ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 15 APRIL 2024
ELECTION NEWS : ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ನಾಮಪತ್ರ ಸಲ್ಲಿಕೆ ಹಿನ್ನೆಲೆ ಶಿವಮೊಗ್ಗದಲ್ಲಿ ಮೆರವಣಿಗೆ ಮತ್ತು ಸಾರ್ವಜನಿಕ ಸಭೆ ಆಯೋಜಿಸಲಾಗಿತ್ತು. ನಗರದ ರಾಮಣ್ಣ ಶ್ರೇಷ್ಠಿ ಪಾರ್ಕ್ ಗಣಪತಿ ದೇಗುಲದಲ್ಲಿ ಪೂಜೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಲಾಯಿತು.

ರಾಮಣ್ಣ ಶ್ರೇಷ್ಠಿ ಪಾರ್ಕ್, ಗಾಂಧಿ ಬಜಾರ್, ಶಿವಪ್ಪನಾಯಕ ಪ್ರತಿಮೆ, ನೆಹರೂ ರಸ್ತೆ, ಗೋಪಿ ಸರ್ಕಲ್ ಮೂಲಕ ಸಾಗಿತು. ಬಾಲರಾಜ ಅರಸ್ ರಸ್ತೆಯಲ್ಲಿ ಬಹಿರಂಗ ಸಭೆ ನಡೆಸಲಾಯಿತು.
ಹೇಗಿತ್ತು? ಏನೇನಿತ್ತು ಮೆರವಣಿಗೆಯಲ್ಲಿ?
ಲೋಕಸಭೆ ಕ್ಷೇತ್ರದ ವಿವಿಧೆಡೆಯಿಂದ ದೊಡ್ಡ ಸಂಖ್ಯೆಯ ಕಾಂಗ್ರೆಸ್ ಕಾರ್ಯಕರ್ತರು ಆಗಮಿಸಿದ್ದರು. ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರೊಂದಿಗೆ ನಟ ಶಿವರಾಜ್ ಕುಮಾರ್, ಸಚಿವ ಮಧು ಬಂಗಾರಪ್ಪ, ಶಾಸಕರಾದ ಬಿ.ಕೆ.ಸಂಗಮೇಶ್ವರ, ಬೇಳೂರು ಗೋಪಾಲಕೃಷ್ಣ ಸೇರಿದಂತೆ ಕಾಂಗ್ರೆಸ್ ಮುಖಂಡರು ಇದ್ದರು. ಮೆರವಣಿಗೆಯಲ್ಲಿ ವಿವಿಧ ಕಲಾ ತಂಡಗಳು ಭಾಗವಹಿಸಿದ್ದವು.

ಶಿವಣ್ಣನ ಫೋಟೊಗೆ ಮುಗಿಬಿದ್ದ ಜನ
ಮೆರವಣಿಗೆಯ ಹಾದಿ ಉದ್ದಕ್ಕು ನಟ ಶಿವರಾಜ್ ಕುಮಾರ್ ಅವರ ಫೋಟೊಗೆ ಜನರು ಮಗಿಬಿದ್ದರು. ರಸ್ತೆಯ ಇಕ್ಕೆಲದಲ್ಲಿ ನಿಂತ ಜನರು ತಮ್ಮ ಮೊಬೈಲ್‌ಗಳಲ್ಲಿ ಫೋಟೊ, ಸೆಲ್ಫಿ ಕ್ಲಿಕ್ಕಿಸಿಕೊಂಡರು. ಶಿವಣ್ಣ ಎಂದು ಜನರು ಜೋರಾಗಿ ಕೂಗಿ ಅವರ ಗಮನ ಸೆಳೆಯಲು ಯತ್ನಿಸುತ್ತಿದ್ದು ಸಮಾನ್ಯವಾಗಿತ್ತು.

ರಣ ಬಿಸಲಿನಲ್ಲಿ ನಡೆದ ಜನ
ಇನ್ನು, ವಿಪರೀತ ಬಿಸಿಲಿನಲ್ಲಿ ಜನರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಜನರು ಬಾಯಾರಿಕೆ ತಡೆಯಲಾಗಿದೆ ಅಲ್ಲಲ್ಲಿ ಅಂಗಡಿಗಳಲ್ಲಿ ನೀರು, ಪಾನೀಯ ಖರೀದಿಗೆ ಮುಗಿಬಿದ್ದಿದ್ದರು. ಕಾಂಗ್ರೆಸ್ ಪಕ್ಷದ ವತಿಯಿಂದ ನೀರು ವಿತರಣೆ ಮಾಡಲಾಯಿತು. ಆದರೆ ಅದು ಸಾಕಾಗದರೆ ಜನರು ಪರಿತಪಿಸಿದರು.

ಇದನ್ನೂ ಓದಿ – ಬೆಂಗಳೂರಿನಲ್ಲಿರುವ ಶಿವಮೊಗ್ಗದವರ ಮತಗಳಿಗೆ ಲಗ್ಗೆ ಹಾಕಿದ ಬಿಜೆಪಿ, ಸಮ್ಮಿಲನದಲ್ಲಿ ಯಾರೆಲ್ಲ ಏನೇನು ಹೇಳಿದರು?
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















