ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 22 SEPTEMBER 2023
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA : ಗಣಪತಿ ಮೆರವಣಿಗೆ (Ganapathi Procession) ವೇಳೆ ಎರಡು ಗುಂಪುಗಳ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು ಪರಿಸ್ಥಿತಿ ತಿಳಿಗೊಳಿಸಿದ್ದಾರೆ.
ಶಿವಮೊಗ್ಗ ನಗರದ ಟ್ಯಾಂಕ್ ಮೊಹಲ್ಲಾದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗಣಪತಿಯ (Ganapathi Procession) ವಿಸರ್ಜನೆಗೆ ಮೆರವಣಿಗೆ ನಡೆಸಲಾಗುತ್ತಿತ್ತು. ಮೆರವಣಿಗೆಯಲ್ಲಿ ಪೇಪರ್ ಬ್ಲಾಸ್ಟ್ ಬಳಸಲಾಗಿತ್ತು. ಇದರಿಂದ ಬಣ್ಣ ಬಣ್ಣದ ಪೇಪರ್ ಚೂರುಗಳು ಹಾರಲಿದ್ದು ಅಲಂಕಾರಿಕವಾಗಿ ಕಾಣುತ್ತದೆ.
ಟ್ಯಾಂಕ್ ಮೊಹಲ್ಲಾದ ಮಸೀದಿ ಸಮೀಪ ಮೆರವಣಿಗೆ ಸಾಗುತ್ತಿದ್ದ ವೇಳೆ ಪೇಪರ್ ಬ್ಲಾಸ್ಟ್ ಮಾಡದಂತೆ ಸ್ಥಳೀಯರು ಕೆಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ. ಇದೆ ವಿಚಾರವಾಗಿ ಎರಡು ಗುಂಪುನ ಮಧ್ಯೆ ಮಾತಿಗೆ ಮಾತು ಬೆಳೆದಿದೆ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಜನತಾ ದರ್ಶನಕ್ಕೆ ದಿನಾಂಕ, ಸ್ಥಳ ನಿಗದಿ, ಸಮಸ್ಯೆ ಹೇಳಿಕೊಳ್ಳಲು ಜನರಿಗಿದೆ ಮುಕ್ತ ಅವಕಾಶ
ವಿಚಾರ ತಿಳಿದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್, ಹೆಚ್ಚುವರಿ ರಕ್ಷಣಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸಿದರು. ಗಣಪತಿ ಮೆರವಣಿಗೆಗೆ ಅವಕಾಶ ಕಲ್ಪಿಸಲಾಯಿತು. ಮುಂಜಾಗ್ರತ ಕ್ರಮವಾಗಿ ಟ್ಯಾಂಕ್ ಮೊಹಲ್ಲಾದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.