ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 18 SEPTEMBER 2023
SHIMOGA : ನಗರದಾದ್ಯಂತ ಗಣೇಶ ಚತುರ್ಥಿಯನ್ನು (Ganesh Chaturthi) ಅದ್ಧೂರಿಯಿಂದ ಆಚರಿಸಲಾಗುತ್ತಿದೆ. ಹಲವು ಬಡಾವಣೆಗಳಲ್ಲಿ ಗಜಮುಖನನ್ನು ಪ್ರತಿಷ್ಠಾಪಿಸಲಾಗಿದ್ದು, ಪೂಜೆ, ನೈವೇದ್ಯ ಆರಂಭವಾಗಿದೆ. ದೇವಸ್ಥಾನಗಳಲ್ಲಿಯು ಮೋದಕ ಪ್ರಿಯನಿಗೆ ವಿಶೇಷ ಪೂಜೆ ನೆರವೇರಿಸಲಾಗುತ್ತಿದೆ.
ದೇಗುಲಗಳಲ್ಲಿ ಮೂಷಿಕ ವಾಹನಿಗೆ ಪೂಜೆ
ನಗರದ ರವೀಂದ್ರ ನಗರ ಶ್ರೀ ಗಣಪತಿ ದೇವಸ್ಥಾನ ಸೇರಿದಂತೆ ವಿವಿಧೆಡೆ ಗಣಪತಿಗೆ ಇವತ್ತು ವಿಶೇಷ ಪೂಜೆ, ಅಭಿಷೇಕ, ಅಲಂಕಾರ ಮಾಡಿ ಪೂಜೆ ಸಲ್ಲಿಸಲಾಯಿತು. ಬೆಳಗ್ಗೆಯಿಂದಲು ದೊಡ್ಡ ಸಂಖ್ಯೆಯ ಭಕ್ತರು ದೇವರ ದರ್ಶನ ಪಡೆದು ಭಕ್ತಿಯಿಂದ ಪೂಜೆ ಸಲ್ಲಿಸುತ್ತಿದ್ದಾರೆ. ಗೌರಿ ಹಬ್ಬದ ಹಿನ್ನೆಲೆ ಗೌರಿಯ ಮೂರ್ತಿಗೂ ಪೂಜೆ ನೆರವೇರಿಸಲಾಯಿತು.
ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆ
ವಿವಿಧ ಬಡಾವಣೆಗಳಲ್ಲಿ ಪೆಂಡಾಲ್ಗಳನ್ನು ನಿರ್ಮಿಸಿ ಗಣೇಶನ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗಿದೆ. ವಿವಿಧ ಬಗೆಯ ಅಲಂಕಾರಗಳು, ಮಂಟಪಗಳನ್ನು ನಿರ್ಮಿಸಲಾಗಿದೆ. ವಿವಿಧ ಬಗೆ ಮತ್ತು ಗಾತ್ರದ ಗಣಪತಿ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಲಾಗಿದೆ. ಸೈನ್ಸ್ ಮೈದಾನ, ಕುಂಬಾರ ಬೀದಿ ಸೇರಿದಂತೆ ವಿವಿಧೆಡೆ ಗಣಪತಿ ಮೂರ್ತಿಗಳನ್ನು ಖರೀದಿಸಿ, ಮೆರವಣಿಗೆ ಮೂಲಕ ವಿವಿಧ ಬಡಾವಣೆಗಳ ಪೆಂಡಾಲ್ವರೆಗೆ ತರಲಾಗಿದೆ. ಮೂರ್ತಿಯನ್ನು ಪ್ರತಿಷ್ಠಾಪಿಸಿ, ಪೂಜೆ ಸಲ್ಲಿಸಲಾಗಿದೆ.
ಹಿಂದೂ ಸಂಘಟನೆಗಳ ಗಣಪತಿ ಪ್ರತಿಷ್ಠಾಪನೆ
ಹಿಂದೂ ಸಂಘಟನೆಗಳ ಮಹಾ ಮಂಡಲದ ವತಿಯಿಂದ 79ನೇ ವರ್ಷದ ಗಣೇಶೋತ್ಸವವನ್ನು ಆಚರಿಸಲಾಗುತ್ತಿದೆ. ಕುಂಬಾರ ಬೀದಿಯಲ್ಲಿ ಗಣೇಶ ಅವರ ಮನೆಯಿಂದ ಕೋಟೆ ರಸ್ತೆ ಮೂಲಕ ಮೆರವಣಿಗೆಯಲ್ಲಿ ಗಣಪತಿ ಮೂರ್ತಿಯನ್ನು ತರಲಾಯಿತು. ಕೋಟೆ ಶ್ರೀ ಭೀಮೇಶ್ವರ ದೇವಸ್ಥಾನದಲ್ಲಿ ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪಿಸಲಾಯಿತು.
ಇನ್ನು, ಮನೆಗಳಲ್ಲು ಗೌರಿ ಮತ್ತು ಗಣಪತಿಯ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಪೂಜೆ ನೆರವೇರಿಸಲಾಯಿತು. ನಗರದಾದ್ಯಂತ ವಿಜೃಂಭಣೆಯಿಂದ ಗಣೇಶನಿಗೆ ಪೂಜೆ, ಧಾರ್ಮಿಕ ವಿಧಿ – ವಿಧಾನಗಳನ್ನು ನೆರವೇರಿಸಲಾಗುತ್ತಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ 2 ಸಾವಿರ ಅಡಿ ಉದ್ದದ ತ್ರಿವರ್ಣ ಧ್ವಜ ಮೆರವಣಿಗೆ, ಯಾಕೆ? ಸಭೆಯಲ್ಲಿ ಯಾರೆಲ್ಲ ಏನೇನು ಹೇಳಿದರು?
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422