ಬೆಳಗಿನ ಜಾವದವರೆಗೂ ಮೆರವಣಿಗೆ, ವಿಸರ್ಜನೆ ವಿಡಿಯೋ ವೈರಲ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SHIMOGA | ಹಿಂದೂ ಸಂಘಟನೆಗಳ ಮಹಾಮಂಡಳದ (HINDU MAHASABHA) ಗಣಪತಿಯನ್ನು ಇವತ್ತು ಬೆಳಗಿನ ಜಾವ ವಿಸರ್ಜನೆ ಮಾಡಲಾಯಿತು. ತುಂಗಾ ನದಿಯಲ್ಲಿ (TUNGA RIVER) ಗಣಪತಿ ಮೂರ್ತಿ ವಿಸರ್ಜಿಸಲಾಯಿತು.

Shimoga Nanjappa Hospital

ಕೋಟೆ ಶ್ರೀ ಭೀಮೇಶ್ವರ ದೇವಸ್ಥಾನದ ಹಿಂಭಾಗ ತುಂಗಾ ನದಿಯಲ್ಲಿ ಬೆಳಗಿನ ಜಾವ 4 ಗಂಟೆ ಹೊತ್ತಿಗೆ ವಿಸರ್ಜಿಸಲಾಯಿತು. ಮಹಾಮಂಡಳದ ಪ್ರಮುಖರು, ಸಾರ್ವಜನಿಕರ ಈ ಸಂದರ್ಭ ಹಾಜರಿದ್ದರು.

ವಿಸರ್ಜನೆಯ ವಿಡಿಯೋ VIRAL

ಗಣಪತಿ ವಿಸರ್ಜನೆಯ ವಿಡಿಯೋ, ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕೋಟೆ ಶ್ರೀ ಪಾರ್ವತಿ ಭೀಮೇಶ್ವರ ದೇವಸ್ಥಾನದ ಹಿಂಭಾಗದ ಮಂಟಪದ ಬಳಿ ಗಣಪತಿ ಮೂರ್ತಿಯನ್ನು ಕೊಂಡೊಯ್ಯುವ ವಿಡಿಯೋ, ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಷೇರ್ ಆಗುತ್ತಿವೆ.

ಇಡೀ ದಿನ, ಇಡೀ ರಾತ್ರಿ ಮೆರವಣಿಗೆ

ಶುಕ್ರವಾರ ಬೆಳಗ್ಗೆ 10 ಗಂಟೆ ಹೊತ್ತಿಗೆ ಹಿಂದೂ ಸಂಘಟನೆಗಳ ಮಹಾಮಂಡಳದ ಗಣಪತಿಯ ಮೆರವಣಿಗೆ ಆರಂಭವಾಯಿತು. ಮೆರವಣಿಗೆ ಮಧ್ಯಾಹ್ನದ 2 ಗಂಟೆ ಹೊತ್ತಿಗೆ ರಾಮಣ್ಣ ಶ್ರೇಷ್ಠಿ ಪಾರ್ಕ್ ತಲುಪಿತು. ರಾತ್ರಿ 8 ಗಂಟೆ ಹೊತ್ತಿಗೆ ಅಮೀರ್ ಅಹಮದ್ ಸರ್ಕಲ್, ರಾತ್ರಿ 10 ಗಂಟೆ ಹೊತ್ತಿಗೆ ಗೋಪಿ ಸರ್ಕಲ್ ತಲುಪಿತು. ಅಲ್ಲಿಂದ ದುರ್ಗಿಗುಡಿ, ಕುವೆಂಪು ರಸ್ತೆ, ಸವಳಂಗ ರೋಡ್, ಕಾನ್ವೆಂಟ್ ರಸ್ತೆ, ಕೋಟೆ ರಸ್ತೆ ಮೂಲಕ ಶ್ರೀ ಭೀಮೇಶ್ವರ ದೇವಸ್ಥಾನದ ಬಳಿ ತಲುಪಿತು.

ನಡುರಾತ್ರಿಯು ಜನರು ರಸ್ತೆಯ ಇಕ್ಕೆಲಗಳಲ್ಲಿ ನಿಂತು ಗಣಪತಿಯ ದರ್ಶನ ಪಡೆದು, ಪೂಜೆ ಸಲ್ಲಿಸಿದರು.

ಕ್ಲಿಕ್ ಮಾಡಿ ಇದನ್ನೂ ಓದಿ ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ, FULL PHOTOS

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment