ಶಿವಮೊಗ್ಗ: ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಹೆಚ್.ಎಂ. ಚಂದ್ರಶೇಖರಪ್ಪ (78) ಅವರು ಅನಾರೋಗ್ಯದಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಇಂದು ಸಂಜೆ 6:15ಕ್ಕೆ ನಿಧನರಾಗಿದ್ದಾರೆ. ಇಂದು ರಾತ್ರಿ ಅವರ ಪಾರ್ಥೀವ ಶರೀರವನ್ನು ಶಿವಮೊಗ್ಗಕ್ಕೆ ತರಲಾಗುತ್ತಿದ್ದು, ಜುಲೈ 27ರ ಸಂಜೆ 4 ಗಂಟೆಗೆ ಹೊಸಳ್ಳಿಯ ಅವರ ತೋಟದಲ್ಲಿ ವೀರಶೈವ ಲಿಂಗಾಯತ ಪದ್ಧತಿಯಂತೆ ಅಂತ್ಯಸಂಸ್ಕಾರ ನೆರವೇರಲಿದೆ.
ಶಿವಮೊಗ್ಗದಲ್ಲಿ ಹೆಚ್.ಎಂ.ಚಂದ್ರಶೇಖರಪ್ಪ ಅವರ ಪಾರ್ಥೀವ ಶರೀರದ ಸಾರ್ವಜನಿಕ ದರ್ಶನಕ್ಕೆ ಸಿದ್ಧತೆ ಮಾಡಲಾಗುತ್ತಿದೆ. ಜುಲೈ 27ರಂದು ಬೆಳಗ್ಗೆ 9:30ಕ್ಕೆ ಬಸವನಗುಡಿ ಮುಖ್ಯರಸ್ತೆಯಲ್ಲಿರುವ ಅವರ ಮನೆಯಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಇರಲಿದೆ ಎಂದು ಕಾಂಗ್ರೆಸ್ ಉತ್ತರ ಬ್ಲಾಕ್ ಅಧ್ಯಕ್ಷ ಶಿವಕುಮಾರ್ ತಿಳಿಸಿದ್ದಾರೆ. ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.
ಮನೆ ಬಳಿ ನೀರವ ಮೌನ
ಬಸವನಗುಡಿಯಲ್ಲಿರುವ ಹೆಚ್.ಎಂ.ಚಂದ್ರಶೇಖರಪ್ಪ ಅವರ ನಿವಾಸದ ಬಳಿ ಮೌನ ಆವರಿಸಿದೆ. ಕುಟುಂಬದವರು ಈಗಾಗಲೇ ಬೆಂಗಳೂರಿನಲ್ಲಿ ಇದ್ದಾರೆ. ನಿಧನದ ವಿಷಯ ತಿಳಿಯುತ್ತಿದ್ದಂತೆ ಹೆಚ್.ಎಂ. ಚಂದ್ರಶೇಖರಪ್ಪ ಅವರ ಸಂಬಂಧಿಗಳು, ಸ್ನೇಹಿತರು, ಬೆಂಬಲಿಗರು ಮನೆ ಬಳಿ ಆಗಮಿಸಿದ್ದಾರೆ.
