCOS

ಇದನ್ನೂ ಓದಿ » ಶಿವಮೊಗ್ಗದಿಂದ ಲಕ್ಷ ಲಕ್ಷ ಮೌಲ್ಯದ ಅಡಿಕೆ ಹೊತ್ತು ಸಾಗಿದ ಲಾರಿ ನಾಪತ್ತೆ, ಡ್ರೈವರ್‌ ಮೊಬೈಲ್‌ ಸ್ವಿಚ್‌ ಆಫ್‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 24, 2025

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

Leave a Comment