ಶಿವಮೊಗ್ಗ: ವಿನೋಬನಗರದ 100 ಅಡಿ ರಸ್ತೆಯಲ್ಲಿರುವ ಎಪಿಎಂಸಿ ಪ್ರಾಂಗಣದಲ್ಲಿ ಮಾವು ಮತ್ತು ಹಲಸಿನ ಮೇಳ (Fruits Mela) ಆಯೋಜಿಸಲಾಗಿದೆ. ಮೇ 24 ಮತ್ತು 25ರಂದು ಮೇಳ ನಡೆಯಲಿದೆ. ರಾಜ್ಯದ ವಿವಿಧೆಡೆಯ ಹತ್ತಕ್ಕೂ ಹೆಚ್ಚು ತಳಿಯ ಹಣ್ಣುಗಳು ಇಲ್ಲಿ ಲಭ್ಯವಿರಲಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್ ಟು ಸ್ಕೂಲ್ ಆಫರ್, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್?
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಾಪ್‌ಕಾಮ್ಸ್ ಅಧ್ಯಕ್ಷ ಆರ್.ವಿಜಯಕುಮಾರ್, ಹಾಪ್‌ಕಾಮ್ಸ್, ರಾಜ್ಯ ಸಹಕಾರಿ ತೋಟಗಾರಿಕಾ ಮಾರಾಟ ಮಹಾಮಂಡಳದ ಸಹಯೋಗದಲ್ಲಿ ಮಾವು ಮತ್ತು ಹಲಸಿನ ಮೇಳ ಆಯೋಜಿಸಲಾಗಿದೆ. ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ವಿವಿಧೆಡೆಯ ಹತ್ತಕ್ಕೂ ಹೆಚ್ಚು ಬಗೆಯ ಹಣ್ಣುಗಳು ಇಲ್ಲಿ ದೊರೆಯಲಿವೆ. ಸಖರಾಯಪಟ್ಟಣದಿಂದ ಹಲಸು ಬರಲಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಶಿವಮೊಗ್ಗ ಹಾಪ್‌ಕಾಮ್ಸ್ ಉಪಾಧ್ಯಕ್ಷ ನಾಗೇಶ ನಾಯ್ಕ್, ವ್ಯವಸ್ಥಾಪಕ ನಿರ್ದೇಶಕ ಅಕ್ಷಯ್, ನಿರ್ದೇಶಕ ಉಂಬ್ಳೆಬೈಲು ಮೋಹನ್, ಮುನಿಸ್ವಾಮಿ, ಕಾಳರಾಜ್ ಇದ್ದರು.
ಇದನ್ನೂ ಓದಿ » ಮುಡುಬಾದಿಂದ ಬಸ್ಸಿನಲ್ಲಿ ಬಂದು ಶಿವಮೊಗ್ಗದಲ್ಲಿ ಇಳಿದ ಮಹಿಳೆಗೆ ಕಾದಿತ್ತು ಆಘಾತ, ಆಗಿದ್ದೇನು?

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200