ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಡಿಸೆಂಬರ್ 2021
ಗಾಂಜಾ ಸೇವನೆ ಮಾಡಿ ಖಾಸಗಿ ಬಸ್ ನಿಲ್ದಾಣ ಬಳಿ ಕುಳಿತಿದ್ದ ಯುವಕನೊಬ್ಬನನ್ನು ಪೊಲೀಸರು ಬಂಧಿಸಿ, ಪ್ರಕರಣ ದಾಖಲು ಮಾಡಿದ್ದಾರೆ.
ಶ್ರೀಧರ್ (19) ಎಂಬಾತನನ್ನು ಬಂಧಿಸಲಾಗಿದೆ. ದೊಡ್ಡಪೇಟೆ ಠಾಣೆ ಪಿಎಸ್ಐ ಸತೀಶ್ ನಾಯ್ಕ್, ಸಿಬ್ಬಂದಿ ಲಚ್ಚಾನಾಯ್ಕ ಅವರು ಗಸ್ತು ತಿರುಗುತ್ತಿದ್ದಾಗ ಬಸ್ ನಿಲ್ದಾಣದ ಬಳಿ ಯುವಕನೊಬ್ಬ ಅನುಮಾನಾಸ್ಪದವಾಗಿ ವರ್ತಿಸುತ್ತಿರುವುದನ್ನು ಗಮನಿಸಿದ್ದಾರೆ.
ವಿಚಾರಣೆ ಮಾಡಿದಾಗ ಆತ ಗಾಂಜಾ ಸೇವನೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ. ಯುವಕನನ್ನು ವಶಕ್ಕೆ ಪಡೆದು ಮೆಗ್ಗಾನ್ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಒಳಪಡಿಸಿದ್ದಾರೆ. ಆಗ ಗಾಂಜಾ ಸೇವನೆ ಮಾಡಿರುವುದು ಖಚಿತವಾಗಿದೆ. ಈ ಹಿನ್ನೆಲೆಯಲ್ಲಿ ಶ್ರೀಧರನ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






