ಖಾಸಗಿ ಶಾಲೆಯ ಅಡುಗೆ ಮನೆಯಲ್ಲಿ ಗ್ಯಾಲ್ ಲೀಕ್, ಪ್ರಾಣ ಪಣಕ್ಕಿಟ್ಟು ಕಾರ್ಯಾಚರಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

SHIVAMOGGA LIVE NEWS | 19 ಮಾರ್ಚ್ 2022

ಖಾಸಗಿ ಶಾಲೆಯೊಂದರ ವಸತಿ ನಿಲಯದ ಅಡುಗೆ ಮನೆಯಲ್ಲಿ ಗ್ಯಾಸ್ ಲೀಕ್ ಆಗಿದ್ದು ಕೆಲಕಾಲ ಆತಂಕಕ್ಕೆ ಕಾರಣವಾಗಿತ್ತು. ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ದೊಡ್ಡ ಅನಾಹುತ ತಪ್ಪಿಸಿದ್ದಾರೆ.

Shimoga Nanjappa Hospital

ಶಿವಮೊಗ್ಗದ ಅನುಪಿನಕಟ್ಟೆಯಲ್ಲಿ ಖಾಸಗಿ ಶಾಲೆಯೊಂದರ ವಸತಿ ನಿಲಯದಲ್ಲಿ ಕಳೆದ ರಾತ್ರಿ ಘಟನೆ ಸಂಭವಿಸಿದೆ. ಅಡುಗೆ ಮನೆಯಲ್ಲಿ ಬಳಕೆ ಮಾಡುತ್ತಿದ್ದ ಅಡುಗೆ ಅನಿಲ ಸೋರಿಕೆ ಆಗಿದೆ. ಗ್ಯಾಸ್ ವಾಸನೆ ಎಂದು ಗೊತ್ತಾಗುತ್ತಿದ್ದ ಹಾಗೆ ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿ ಮಾಹಿತಿ ನೀಡಲಾಗಿತ್ತು.

ಪ್ರಾಣ ಪಣಕ್ಕಿಟ್ಟು ಕಾರ್ಯಾಚರಣೆ

ಅಡುಗೆ ಅನಿಲ ಸೋರಿಕೆಯಿಂದಾಗಿ ಶಾಲೆ ಆವರಣದಲ್ಲಿ ಆತಂಕ ಸೃಷ್ಟಿಯಾಗಿತ್ತು. ಸಣ್ಣದೊಂದು ಯಡವಟ್ಟು ಸಂಭವಿಸಿದ್ದರೂ ದೊಡ್ಡ ಪ್ರಮಾಣದ ಹಾನಿಯಾಗುವ ಸಾದ್ಯತೆ ಇತ್ತು. ಅಗ್ನಿಶಾಮಕ ಸಿಬ್ಬಂದಿ ಪ್ರಾಣವನ್ನು ಪಣಕ್ಕಿಟ್ಟು ಕಾರ್ಯಾಚರಣೆ ನಡೆಸಿ ಅನಿಲ ಸೋರಿಕೆ ತಡೆದಿದ್ದಾರೆ.

ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಅಶೋಕ್ ಕುಮಾರ್, ಠಾಣಾಧಿಕಾರಿ ಪ್ರವೀಣ್ ಕುಮಾರ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು.  

ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

ಈ ಮೇಲ್ – shivamoggalive@gmail.com

WhatsApp Number – 7411700200

JNNCE VTU Ranking

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment